Tulu Language: ತುಳುವಿಗೆ ಕರ್ನಾಟಕದ 2ನೇ ಅಧಿಕೃತ ಭಾಷೆಯ ಸ್ಥಾನಮಾನ ನೀಡಲು ಸಮಿತಿ ರಚನೆ: ಸುನಿಲ್ ಕುಮಾರ್

Coastal Karnataka: ಸಂವಿಧಾನದ 8ನೇ ಪರಿಚ್ಛೇದಕ್ಕೆ ತುಳು ಭಾಷೆಯನ್ನು ಸೇರಿಸಬೇಕೆಂದು ಕರಾವಳಿ ಕರ್ನಾಟಕದಲ್ಲಿ ಹಲವು ವರ್ಷಗಳಿಂದ ಬೇಡಿಕೆ ವ್ಯಕ್ತವಾಗುತ್ತಿತ್ತು

Tulu Language: ತುಳುವಿಗೆ ಕರ್ನಾಟಕದ 2ನೇ ಅಧಿಕೃತ ಭಾಷೆಯ ಸ್ಥಾನಮಾನ ನೀಡಲು ಸಮಿತಿ ರಚನೆ: ಸುನಿಲ್ ಕುಮಾರ್
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್
Follow us
Ghanashyam D M | ಡಿ.ಎಂ.ಘನಶ್ಯಾಮ
| Updated By: ನಯನಾ ರಾಜೀವ್

Updated on:Jan 31, 2023 | 2:28 PM

ಬೆಂಗಳೂರು: ಪ್ರಾದೇಶಿಕ ಭಾಷೆಗಳಿಗೆ ಹೆಚ್ಚಿನ ಮಾನ್ಯತೆ ನೀಡಬೇಕೆನ್ನುವ ಜನರ ಬೇಡಿಕೆಗೆ ಕರ್ನಾಟಕ ಸರ್ಕಾರ ಸ್ಪಂದಿಸಿದೆ. ತುಳು ಭಾಷೆಗೆ (Tulu Language) ಅಧಿಕೃತ ಭಾಷೆಯ ಸ್ಥಾನಮಾನ ನೀಡುವುದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರವು ಮಹತ್ವದ ಕ್ರಮ ತೆಗೆದುಕೊಂಡಿದ್ದು, ಡಾ ಮೋಹನ್ ಆಳ್ವ ಅವರ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಿದೆ. ಎರಡು ವಾರಗಳೊಳಗೆ ಈ ಸಂಬಂಧ ವರದಿ ನೀಡುವಂತೆ ಸೂಚಿಸಲಾಗಿದೆ.

ಈ ವಿಚಾರವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್ ಟ್ವೀಟ್ ಮಾಡಿ ತಿಳಿಸಿದ್ದಾರೆ. ಸಂವಿಧಾನದ 8ನೇ ಪರಿಚ್ಛೇದಕ್ಕೆ ತುಳು ಭಾಷೆಯನ್ನು ಸೇರಿಸಬೇಕೆಂದು ಕರಾವಳಿ ಕರ್ನಾಟಕದಲ್ಲಿ (Coastal Karnataka) ಹಲವು ವರ್ಷಗಳಿಂದ ಬೇಡಿಕೆ ವ್ಯಕ್ತವಾಗುತ್ತಿತ್ತು. ಸಂಸದರು ಸಹ ಈ ಸಂಬಂಧ ಹಲವು ಬಾರಿ ಕೇಂದ್ರ ಸರ್ಕಾರದ ಗಮನ ಸೆಳೆಯುವ ಪ್ರಯತ್ನ ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು.

