Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಮತ್ತೊಮ್ಮೆ ಸಾರಿಗೆ ನೌಕರರ ಮುಷ್ಕರ ಸಾಧ್ಯತೆ, ಸಭೆಯಲ್ಲಿ ದಿನಾಂಕ ನಿಗದಿ: ಕೋಡಿಹಳ್ಳಿ ಚಂದ್ರಶೇಖರ್ ಮಾಹಿತಿ

ರಾಜ್ಯಾದ್ಯಂತ ನಾಲ್ಕು ನಿಗಮಗಳಿಂದ 1.30 ಲಕ್ಷ ಸಾರಿಗೆ ನೌಕರರಿದ್ದಾರೆ. ನೌಕರರ ಕುಟುಂಬಸ್ಥರು ಒಟ್ಟಾಗಿ ಸೇರಿ ಪ್ರತಿಭಟನೆ ನಡೆಸಲು ನಿರ್ಧಾರ ಮಾಡಲಾಗುತ್ತದೆ. 2020ರ ಡಿಸೆಂಬರ್​ನಲ್ಲಿ 15 ದಿನ ಪ್ರತಿಭಟನೆ ನಡೆದಿತ್ತು. ಈ ವೇಳೆ ರಾಜ್ಯ ಸರ್ಕಾರ ಲಿಖಿತ ರೂಪದಲ್ಲಿ ಭರವಸೆ ನೀಡಿತ್ತು.

ಕರ್ನಾಟಕದಲ್ಲಿ ಮತ್ತೊಮ್ಮೆ ಸಾರಿಗೆ ನೌಕರರ ಮುಷ್ಕರ ಸಾಧ್ಯತೆ, ಸಭೆಯಲ್ಲಿ ದಿನಾಂಕ ನಿಗದಿ: ಕೋಡಿಹಳ್ಳಿ ಚಂದ್ರಶೇಖರ್ ಮಾಹಿತಿ
ಕೋಡಿಹಳ್ಳಿ ಚಂದ್ರಶೇಖರ್
Follow us
TV9 Web
| Updated By: sandhya thejappa

Updated on:Jun 23, 2021 | 11:45 AM

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಆಗ್ರಹಿಸಿ ಸಾರಿಗೆ ನೌಕರರು ರಾಜ್ಯದಲ್ಲಿ ಮತ್ತೊಮ್ಮೆ ಮುಷ್ಕರಕ್ಕಿಳಿಯುವ ಸಾಧ್ಯತೆಯಿದ್ದು, ಜುಲೈ 1ರಂದು ನಡೆಯುವ ಸಭೆಯಲ್ಲಿ ದಿನಾಂಕ ನಿಗದಿ ಮಾಡಲಾಗುತ್ತದೆ ಎಂದು ಸಾರಿಗೆ ನೌಕರರ ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದ್ದಾರೆ. ಕಳೆದ ಮುಷ್ಕರಕ್ಕಿಂತ ಈ ಬಾರಿಯ ಪ್ರತಿಭಟನೆ ತೀವ್ರವಾಗಲಿದೆ. ಸಾರಿಗೆ ನೌಕರರ ಕುಟುಂಬಸ್ಥರು ಈ ಬಾರಿ ಪ್ರತಿಭಟನೆಗೆ ಇಳಿಯಲಿದ್ದಾರೆ. ಸಾರಿಗೆ ನೌಕರರ ಹೆಂಡತಿ ಮಕ್ಕಳೊಂದಿಗೆ ಬೀದಿಗಿಳಿದು ಪ್ರತಿಭಟನೆ ಮಾಡಲಾಗುತ್ತದೆ ಎಂದು ಕೋಡಿಹಳ್ಳಿ ಚಂದ್ರಶೇಖರ್ ಹೇಳಿದರು.

