AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾರಿಗೆ ಮುಷ್ಕರ: ಸಚಿವ ಲಕ್ಷ್ಮಣ ಸವದಿ ನೇತೃತ್ವದ ಸಭೆ ಅರ್ಧಕ್ಕೆ ಸ್ಥಗಿತ

ಸಾರಿಗೆ ಸಚಿವ ಲಕ್ಷ್ಮಣ ಸವದಿ ನೇತೃತ್ವದಲ್ಲಿ ಯೂನಿಯನ್​ ನಾಯಕರ ಜೊತೆ ನಡೆದ ಸಭೆ ಅರ್ಧಕ್ಕೆ ಸ್ಥಗಿತಗೊಂಡಿದೆ. ಅಧಿಕಾರಿಗಳ ಜೊತೆ ಚರ್ಚೆ ನಡೆಸಲು ಸವದಿ ಸಭೆಯನ್ನು ಅರ್ಧಕ್ಕೆ ಬಿಟ್ಟು ತೆರಳಿದರು ಎಂದು ತಿಳಿದುಬಂದಿದೆ.

ಸಾರಿಗೆ ಮುಷ್ಕರ: ಸಚಿವ ಲಕ್ಷ್ಮಣ ಸವದಿ ನೇತೃತ್ವದ ಸಭೆ ಅರ್ಧಕ್ಕೆ ಸ್ಥಗಿತ
ಸಾರಿಗೆ ಸಚಿವ ಲಕ್ಷ್ಮಣ ಸವದಿ ನೇತೃತ್ವದಲ್ಲಿ ನಡೆದ ಸಭೆ
Follow us
KUSHAL V
|

Updated on:Dec 13, 2020 | 1:14 PM

ಬೆಂಗಳೂರು: ಸಾರಿಗೆ ಸಚಿವ ಲಕ್ಷ್ಮಣ ಸವದಿ ನೇತೃತ್ವದಲ್ಲಿ ಯೂನಿಯನ್​ ನಾಯಕರ ಜೊತೆ ನಡೆದ ಸಭೆ ಅರ್ಧಕ್ಕೆ ಸ್ಥಗಿತಗೊಂಡಿದೆ. ಅಧಿಕಾರಿಗಳ ಜೊತೆ ಚರ್ಚೆ ನಡೆಸಲು ಸವದಿ ಸಭೆಯನ್ನು ಅರ್ಧಕ್ಕೆ ಬಿಟ್ಟು ತೆರಳಿದರು ಎಂದು ತಿಳಿದುಬಂದಿದೆ.

ಈ ನಡುವೆ, ನಾವು ಯಾರೂ ಸಾರಿಗೆ ಮುಷ್ಕರಕ್ಕೆ ಕರೆ ಕೊಟ್ಟಿಲ್ಲ. ನಮ್ಮ ನೌಕರರು ಕೆಲಸ ಮಾಡಲು ಸಿದ್ಧರಿದ್ದಾರೆ. ಮುಷ್ಕರಕ್ಕೆ ಕರೆ ಕೊಟ್ಟವರೊಂದಿಗೆ ಚರ್ಚೆ ಮಾಡಬೇಕು. ಅವರ ಜೊತೆ ಚರ್ಚಿಸಿದರೆ ಸಮಸ್ಯೆ ಇತ್ಯರ್ಥವಾಗಬಹುದು ಎಂದು ಯೂನಿಯನ್‌ಗಳ ನಾಯಕರಿಂದ ಸವದಿಗೆ ಮಾಹಿತಿ ಸಿಕ್ಕಿದೆ ಎಂದು ಹೇಳಲಾಗಿದೆ.

ಸಿಎಂ ನಿವಾಸಕ್ಕೆ ಸವದಿ ದೌಡು ಸಭೆ ಬಳಿಕ ಅಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಿದ ಸಾರಿಗೆ ಸಚಿವ ಲಕ್ಷ್ಮಣ ಸವದಿ ಸಿಎಂ ನಿವಾಸಕ್ಕೆ ತೆರಳಿದರು. ಸಭೆಯಲ್ಲಿ ಮಾಹಿತಿ ಕಲೆಹಾಕಿ ಸಿಎಂ ಮನೆಗೆ ತೆರಳಿದ ಸವದಿ ಸಭೆಯ ಮಾಹಿತಿಯನ್ನು ಯಡಿಯೂರಪ್ಪಗೆ ನೀಡಲಿದ್ದಾರೆ ಎಂದು ಹೇಳಲಾಗಿದೆ.

