ರಾಜ್ಯದಲ್ಲಿ 2ನೇ ದಿನಕ್ಕೆ ಕಾಲಿಟ್ಟ ಸಾರಿಗೆ ನೌಕರರ ಮುಷ್ಕರ: ಡಿಪೋಗಳಿಂದ ಹೊರಬಾರದ ಬಸ್‌ಗಳು

|

Updated on: Dec 12, 2020 | 7:48 AM

ರಾಜ್ಯದಲ್ಲಿ ಸಾರಿಗೆ ನೌಕರರ ಮುಷ್ಕರ 2ನೇ ದಿನಕ್ಕೆ ಕಾಲಿಟ್ಟಿದೆ. ಹಾಗಾಗಿ, ರಾಜ್ಯದಾದ್ಯಂತ ಡಿಪೋಗಳಿಂದ ಯಾವುದೇ ಸರ್ಕಾರಿ ಬಸ್‌ಗಳು ಸಂಚಾರ ನಡೆಸುತ್ತಿಲ್ಲ.

ರಾಜ್ಯದಲ್ಲಿ 2ನೇ ದಿನಕ್ಕೆ ಕಾಲಿಟ್ಟ ಸಾರಿಗೆ ನೌಕರರ ಮುಷ್ಕರ: ಡಿಪೋಗಳಿಂದ ಹೊರಬಾರದ ಬಸ್‌ಗಳು
ಸಾಂದರ್ಭಿಕ ಚಿತ್ರ
Follow us on

ಬೆಂಗಳೂರು: ರಾಜ್ಯದಲ್ಲಿ ಸಾರಿಗೆ ನೌಕರರ ಮುಷ್ಕರ 2ನೇ ದಿನಕ್ಕೆ ಕಾಲಿಟ್ಟಿದೆ. ಹಾಗಾಗಿ, ರಾಜ್ಯದಾದ್ಯಂತ ಡಿಪೋಗಳಿಂದ ಯಾವುದೇ ಸರ್ಕಾರಿ ಬಸ್‌ಗಳು ಸಂಚಾರ ನಡೆಸುತ್ತಿಲ್ಲ.

ಸಿಲಿಕಾನ್​ ಸಿಟಿ ಬೆಂಗಳೂರು ಸೇರಿದಂತೆ ಹಾವೇರಿ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ರಾಯಚೂರು, ಶಿವಮೊಗ್ಗ, ತುಮಕೂರು, ಬಾಗಲಕೋಟೆ, ಕಲಬುರಗಿ, ಮೈಸೂರು, ಹುಬ್ಬಳ್ಳಿ, ಬಳ್ಳಾರಿ ಬಸ್ ನಿಲ್ದಾಣಗಳು ಸೇರಿದಂತೆ ಮಂಡ್ಯ, ಕೋಲಾರದ ಕೇಂದ್ರ ಬಸ್ ನಿಲ್ದಾಣಗಳು ಖಾಲಿ ಹೊಡೆಯುತ್ತಿವೆ.

KSRTC ಹಾಗೂ BMTC ಬಸ್ ಇಲ್ಲದ ಹಿನ್ನೆಲೆಯಲ್ಲಿ ಪ್ರಯಾಣಿಕರು ಪರದಾಡುವ ಸ್ಥಿತಿ ಎದುರಾಗಿದೆ. ಕೆಲವು ಜಿಲ್ಲೆಗಳಲ್ಲಿ ಸಾರ್ವಜನಿಕರು ಖಾಸಗಿ ಬಸ್‌ಗಳ ಮೊರೆ ಹೋಗಬೇಕಾಗಿದೆ. ಮತ್ತೆ, ಕೆಲವೆಡೆ ಜನರು ಅಂತಾರಾಜ್ಯ ಬಸ್‌ಗಳ ಮೊರೆ ಹೋಗುತ್ತಿದ್ದಾರೆ.

ಪೊಲೀಸ್ ಭದ್ರತೆಯಲ್ಲಿ BMTC ಬಸ್ ಸಂಚಾರ: ಮೆಜೆಸ್ಟಿಕ್‌ಗೆ ಆಗಮಿಸಿದ 2 ಬಸ್‌ಗಳು

Published On - 7:24 am, Sat, 12 December 20