ಹಬ್ಬಕ್ಕೆ ಮೊದಲು ಖಾಸಗಿ ಬಸ್​ಗಳಿಂದ ಪ್ರಯಾಣಿಕರ ಸುಲಿಗೆ: ಟ್ವೀಟ್​ನಲ್ಲಿ ಎಚ್ಚರಿಸಿದ ಸಾರಿಗೆ ಸಚಿವ ಶ್ರೀರಾಮುಲು, ಲೇಟ್ ಆಯ್ತು ಎಂದ ಜನರು

‘ಅಕ್ರಮವಾಗಿ ಹಣ ಸಂಪಾದನೆಯೇ ನಮ್ಮ ಏಕೈಕ ಗುರಿ ಎಂದರೆ ಕ್ರಮಕ್ಕೆ ಸಿದ್ದರಾಗಿ’ ಎಂದು ಸಾರಿಗೆ ಸಚಿವ ಶ್ರೀರಾಮುಲು ಎಚ್ಚರಿಸಿದ್ದಾರೆ.

ಹಬ್ಬಕ್ಕೆ ಮೊದಲು ಖಾಸಗಿ ಬಸ್​ಗಳಿಂದ ಪ್ರಯಾಣಿಕರ ಸುಲಿಗೆ: ಟ್ವೀಟ್​ನಲ್ಲಿ ಎಚ್ಚರಿಸಿದ ಸಾರಿಗೆ ಸಚಿವ ಶ್ರೀರಾಮುಲು, ಲೇಟ್ ಆಯ್ತು ಎಂದ ಜನರು
ಸಾರಿಗೆ ಸಚಿವ ಬಿ ಶ್ರೀರಾಮುಲು
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Aug 28, 2022 | 1:52 PM

ಬೆಂಗಳೂರು: ಕರ್ನಾಟಕದ ಜನರು ಗೌರಿ-ಗಣೇಶ (Ganesha Festival) ಹಬ್ಬಕ್ಕೆ ಸಡಗರದಿಂದ ಸಜ್ಜಾಗುತ್ತಿದ್ದಾರೆ. ಗೌರಿ ಬಾಗಿನ ಜೋಡಿಸಿಕೊಳ್ಳುವುದು, ದೇವರ ಮಂಟಪದ ಅಲಂಕಾರ, ಗೆಜ್ಜೆವಸ್ತ್ರ ಮಾಡುವುದು, ಪೂಜಾ ಪರಿಕರಗಳನ್ನು ಹೊಂದಿಸುವುದು ಸೇರಿ ಹಲವು ಬಗೆಯ ಚಟುವಟಿಕೆಗಳು ಗರಿಗೆದರಿವೆ. ಕೊವಿಡ್ ಪಿಡುಗು ಸತತ ಎರಡು ವರ್ಷಗಳ ಕಾಲ ರಾಜ್ಯವನ್ನು ಆವರಿಸಿದ್ದರಿಂದ ಬಹುತೇಕ ಎಲ್ಲ ಹಬ್ಬಗಳೂ ಕಳಾಹೀನವಾಗಿದ್ದವು. ಇದೀಗ ಹಬ್ಬದ ಆಚರಣೆಗೆ ರಾಜ್ಯ ಸರ್ಕಾರ ಅನುಮತಿ ಕೊಟ್ಟ ನಂತರ ಎಲ್ಲೆಡೆ ಸಂಭ್ರಮ ಮನೆಮಾಡಿದೆ. ಆದರೆ ಹಬ್ಬಕ್ಕೆಂದು ಊರುಗಳಿಗೆ ಹೋಗಲು ಬಸ್​ಗಳ ಬಳಿಗೆ (Bus Ticket Price Hike) ಬಂದವರು, ಟಿಕೆಟ್ ಬುಕ್ ಮಾಡಲು ಯತ್ನಿಸುತ್ತಿರುವವರು ಬೆಲೆ ಏರಿಕೆ ಕಂಡು ಹೌಹಾರಿದ್ದಾರೆ.

