ಕನ್ನಡಿಗರ ಕೈ ತಪ್ಪುತ್ತಿವೆ ಬ್ಯಾಂಕಿಂಗ್ ಉದ್ಯೋಗಗಳು: ಟಿ.ಎಸ್. ನಾಗಾಭರಣ ಕಳವಳ

ಬೆಂಗಳೂರು: ಬ್ಯಾಂಕಿಂಗ್ ಸೇವೆಗಳಿಗೆ ಸಂಬಂಧಿಸಿದ ಎಲ್ಲ ನೇಮಕಾತಿ ಪರೀಕ್ಷೆಗಳನ್ನು ರಾಜ್ಯ ಭಾಷೆಗಳಲ್ಲಿ ನಡೆಸುವಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ನಿರಂತರವಾಗಿ ಒತ್ತಾಯಿಸುತ್ತಾ ಬಂದಿದೆ. ಈ ಸಂಬಂಧ ಹಲವು ಭಾರಿ ಕೇಂದ್ರ ವಿತ್ತ ಸಚಿವರನ್ನು ಖುದ್ದು ಭೇಟಿ ಮಾಡಿ ಮನವಿ, ಮೊರೆಗಳನ್ನು ಸಲ್ಲಿಸಿದ್ದಾರೆ. ಆದರೂ ಸಹ ಹಳೆಯ ಮಾರ್ಗಸೂಚಿಗಳನ್ವಯ ಪರೀಕ್ಷೆ ನಡೆಸಲು ಸಿದ್ಧತೆ ಮಾಡಿಕೊಳ್ಳುತ್ತಿರುವ ಐಬಿಪಿಎಸ್​ ಕ್ರಮ ಖಂಡನಾರ್ಹವಾಗಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಟಿ.ಎಸ್.ನಾಗಾಭರಣ ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರವು ವಿತ್ತ ಸಚಿವರಾದ ನಿರ್ಮಲಾ […]

ಕನ್ನಡಿಗರ ಕೈ ತಪ್ಪುತ್ತಿವೆ ಬ್ಯಾಂಕಿಂಗ್ ಉದ್ಯೋಗಗಳು: ಟಿ.ಎಸ್. ನಾಗಾಭರಣ ಕಳವಳ
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on: Oct 30, 2020 | 10:11 AM

ಬೆಂಗಳೂರು: ಬ್ಯಾಂಕಿಂಗ್ ಸೇವೆಗಳಿಗೆ ಸಂಬಂಧಿಸಿದ ಎಲ್ಲ ನೇಮಕಾತಿ ಪರೀಕ್ಷೆಗಳನ್ನು ರಾಜ್ಯ ಭಾಷೆಗಳಲ್ಲಿ ನಡೆಸುವಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ನಿರಂತರವಾಗಿ ಒತ್ತಾಯಿಸುತ್ತಾ ಬಂದಿದೆ. ಈ ಸಂಬಂಧ ಹಲವು ಭಾರಿ ಕೇಂದ್ರ ವಿತ್ತ ಸಚಿವರನ್ನು ಖುದ್ದು ಭೇಟಿ ಮಾಡಿ ಮನವಿ, ಮೊರೆಗಳನ್ನು ಸಲ್ಲಿಸಿದ್ದಾರೆ. ಆದರೂ ಸಹ ಹಳೆಯ ಮಾರ್ಗಸೂಚಿಗಳನ್ವಯ ಪರೀಕ್ಷೆ ನಡೆಸಲು ಸಿದ್ಧತೆ ಮಾಡಿಕೊಳ್ಳುತ್ತಿರುವ ಐಬಿಪಿಎಸ್​ ಕ್ರಮ ಖಂಡನಾರ್ಹವಾಗಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಟಿ.ಎಸ್.ನಾಗಾಭರಣ ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಕನ್ನಡ ಅಭಿವೃದ್ಧಿ ಪ್ರಾಧಿಕಾರವು ವಿತ್ತ ಸಚಿವರಾದ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ಕನ್ನಡವು ಸೇರಿದಂತೆ ಎಲ್ಲ ರಾಜ್ಯಭಾಷೆಗಳಲ್ಲಿ ಬ್ಯಾಂಕಿಂಗ್ ಪರೀಕ್ಷೆಗಳನ್ನು ಬರೆಯಲು ಅನುವು ಮಾಡಿಕೊಡುವಂತೆ ಮನವಿ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಕನ್ನಡದಲ್ಲಿ ಪರೀಕ್ಷೆಗಳನ್ನು ನಡೆಸುವುದಾಗಿ ಕೇಂದ್ರ ಸಚಿವರು ಭರವಸೆಗಳನ್ನು ನೀಡಿದ್ದರು. ಆದರೆ ಕೇಂದ್ರ ಸಚಿವರ ಭರವಸೆಗಳು ಹುಸಿಯಾಗಿದ್ದು, ಬ್ಯಾಂಕಿಂಗ್ ಕ್ಷೇತ್ರದ ಉದ್ಯೋಗಗಳು ಕನ್ನಡಿಗರ ಕೈ ತಪ್ಪುತ್ತಿರುವುದು ಅತ್ಯಂತ ನೋವಿನ ವಿಷಯವಾಗಿದೆ.