ಸರ್ಕಾರದ ಪ್ರಸ್ತಾವಕ್ಕೆ ಮಿಶ್ರ ಪ್ರತಿಕ್ರಿಯೆ

ತುಳು ಭಾಷೆಗೆ ಅಧಿಕೃತ ಸ್ಥಾನಮಾನ ನೀಡುವ ಸರ್ಕಾರದ ಪ್ರಯತ್ನದ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪ್ರಖ್ಯಾತ ಪುತ್ತೂರು ಎನ್ನುವವರು ‘ಕರ್ನಾಟಕದವರು ಕನ್ನಡ, ತುಳು, ಕೊಡವ, ಕೊಂಕಣಿ, ಬ್ಯಾರಿ, ಕೊರಗ… ಇಲ್ಲಿನ ಮೂಲ ಭಾಷೆಗಳನ್ನು ಕಲಿಯಲಿ, ಶಿಕ್ಷಣದಲ್ಲಿ ಬಳಸುವಂತಾಗಲಿ. ನಮ್ಮ ಭಾಷೆಗಳ ಮೇಲೆ ಆಗುತ್ತಿರುವ ಹಿಂದಿ ಹೇರಿಕೆ ನಿಲ್ಲುವಂತಾಗಲಿ’ ಎಂದು ಸಲಹೆ ಮಾಡಿದ್ದಾರೆ. ಇದನ್ನು ಶರಣು ಎನ್ನುವವರು ಒಪ್ಪಿಲ್ಲ. ‘ನನಗೆ ತುಳು ಭಾಷೆಯ ಬಗ್ಗೆ ಗೌರವ ಇದೆ,ಆದರೆ ತುಳು ಭಾಷೆ ಹೇಗೆ ಕರ್ನಾಟಕದ ಎರಡನೇ ಅಧಿಕೃತ ಭಾಷೆ ಆಗುತ್ತದೆ? ಕರ್ನಾಟಕದಲ್ಲಿ ದಕ್ಷಿಣ ಕನ್ನಡ, ಉಡುಪಿ,ಕರಾವಳಿ ಭಾಗದ ಜನರು ಮಾತ್ರ ತುಳು ಭಾಷೆಯನ್ನು ಓದುತ್ತಾರೆ, ಬರೆಯುತ್ತಾರೆ, ಮಾತಾಡುತ್ತಾರೆ. ಕರ್ನಾಟಕದ 6.5 ಕೋಟಿ ಜನಸಂಖ್ಯೆಯಲ್ಲಿ ಕೇವಲ 30 ಲಕ್ಷ ಜನರು ತುಳು ಭಾಷೆ ಮಾತಾಡುತ್ತಾರೆ’ ಎಂದು ತರ್ಕವೊಂದನ್ನು ಮುಂದಿಟ್ಟಿದ್ದಾರೆ.

ಸಚಿವ ಸುನಿಲ್ ಕುಮಾರ್ ತುಳು ಭಾಷೆಗೆ ಅಧಿಕೃತ ಸ್ಥಾನಮಾನ ತಂದುಕೊಡುವ ಪ್ರಯತ್ನಗಳ ಬಗ್ಗೆ ಮಾತನಾಡಿದ್ದರೂ ಪ್ರತಿಕ್ರಿಯಿಸಿರುವ ಹಲವರು ಹಿಂದಿಯ ಬಗ್ಗೆಯೇ ಪ್ರಸ್ತಾಪಿಸಿದ್ದಾರೆ. ಅರುಣ್ ವಿರೂಪಾಕ್ಷ ಎನ್ನುವವರು ಕಾಮೆಂಟ್ ಮಾಡಿ, ‘ಒಳ್ಳೆಯ ನಿರ್ಧಾರ. ತುಳು, ಕೊಂಕಣಿ, ಬ್ಯಾರಿ, ಕೊಡವ ಯಾವುದಾದರೂ ಭಾಷೆಯನ್ನು ಕರ್ನಾಟಕದ ಮಕ್ಕಳು ಕಲಿಯುವಂತಾಗಲಿ. ಅನವಶ್ಯಕ ಹಿಂದಿ ಭಾಷೆಯ ಕಲಿಕೆ ಮತ್ತು ಹಿಂದಿ ಹೇರಿಕೆ ನಿಲ್ಲಲಿ. ಹಾಗೆಯೇ ಮಾತೃ ಭಾಷೆ ಕನ್ನಡವನ್ನ ಪ್ರಥಮ ಭಾಷೆಯಾಗಿ ಎಲ್ಲ ಸರ್ಕಾರಿ ಮತ್ತು ಖಾಸಗಿ ಶಾಲೆಗಳಲ್ಲಿ ಕಡ್ಡಾಯ ಮಾಡಿ’ ಎಂಉದು ಒತ್ತಾಯಿಸಿದ್ದಾರೆ.