ಈ ಹಿನ್ನೆಲೆಯಲ್ಲಿ ಟ್ವೀಟ್​ ಮೂಲಕ ಪ್ರತಿಯಿಸಿರುವ ಸಾರಿಗೆ ಸಚಿವ ಶ್ರೀರಾಮುಲು, ‘ಗೌರಿ ಗಣೇಶ ಹಬ್ಬದ ಸಂದರ್ಭದಲ್ಲಿ ಬೆಂಗಳೂರು ಸೇರಿದಂತೆ ಬೇರೆ ಬೇರೆ ನಗರಗಳಿಂದ ತಮ್ಮ ಗ್ರಾಮಗಳಿಗೆ ತೆರಳುವ ಪ್ರಯಾಣಿಕರಿಗೆ ಕೆಲವು ಧನದಾಹಿ ಖಾಸಗಿ ಬಸ್​ಗಳು ನಿಗದಿತ ದರಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಹಣ ವಸೂಲಿ ಮಾಡುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಖಾಸಗಿ ಬಸ್​ಗಳು ರೂಟ್​ಗೆ ನಿಗದಿ ಪಡಿಸಿದ ದರವನ್ನಷ್ಟೇ ಪ್ರಯಾಣಿಕರಿಂದ ಪಡೆಯಬೇಕು. ಒಂದು ವೇಳೆ ಹೆಚ್ಚಿನ ಪ್ರಮಾಣದಲ್ಲಿ ದರವನ್ನು ಪಡೆದರೆ, ಅಂತಹ ಬಸ್ ಮಾಲೀಕರ ಮೇಲೆ ಯಾವುದೇ ಮುಲಾಜಿಲ್ಲದೆ, ಕಾನೂನು ಕ್ರಮ ಜರುಗಿಸಲಾಗುವುದು’ ಎಂದು ಎಚ್ಚರಿಸಿದ್ದಾರೆ.

‘ನಾನು ಈಗಲೂ ಖಾಸಗಿ ಬಸ್ ಮಾಲೀಕರಲ್ಲಿ ಮನವಿ ಮಾಡಿಕೊಳ್ಳುತ್ತೇನೆ. ಪ್ರಯಾಣಿಕರಿಗೆ ಹೊರೆಯಾಗದಂತೆ ನಿಗದಿಪಡಿಸಿದ ದರವನ್ನು ಮಾತ್ರ ತೆಗೆದುಕೊಳ್ಳಬೇಕು. ಅನಗತ್ಯವಾಗಿ ಸಾರ್ವಜನಿಕರಿಗೆ ತೊಂದರೆ ಕೊಡಬೇಡಿ. ಅಕ್ರಮವಾಗಿ ಹಣ ಸಂಪಾದನೆಯೇ ನಮ್ಮ ಏಕೈಕ ಗುರಿ ಎಂದರೆ ಕ್ರಮಕ್ಕೆ ಸಿದ್ದರಾಗಿ’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಗಣೇಶನ ಹಬ್ಬಕ್ಕೆಂದು ಊರಿಗೆ ಹೊರಟವರಿಗೆ ಟಿಕೆಟ್​ಗಳ ಬೆಲೆ ಏರಿಕೆ ಶಾಕ್: ಖಾಸಗಿ ಬಸ್​ಗಳಲ್ಲಿ ಟಿಕೆಟ್​ ದರ ಮೂರು ಪಟ್ಟು ಹೆಚ್ಚಳ