ಸಂವಿಧಾನದ ಪರಿಚ್ಛೇದ-8ರಲ್ಲಿ ಎಲ್ಲ ರಾಜ್ಯಭಾಷೆಗಳಿಗೂ ಮಾನ್ಯತೆ ನೀಡುವಂತೆ ವಿವರಿಸಲಾಗಿದೆ. ಹಾಗಾಗಿ ಬ್ಯಾಂಕಿಂಗ್ ನೇಮಕಾತಿಗೆ ಐಬಿಪಿಎಸ್ ನಡೆಸುವ ಪರೀಕ್ಷೆಗಳನ್ನು ಕನ್ನಡದಲ್ಲಿ ಬರೆಯಲು ಅವಕಾಶ ಕಲ್ಪಿಸುವಂತೆ ನಿರ್ದೇಶನ ನೀಡಬೇಕೆಂದು ಕೇಂದ್ರ ಸಚಿವರಿಗೆ ಬರೆಯಲಾಗಿರುವ ಪತ್ರದಲ್ಲಿ ಪ್ರಸ್ತಾಪಿಸಿದ್ದಾರೆ. ಹೀಗಿದ್ದರೂ ಮುಂದಿನ ಜನವರಿಯಲ್ಲಿ ನಡೆಯಲಿರುವ ಬ್ಯಾಂಕಿಂಗ್ ಪರೀಕ್ಷೆಗಳನ್ನು ಹಿಂದಿ ಮತ್ತು ಇಂಗ್ಲಿಷ್ ಭಾಷೆಯಲ್ಲಿ ನಡೆಸಲು ಐಬಿಪಿಎಸ್ ಸಿದ್ಧತೆ ನಡೆಸುತ್ತಿರುವುದರಿಂದ ಸ್ಥಳೀಯ ಭಾಷೆಯಲ್ಲಿ ಪ್ರಾವೀಣ್ಯತೆ ಹೊಂದಿರುವ ಅಭ್ಯರ್ಥಿಗಳಿಗೆ ಅನ್ಯಾಯವಾಗಲಿದೆ.

ಗ್ರಾಮಮಟ್ಟದಲ್ಲೂ ಬ್ಯಾಂಕಿಂಗ್ ಸೌಲಭ್ಯವಿರುವುದರಿಂದ ಗ್ರಾಮೀಣರಿಗೆ ಸ್ಥಳೀಯ ಭಾಷೆಯಲ್ಲಿ ಮಾತ್ರ ಸಂವಹನ ನಡೆಸಲು ಸಾಧ್ಯವಿರುತ್ತದೆ. ಹಾಗಾಗಿ ರಾಜ್ಯಭಾಷೆಗಳ ಪ್ರಾವೀಣ್ಯತೆಗೆ ಸಂಬಂಧಿಸಿದಂತೆ ಹೊಸ ಮಾನದಂಡಗಳನ್ನು ರೂಪಿಸಿ ಕನ್ನಡವೂ ಸೇರಿದಂತೆ ಎಲ್ಲ ರಾಜ್ಯಭಾಷೆಗಳಲ್ಲಿ ಬ್ಯಾಂಕಿಂಗ್ ಪರೀಕ್ಷೆಗಳನ್ನು ನಡೆಸುವಂತೆ ಟಿ.ಎಸ್.ನಾಗಾಭರಣ ಆಗ್ರಹಿಸಿದ್ದಾರೆ.