‘ಸಾರಿಗೆ ಸಿಬ್ಬಂದಿ ಬೇಡಿಕೆ ಈಡೇರಿಸುವ ಭರವಸೆ ನೀಡಲಿ’ ಇತ್ತ, ಸಭೆ ನಂತರ ಮಾತನಾಡಿದ ಎಐಟಿಯುಸಿ ಅಧ್ಯಕ್ಷ ಅನಂತ ಸುಬ್ಬರಾವ್ ಸಾರಿಗೆ ಸಿಬ್ಬಂದಿ ಬೇಡಿಕೆ ಈಡೇರಿಸುವ ಭರವಸೆ ನೀಡಲಿ. ಸರ್ಕಾರ ಭರವಸೆ ನೀಡಿದರೆ ಬಸ್ ಓಡಿಸಲು ಹೇಳುತ್ತೇವೆ ಎಂದು ಹೇಳಿದರು.

ಸಂಬಳ ಹೆಚ್ಚಳದ ಬಗ್ಗೆ ನಾವು ಒಪ್ಪುವ ನಿರ್ಧಾರ ಮಾಡಲಿ. ರಾಜ್ಯ ಸರ್ಕಾರ ಈ ಸಂಬಂಧ ನಿರ್ಧಾರ ಮಾಡಬೇಕು ಎಂದು ಅನಂತ ಸುಬ್ಬರಾವ್ ಹೇಳಿದರು.

ಸಾರಿಗೆ ಸಚಿವ ಲಕ್ಷ್ಮಣ ಸವದಿಯ ನಿಲುವೇನು? ಅಗತ್ಯ ಸೇವೆಗಳ ಹಿನ್ನೆಲೆಯಲ್ಲಿ ಮುಷ್ಕರಕ್ಕೂ ಮೊದಲು 21 ದಿನ ಮುಂಚಿತವಾಗಿ ನೋಟಿಸ್ ನೀಡಬೇಕು. ನೋಟಿಸ್​ ನೀಡಿದ ಬಳಿಕ ನಿಗಮಗಳು ಚರ್ಚೆ ಮಾಡಬಹುದು. ದಿಢೀರ್ ಮುಷ್ಕರ ಕರೆದು ಹಠಮಾರಿ ಧೋರಣೆ ತೋರಿಸುವುದು ಸರಿಯಲ್ಲ. ನೋಂದಾಯಿತ ಸಂಘಟನೆ ಗಳು ಯಾರೂ ಮುಷ್ಕರಕ್ಕೆ ಕರೆ ಕೊಟ್ಟಿಲ್ಲ ನೊಂದಾಯಿತರಲ್ಲದ ನೌಕರ ಸಂಘಟನೆಗಳ ಮುಖಂಡರನ್ನು ಹೇಗೆ ಆಹ್ವಾನಿಸಲು ಸಾಧ್ಯ? ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ನಿಲುವು ತಾಳಿದ್ದಾರೆ ಎಂದು ಹೇಳಲಾಗಿದೆ.

ಕೋಡಿಹಳ್ಳಿ ಚಂದ್ರಶೇಖರ್ ಗೆ ಸಾರಿಗೆ ನಿಗಮದ ಆರ್ಥಿಕ ಪರಿಸ್ಥಿತಿಯ ಅರಿವಿಲ್ಲ. ಹೀಗಾಗಿ, ಅವರ ಮುಂದಾಳತ್ವದಲ್ಲಿ ಕರೆ ನೀಡಿರುವ ಮುಷ್ಕರಕ್ಕೆ ಚರ್ಚೆ ಅಗತ್ಯವಿಲ್ಲ ಎಂಬ ನಿಲುವನ್ನು ಲಕ್ಷ್ಮಣ ಸವದಿ ಹೊಂದಿರುವರು ಎಂಬ ಮಾಹಿತಿ ದೊರೆತಿದೆ.

‘ಸವದಿಯವ್ರೇ.. ಬಿಕ್ಕಟ್ಟು ನಿರ್ವಹಿಸುವುದೆಂದರೆ, ಸದನದಲ್ಲಿ ಕೂತು ರೋಮಾಂಚನ ಚಿತ್ರ ವೀಕ್ಷಿಸಿದಂತಲ್ಲ’

Published On - 12:37 pm, Sun, 13 December 20

ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?