ದರ ಪರಿಶೀಲನೆಗೆ ಸಿಬ್ಬಂದಿ ನೇಮಕ

ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಖಾಸಗಿ ಬಸ್​​ಗಳ ಟಿಕೆಟ್​ ದರವನ್ನು ಸಾಮಾನ್ಯ ದರಕ್ಕಿಂತ ಎರಡು ಪಟ್ಟು ಹೆಚ್ಚಿಸಿರುವುದು ಸಾರಿಗೆ ಇಲಾಖೆಯ ಗಮನಕ್ಕೂ ಬಂದಿದೆ. ಸಾಮಾನ್ಯ ದಿನಗಳಲ್ಲಿ ₹ 800 ಇರುತ್ತಿದ್ದ ಟಿಕೆಟ್ ದರವು ಇಂದು ₹ 1,500ಕ್ಕೆ ಹೆಚ್ಚಾಗಿದೆ. ಬಸ್​ ದರ ಹೆಚ್ಚಳ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆಯು 10 ಪ್ರಮುಖ ಬಸ್ ನಿಲ್ದಾಣಗಳಲ್ಲಿ ಪರೀಶೀಲನೆಗೆ ಸಿಬ್ಬಂದಿಯನ್ನು ನೇಮಿಸಿದೆ. ಆನಂದರಾವ್ ವೃತ್ತ, ಮೆಜೆಸ್ಟಿಕ್, ರೇಸ್​ಕೋರ್ಸ್​​ ರಸ್ತೆ, ಕಲಾಸಿಪಾಳ್ಯ ರಸ್ತೆ, ಮೈಸೂರು ರಸ್ತೆ, ಪಾರ್ಲೆಜಿ ಫ್ಯಾಕ್ಟರಿ ಟೋಲ್, ಮಡಿವಾಳ, ಹೊಸೂರು ರಸ್ತೆ, ಹೊಸಕೋಟೆ ಟೋಲ್, ದೇವನಹಳ್ಳಿ ಟೋಲ್, ದೊಡ್ಡಬಳ್ಳಾಪುರ ರಸ್ತೆಯಲ್ಲಿ ಅಧಿಕಾರಿಗಳನ್ನು ನೇಮಿಸಲಾಗಿದೆ. ಇವು ಸಂಜೆ 6ರಿಂದ ಮಧ್ಯರಾತ್ರಿವರೆಗೆ ಖಾಸಗಿ ಬಸ್​ಗಳನ್ನು ಪರಿಶೀಲಿಸಲಿದ್ದಾರೆ. ಹೆಚ್ಚು ಟಿಕೆಟ್ ದರವನ್ನು ಅಕ್ರಮವಾಗಿ ಏರಿಕೆ ಮಾಡಿರುವುದು ಕಂಡುಬಂದರೆ ಲೈಸೆನ್ಸ್ ರದ್ದುಪಡಿಸಲಾಗುವುದು ಎಂದು ಇಲಾಖೆ ಎಚ್ಚರಿಸಿದೆ.

ತಡವಾಯ್ತು ಎಂದ ಜನ

ಖಾಸಗಿ ಬಸ್​ಗಳು ಹೆಚ್ಚು ದರ ನಿಗದಿಪಡಿಸಿದ್ದಕ್ಕೆ ಸಾರ್ವಜನಿಕರಿಂದ ತೀವ್ರ ಆಕ್ಷೇಪ ಕೇಳಿ ಬಂದ ಹಿನ್ನೆಲೆಯಲ್ಲಿ ಆರ್​ಟಿಒ ಅಧಿಕಾರಿಗಳು ನಿನ್ನೆ (ಆಗಸ್ಟ್ 27) ಬೆಂಗಳೂರಿನ ಕೆಲವೆಡೆ ಬಸ್​ಗಳ ಮೇಲೆ ದಾಳಿ ನಡೆಸಿದರು. ಖಾಸಗಿ ಬಸ್​ಗಳು ದರ ಹೆಚ್ಚಿಸುವುದು ಖಚಿತವಾಗಿದ್ದರೂ ಸಾರಿಗೆ ಇಲಾಖೆ ಅಧಿಕಾರಿಗಳು ಇಷ್ಟು ದಿನ ಸುಮ್ಮನಿದ್ದುದು ಏಕೆ? ಊರು ಕೊಳ್ಳೆ ಹೋದ ಮೇಲೆ ದಿಡ್ಡಿ ಬಾಗಿಲು ಹಾಕಿದಂತೆ ಸಾರಿಗೆ ಸಚಿವರು ಈಗ ಎಚ್ಚೆತ್ತುಕೊಂಡು ಏನು ಪ್ರಯೋಜನ ಎಂದು ಜನರು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

Published On - 1:50 pm, Sun, 28 August 22

ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