AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋರ್ಟ್ ಆದೇಶ ಪಾಲನೆ ಅನಿವಾರ್ಯತೆ: ಬೈಕ್ ಟ್ಯಾಕ್ಸಿಗೆ ಕಠಿಣ ರೂಲ್ಸ್ ಸುಳಿವು ನೀಡಿದ ಸಚಿವ

ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ಸೇವೆಗೆ ಸುಪ್ರೀಂಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಬೈಕ್ ಟ್ಯಾಕ್ಸಿಗೆ ಅನುಮತಿ ನೀಡಿದ್ದ ಹೈಕೋರ್ಟ್ ಆದೇಶವನ್ನ ಪ್ರಶ್ನಿಸಿ, ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಇದರ ಬೆನ್ನಲ್ಲೇ ಈ ಬಗ್ಗೆ ಸಾರಿಗೆ ಸಚಿವ ಬೈರತಿ ಸುರೇಶ್ ಮಹತ್ವದ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.

ಕೋರ್ಟ್ ಆದೇಶ ಪಾಲನೆ ಅನಿವಾರ್ಯತೆ: ಬೈಕ್ ಟ್ಯಾಕ್ಸಿಗೆ ಕಠಿಣ ರೂಲ್ಸ್ ಸುಳಿವು ನೀಡಿದ ಸಚಿವ
Byrathi Suresh
ರಮೇಶ್ ಬಿ. ಜವಳಗೇರಾ
|

Updated on: Nov 20, 2026 | 10:35 PM

Share

ಬೆಂಗಳೂರು, (ನವೆಂಬರ್ 20): ಬೈಕ್ ಟ್ಯಾಕ್ಸಿಯನ್ನೇ ನಂಬಿಕೊಂಡ ರೈಡರ್ ಗಳಿಗೆ ಶುಭ ಸುದ್ದಿ ಸಿಕ್ಕಿದೆ. ಇನ್ಮುಂದೆ ಕದ್ದು ಮುಚ್ಚಿ ಬೈಕ್ ಟ್ಯಾಕ್ಸಿಯಲ್ಲಿ ಓಡಾಬೇಕಾಗಿಲ್ಲ. ಯಾಕಂದ್ರೆ ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ಸೇವೆಗೆ ಸುಪ್ರೀಂಕೋರ್ಟ್ ಗ್ರೀನ್ ಸಿಗ್ನಲ್‌ ನೀಡಿದೆ. ಈ ಮೂಲಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಬೈಕ್ ಟ್ಯಾಕ್ಸಿ ವಿರುದ್ಧ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂಕೋರ್ಟ್ ವಜಾ ಮಾಡಿದೆ. ಇನ್ನು ಕೋರ್ಟಿನ ಈ ಆದೇಶ ಬೆನ್ನಲ್ಲೇ ಸಾರಿಗೆ ಸಚಿವ ಬೈರತಿ ಸುರೇಶ್ ಪ್ರತಿಕ್ರಿಯಿಸಿದ್ದು, ಸುಪ್ರೀಂಕೋರ್ಟ್ ಆದೇಶವನ್ನು ಪಾಲನೆ ಮಾಡಬೇಕಾಗುತ್ತದೆ. ಆದಾಗ್ಯೂ ಎಜಿ ಜೊತೆಗೆ ಚರ್ಚೆ ಮಾಡಿ ಅಂತಿಮ ನಿರ್ಧಾರ ಎಂದಿದ್ದಾರೆ.

ಬೈಕ್ ಟ್ಯಾಕ್ಸಿಗೆ ಸುಪ್ರೀಂಕೋರ್ಟ್ ಅನುಮತಿ ನೀಡಿದ ಬೆನ್ನಲ್ಲೇ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಚಿವ ಬೈರತಿ ಸುರೇಶ್, ಸುಪ್ರೀಂಕೋರ್ಟ್ ಆದೇಶವನ್ನು ಪಾಲನೆ ಮಾಡಬೇಕಾಗುತ್ತದೆ. ಆದಾಗ್ಯೂ ಎಜಿ ಜೊತೆಗೆ ಚರ್ಚೆ ಮಾಡಿ ಅಂತಿಮ ನಿರ್ಧಾರ. ಇನ್ನೊಮ್ಮೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ. ಅನೇಕ ನಿಯಮ ಹೇರುವ ಬಗ್ಗೆ ಗಂಭೀರ ಚಿಂತನೆ ನಡೆಸಿದ್ದೇವೆ. ಈ ಸಂಬಂಧ ನಿಯಮಗಳನ್ನು ರೂಪಿಸುವಂತೆ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಈಗಾಗಲೇ ಸೂಚಿಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ಸುಪ್ರೀಂಕೋರ್ಟ್​ ಮಹತ್ವದ ತೀರ್ಪು: ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ಚಾಲಕರಿಗೆ ಬಿಗ್ ರಿಲೀಫ್