ರಾಜ್ಯಾದ್ಯಂತ ನಾಲ್ಕು ನಿಗಮಗಳಿಂದ 1.30 ಲಕ್ಷ ಸಾರಿಗೆ ನೌಕರರಿದ್ದಾರೆ. ನೌಕರರ ಕುಟುಂಬಸ್ಥರು ಒಟ್ಟಾಗಿ ಸೇರಿ ಪ್ರತಿಭಟನೆ ನಡೆಸಲು ನಿರ್ಧಾರ ಮಾಡಲಾಗುತ್ತದೆ. 2020ರ ಡಿಸೆಂಬರ್​ನಲ್ಲಿ 15 ದಿನ ಪ್ರತಿಭಟನೆ ನಡೆದಿತ್ತು. ಈ ವೇಳೆ ರಾಜ್ಯ ಸರ್ಕಾರ ಲಿಖಿತ ರೂಪದಲ್ಲಿ ಭರವಸೆ ನೀಡಿತ್ತು. ಆದರೆ ಲಿಖಿತ ರೂಪದಲ್ಲಿ ಕೊಟ್ಟಿದ್ದ ಭರವಸೆಗಳನ್ನು ಈಡೇರಿಸಿಲ್ಲ ಎಂದು ಅವರು ತಿಳಿಸಿದರು.

ಕೊಟ್ಟ ಮಾತಿನಂತೆ, ಆರನೇ ವೇತನ ಆಯೋಗ ಜಾರಿ ಮಾಡಲೇಬೇಕು. ಮುಷ್ಕರದಲ್ಲಿ ಭಾಗಿಯಾಗಿದ್ದವರನ್ನು ವರ್ಗಾವಣೆ, ಅಮಾನತು, ಸಸ್ಪೆಂಡ್ ಮಾಡಲಾಗಿದೆ. ಕೂಡಲೆ ಅವರನ್ನು ಕೆಲಸಕ್ಕೆ ತೆಗೆದುಕೊಳ್ಳಬೇಕೆಂದು ರಾಜ್ಯ ಸರ್ಕಾರಕ್ಕೆ ಆಗ್ರಹಿಸದ ಕೋಡಿಹಳ್ಳಿ ಚಂದ್ರಶೇಖರ್, ಬಾಕಿ ಸಂಬಳ ನೀಡಬೇಕು. ಬೇಡಿಕೆ ಈಡೇರಿಸದಿದ್ದರೆ ಮತ್ತೆ ಪ್ರತಿಭಟನೆಗೆ ನಿರ್ಧರಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ

KSRTC BMTC Strike: ಸಾರಿಗೆ ನೌಕರರ ಮುಷ್ಕರ ಅಂತ್ಯ: ತಾತ್ಕಾಲಿಕ ನಿರ್ಧಾರ ಎಂದ ಕೋಡಿಹಳ್ಳಿ ಚಂದ್ರಶೇಖರ್

Bidar News: ರಸ್ತೆಯಿಲ್ಲದೆ ತಾಂಡಾದ ಜನರ ಪರದಾಟ; ಐದು ದಶಕಗಳಿಂದ ಕಾಲ್ನಡಿಗೆಯಲ್ಲಿಯೇ ಸಂಚಾರ

(Transport workers are likely to protest again in Karnataka)

Published On - 11:44 am, Wed, 23 June 21

ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
ಹೋಟೆಲ್​ನ ಕೊನೆಯ ಮಹಡಿಯ ಸ್ವಿಮ್ಮಿಂಗ್​ ಪೂಲ್​ನಲ್ಲಿ ಮಲಗಿದ್ದ ಜೋಡಿ
ಹೋಟೆಲ್​ನ ಕೊನೆಯ ಮಹಡಿಯ ಸ್ವಿಮ್ಮಿಂಗ್​ ಪೂಲ್​ನಲ್ಲಿ ಮಲಗಿದ್ದ ಜೋಡಿ
ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ
ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ
ಧ್ರುವ ಸರ್ಜಾ ಜೊತೆ ಡ್ಯಾನ್ಸ್ ಮಾಡೋದು ಕಷ್ಟ, ಹೀಗೆಂದರ್ಯಾಕೆ ರೀಶ್ಮಾ
ಧ್ರುವ ಸರ್ಜಾ ಜೊತೆ ಡ್ಯಾನ್ಸ್ ಮಾಡೋದು ಕಷ್ಟ, ಹೀಗೆಂದರ್ಯಾಕೆ ರೀಶ್ಮಾ