ಹುಬ್ಬಳ್ಳಿ-ಸೊಲ್ಲಾಪುರ ಚತುಷ್ಪಥ ಹೆದ್ದಾರಿ ನಿರ್ಮಾಣಕ್ಕೆ ನಿತಿನ್ ಗಡ್ಕರಿ ಒಪ್ಪಿಗೆ
ಬೆಂಗಳೂರು: ಹುಬ್ಬಳ್ಳಿ-ಸೊಲ್ಲಾಪುರ ಚತುಷ್ಪಥ ಹೆದ್ದಾರಿ ನಿರ್ಮಾಣಕ್ಕೆ ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ತಾತ್ಪಿಕ ಒಪ್ಪಿಗೆ ನೀಡಿದ್ದಾರೆ. ನಗರದಲ್ಲಿ ಇಂದು ಕೇಂದ್ರ ಭೂ ಸಾರಿಗೆ ಸಚಿವರು ನಡೆಸಿದ ಸಭೆಯಲ್ಲಿ ಒಪ್ಪಿಗೆ ನೀಡಿದ್ದಾರೆ. ಹುಬ್ಬಳಿ-ಸೊಲ್ಲಾಪುರ ಮಾರ್ಗದಲ್ಲಿ ವಾಹನಗಳ ಸಂಚಾರ ಅಧಿಕ ಪ್ರಮಾಣದಲ್ಲಿವೆ. ಈ ಹೆದ್ದಾರಿಯನ್ನು ಚತುಷ್ಪಥ ಹೆದ್ದಾರಿಗೆ ಮೇಲ್ದರ್ಜೆಗೇರಿಸುವಂತೆ ನಿತಿನ್ ಗಡ್ಕರಿಗೆ ಡಿಸಿಎಂ ಗೋವಿಂದ ಕಾರಜೋಳ ಮನವರಿಕೆ ಮಾಡಿಕೊಟ್ಟರು. ಡಿಸಿಎಂ ಮನವಿಗೆ ಕೂಡಲೇ ಕೇಂದ್ರ ಸಚಿವರು ತಾತ್ವಿಕ ಒಪ್ಪಿಗೆ ನೀಡಿದ್ದಾರೆ. ಈ ಹೆದ್ದಾರಿ ಕಾಮಗಾರಿ ನಿರ್ಮಾಣಕ್ಕೆ ಭೂ ಸ್ವಾಧೀನ […]
ಬೆಂಗಳೂರು: ಹುಬ್ಬಳ್ಳಿ-ಸೊಲ್ಲಾಪುರ ಚತುಷ್ಪಥ ಹೆದ್ದಾರಿ ನಿರ್ಮಾಣಕ್ಕೆ ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ತಾತ್ಪಿಕ ಒಪ್ಪಿಗೆ ನೀಡಿದ್ದಾರೆ. ನಗರದಲ್ಲಿ ಇಂದು ಕೇಂದ್ರ ಭೂ ಸಾರಿಗೆ ಸಚಿವರು ನಡೆಸಿದ ಸಭೆಯಲ್ಲಿ ಒಪ್ಪಿಗೆ ನೀಡಿದ್ದಾರೆ.
ಹುಬ್ಬಳಿ-ಸೊಲ್ಲಾಪುರ ಮಾರ್ಗದಲ್ಲಿ ವಾಹನಗಳ ಸಂಚಾರ ಅಧಿಕ ಪ್ರಮಾಣದಲ್ಲಿವೆ. ಈ ಹೆದ್ದಾರಿಯನ್ನು ಚತುಷ್ಪಥ ಹೆದ್ದಾರಿಗೆ ಮೇಲ್ದರ್ಜೆಗೇರಿಸುವಂತೆ ನಿತಿನ್ ಗಡ್ಕರಿಗೆ ಡಿಸಿಎಂ ಗೋವಿಂದ ಕಾರಜೋಳ ಮನವರಿಕೆ ಮಾಡಿಕೊಟ್ಟರು. ಡಿಸಿಎಂ ಮನವಿಗೆ ಕೂಡಲೇ ಕೇಂದ್ರ ಸಚಿವರು ತಾತ್ವಿಕ ಒಪ್ಪಿಗೆ ನೀಡಿದ್ದಾರೆ. ಈ ಹೆದ್ದಾರಿ ಕಾಮಗಾರಿ ನಿರ್ಮಾಣಕ್ಕೆ ಭೂ ಸ್ವಾಧೀನ ಪ್ರಕ್ರಿಯೆಗೆ ಕ್ರಮ ಕೈಗೊಳ್ಳುವಂತೆಯೂ ನಿತಿನ್ ಗಡ್ಕರಿ ಸೂಚನೆ ನೀಡಿದ್ದಾರೆ.
https://www.facebook.com/nitingadkary/posts/10162943538405553
Published On - 1:23 pm, Tue, 10 December 19