ಬೈಕ್ ಟ್ಯಾಕ್ಸಿಯಲ್ಲಿ ಪ್ರಯಾಣ ಮಾಡುವ ಸಹಪ್ರಯಾಣಿಕರು, ಪ್ರಮುಖವಾಗಿ ಮಹಿಳಾ ಪ್ರಯಾಣಿಕರ ಸುರಕ್ಷತೆ ನಮ್ಮ ಆದ್ಯತೆ. ಈ ಹಿನ್ನೆಲೆಯಲ್ಲಿ ಬೈಕ್ ಟ್ಯಾಕ್ಸಿ ಚಲಾಯಿಸುವವರ ದಾಖಲೆ, GPS ಅಳವಡಿಕೆ, ವಾಹನಕ್ಕೆ ವಿಮೆ, ಇತರ ದಾಖಲೆ ಪರಿಶೀಲನೆ ಸೇರಿದಂತೆ ಕೆಲವು ನಿಯಮಗಳನ್ನು ರೂಪಿಸಿ ಅವಕಾಶಕ್ಕೆ ನಿರ್ಧರಿಸಲಾಗುವುದು ಎಂದು ತಿಳಿಸಿದ್ದಾರೆ.

ಸಾರಿಗೆ ಸಚಿವರ ಈ ಹೇಳಿಕೆಯನ್ನು ಗಮನಿಸಿದರೆ, ಸುಪ್ರೀಂಕೋರ್ಟ್ ಆದೇಶ ಪಾಲನೆ ಮಾಡುವುದು ಅನಿವಾರ್ಯವಾಗಿದ್ದರಿಂದ ಬೈಕ್ ಟ್ಯಾಕ್ಸಿ ಸೇವೆಗೆ ಕಠಿಣ ರೂಲ್ಸ್ ಜಾರಿಗೆ ತರುವ ಸಾಧ್ಯತೆಗಳಿವೆ. ಬೈಕ್​​​​​​ ದಾಖಲಾತಿ, ಜಿಪಿಎಸ್, ಹಾಗೂ ಅಪಘಾತ ವಿಮೆ ಸೇರಿದಂತೆ ಹಲವು ನಿಯಮಗಳನ್ನು ರೂಪಿಸಿ ಬೈಕ್ ಟ್ಯಾಕ್ಸಿಗೆ ಅನುಮತಿ ನೀಡುವ ಚಿಂತನೆಗಳು ನಡೆದಿವೆ.