ಸುಧೀರ್ ಎನ್ನುವವರು ‘ಕನ್ನಡಿಗರು ಕನ್ನಡವನ್ನು, ತುಳುವರು ತುಳು ಭಾಷೆಯನ್ನು ಮೊದಲ ಭಾಷೆಯಾಗಿ ಕಲಿಯುವಂತಾಗಬೇಕು. ಅದು ಭಾಷಿಕ ಸಾಮರಸ್ಯ’ ಎಂದು ಹೇಳಿದ್ದಾರೆ. ಮಹೇಶ್ ಎನ್ನುವವರು ‘ಹಿಂದಿಯನ್ನು ಕಿತ್ತು ಬಿಸಾಕೋಕೆ ಆಯೋಗ ಮಾಡಿ. ಹಿಂದಿಯನ್ನು ಮಾತ್ರ ಬಳಸುತ್ತಿರುವ ಬಿಜೆಪಿ ಕಾರ್ಯಕ್ರಮಗಳ ಮೇಲೆ ದಂಡ ಹಾಕಿ’ ಎಂದು ಒತ್ತಾಯಿಸಿದ್ದಾರೆ. ಪ್ರತೀಕ್ ಪೊನ್ನಣ್ಣ ಎನ್ನುವವರು ‘ಕೊಡವ ಭಾಷೆ ಏನು ಮಾಡಿತ್ತು ನಿಮಗೆ? ಕೊಡವ ಭಾಷೆಯನ್ನು ಕೂಡ ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡಿ’ ಎಂದು ಒತ್ತಾಯಿಸಿದ್ದಾರೆ.

ಪಂಚ ದ್ರಾವಿಡ ಭಾಷೆಗಳು

ತುಳು ಭಾಷೆಯು ಪಂಚದ್ರಾವಿಡ ಭಾಷೆಗಳಲ್ಲಿ ಒಂದು ಎಂದು ಭಾಷಾಶಾಸ್ತ್ರಜ್ಞರು ಹಲವು ವರ್ಷಗಳಿಂದ ವಾದಿಸುತ್ತಿದ್ದರು. ‘ಪಂಚದ್ರಾವಿಡ ಭಾಷೆಗಳಲ್ಲಿ ಒಂದಾ ಗಿರುವ ತುಳು ಭಾಷೆಗೆ 2,600 ವರ್ಷ ಗಳ ದೀರ್ಘ ಇತಿಹಾಸವಿದೆ. ಕನ್ನಡ, ತೆಲುಗು, ತಮಿಳು, ಮಲಯಾಳಿ ಭಾಷೆ ಗಳು ಸಂವಿಧಾನದ ಎಂಟನೇ ಪರಿಚ್ಛೇದದಲ್ಲಿ ಸೇರಿವೆ. ಆದರೆ, ತುಳು ಭಾಷೆಗೆ ಮಾತ್ರ ಇನ್ನೂ ಕೇಂದ್ರ ಸರ್ಕಾರದಿಂದ ಮಾನ್ಯತೆಯು ದೊರೆತಿಲ್ಲ. ತುಳು ಭಾಷೆಗೆ ತೋರಿರುವ ತಾತ್ಸಾರ ಮನೋಭಾವದಿಂದ ಭಾಷೆಯ ಬೆಳವಣಿಗೆಗೆ ತೊಡಕಾಗಿದೆ’ ಎಂದು ಹಿರಿಯ ಸಾಹಿತಿ ದಿವಂಗತ ಡಿ.ಕೆ.ಚೌಟ ಸೇರಿದಂತೆ ಹಲವರು ಒತ್ತಾಯಿಸಿದ್ದರು.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:53 pm, Tue, 31 January 23

ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