ಒಟ್ಟಿನಲ್ಲಿ ಬೈಕ್ ಟ್ಯಾಕ್ಸಿ ಸೇವೆಗೆ ಕಠಿಣ ನಿಯಮಗಳನ್ನು ಜಾರಿಗೆ ತರು ಮೂಲಕ ಸುಪ್ರೀಂಕೋರ್ಟ್ ಆದೇಶ ಪಾಲನೆಗೆ ಮುಂದಾದಂತಿದ್ದು, ಮುಂದೆ ಏನಾಗಲಿದೆ ಎನ್ನುವುದನ್ನು ಕಾದುನೋಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರಮೇಶ್ ಬಿ. ಜವಳಗೇರಾ
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
ಹಾಸನ: 32 ಕಾಡಾನೆಗಳ ಹಿಂಡು ಪತ್ತೆ, ಡ್ರೋನ್​​ ಕ್ಯಾಮರಾದಲ್ಲಿ ದೃಶ್ಯ ಸೆರೆ
ಹಾಸನ: 32 ಕಾಡಾನೆಗಳ ಹಿಂಡು ಪತ್ತೆ, ಡ್ರೋನ್​​ ಕ್ಯಾಮರಾದಲ್ಲಿ ದೃಶ್ಯ ಸೆರೆ
ದನದ ಶೆಡ್ ಬಿಲ್ ಬಾಕಿ:ಪಂಚಾಯ್ತಿ ಮುಂದೆ ಎಮ್ಮೆ ಕರು ಕಟ್ಟಿದ ಫಲಾನುಭವಿ
ದನದ ಶೆಡ್ ಬಿಲ್ ಬಾಕಿ:ಪಂಚಾಯ್ತಿ ಮುಂದೆ ಎಮ್ಮೆ ಕರು ಕಟ್ಟಿದ ಫಲಾನುಭವಿ
ಚಿಕ್ಕಣ್ಣನ ಡ್ಯಾನ್ಸ್ ನೋಡಿ ಪ್ರಭುದೇವಗೆ ಹೋಲಿಸಿದ ಶಿವಣ್ಣ
ಚಿಕ್ಕಣ್ಣನ ಡ್ಯಾನ್ಸ್ ನೋಡಿ ಪ್ರಭುದೇವಗೆ ಹೋಲಿಸಿದ ಶಿವಣ್ಣ
ಹೆಚ್​​​ಡಿಕೆ-ಡಿಕೆಶಿ ಜಟಾಪಟಿ:ಕುಮಾರಸ್ವಾಮಿ ನಡೆಗೆ ಸ್ವಾಮೀಜಿ ಅಸಮಾಧಾನ
ಹೆಚ್​​​ಡಿಕೆ-ಡಿಕೆಶಿ ಜಟಾಪಟಿ:ಕುಮಾರಸ್ವಾಮಿ ನಡೆಗೆ ಸ್ವಾಮೀಜಿ ಅಸಮಾಧಾನ
ಲಕ್ಷ್ಮೀಪುತ್ರ ಟ್ರೇಲರ್‌ಗೆ ಶಿವಣ್ಣ ಫಿದಾ; ಚಿಕ್ಕಣ್ಣ ಭವಿಷ್ಯದ ಸ್ಟಾರ್
ಲಕ್ಷ್ಮೀಪುತ್ರ ಟ್ರೇಲರ್‌ಗೆ ಶಿವಣ್ಣ ಫಿದಾ; ಚಿಕ್ಕಣ್ಣ ಭವಿಷ್ಯದ ಸ್ಟಾರ್
ಚಿನ್ನ ಗ್ರಾಂಗೆ 10 ಸಾವಿರದ ಒಳಗೆ ಬರುತ್ತಾ? ಹೂಡಿಕೆ ತಜ್ಞರು ಹೇಳಿದ್ದೇನು?
ಚಿನ್ನ ಗ್ರಾಂಗೆ 10 ಸಾವಿರದ ಒಳಗೆ ಬರುತ್ತಾ? ಹೂಡಿಕೆ ತಜ್ಞರು ಹೇಳಿದ್ದೇನು?
ಸಚಿವ ಸ್ಥಾನ ವಂಚಿತ ಹೆಬ್ಬಾಳ್ಕರ್, ಮಹದೇವಪ್ಪಗೆ ಪ್ರಮುಖ ಹುದ್ದೆ ಸಾಧ್ಯತೆ
ಸಚಿವ ಸ್ಥಾನ ವಂಚಿತ ಹೆಬ್ಬಾಳ್ಕರ್, ಮಹದೇವಪ್ಪಗೆ ಪ್ರಮುಖ ಹುದ್ದೆ ಸಾಧ್ಯತೆ
ಚಿನ್ನದ ಬೆಲೆ ದಿಢೀರ್​​ ಕುಸಿತ ಕಂಡಿದ್ದೇಕೆ? ಇಲ್ಲಿದೆ ತಜ್ಞರ ವಿವರಣೆ
ಚಿನ್ನದ ಬೆಲೆ ದಿಢೀರ್​​ ಕುಸಿತ ಕಂಡಿದ್ದೇಕೆ? ಇಲ್ಲಿದೆ ತಜ್ಞರ ವಿವರಣೆ
ದೆಹಲಿಗೆ ತೆರಳಿದ ಹರಿಪ್ರಸಾದ್​​: KPCC ಕಾರ್ಯಾಧ್ಯಕ್ಷರ ನೇಮಕ ಬಗ್ಗೆ ಚರ್ಚೆ?
ದೆಹಲಿಗೆ ತೆರಳಿದ ಹರಿಪ್ರಸಾದ್​​: KPCC ಕಾರ್ಯಾಧ್ಯಕ್ಷರ ನೇಮಕ ಬಗ್ಗೆ ಚರ್ಚೆ?
ಹಿರಿಯೂರು ಟಿಕೆಟ್ ಫೈಟ್: ಅಮಿತ್ ಶಾ ಭೇಟಿ ಬೆನ್ನಲ್ಲೇ ಕುಮಾರಸ್ವಾಮಿ ಹೇಳಿಕೆ
ಹಿರಿಯೂರು ಟಿಕೆಟ್ ಫೈಟ್: ಅಮಿತ್ ಶಾ ಭೇಟಿ ಬೆನ್ನಲ್ಲೇ ಕುಮಾರಸ್ವಾಮಿ ಹೇಳಿಕೆ