AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು: ಮೈತ್ರಿ ಸಭೆಯಲ್ಲಿ ಜೆಡಿಎಸ್, ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ

ಲೋಕಸಭೆ ಚುನಾವಣೆ ಹಿನ್ನೆಲೆ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಮಾಡಿಕೊಂಡಿದೆ. ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಇಂದಾಗಿ ಕೆಲ ನಾಯಕರಲ್ಲಿ ಅಸಮಾಧಾನವಿತ್ತು. ಇದೀಗ ಮೈತ್ರಿ ಸಭೆಯಲ್ಲಿ ಜೆಡಿಎಸ್, ಬಿಜೆಪಿ ಕಾರ್ಯಕರ್ತರ ನಡುವೆ ವಾಗ್ವಾದ ಉಂಟಾಗಿದೆ. ತುಮಕೂರಿನಲ್ಲಿ ನಡೆದ ಸಭೆಯಲ್ಲಿ ಮಾತಿನ ಚಕಮಕಿ ಉಂಟಾಗಿದೆ.

ತುಮಕೂರು: ಮೈತ್ರಿ ಸಭೆಯಲ್ಲಿ ಜೆಡಿಎಸ್, ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ
ಜೆಡಿಎಸ್, ಬಿಜೆಪಿ ಕಾರ್ಯಕರ್ತರ ನಡುವೆ ವಾಗ್ವಾದ
ಮಹೇಶ್ ಇ, ಭೂಮನಹಳ್ಳಿ
| Edited By: |

Updated on: Mar 25, 2024 | 3:43 PM

Share

ತುಮಕೂರು, ಮಾರ್ಚ್​​​ 25: ಲೋಕಸಭೆ ಚುನಾವಣೆ (Lok Sabha Elections) ಹಿನ್ನೆಲೆ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಮಾಡಿಕೊಂಡಿದೆ. ಮಂಡ್ಯ, ಹಾಸನ, ಕೋಲಾರ ಕ್ಷೇತ್ರಗಳನ್ನ ಜೆಡಿಎಸ್‌ಗೆ ನೀಡಿದ್ದಾಗಿ ರಾಧಾ ಮೋಹನ್ ದಾಸ್ ಅಗರ್‌ವಾಲ್ ಇತ್ತೀಚೆಗೆ ಹೇಳಿದ್ದರು. ಆದರೆ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಇಂದಾಗಿ ಕೆಲ ನಾಯಕರಲ್ಲಿ ಅಸಮಾಧಾನವಿತ್ತು. ಬಿಜೆಪಿ ನಾಯಕರು ನಮ್ಮನ್ನು ಗಣನೆಗೆ ತೆಗೆದುಕೊಂಡಿಲ್ಲ ಜೆಡಿಎಸ್​ನ ಕೆಲ ನಾಯಕರು ಹೇಳಿದ್ದರು. ಅದೇ ರೀತಿಯಾಗಿ ಇತ್ತೀಚೆಗೆ ನಡೆದ ಸಭೆಯಲ್ಲಿ ಕೂಡ ಇದು ಕಂಡುಬಂದಿತ್ತು. ಇದೀಗ ಮೈತ್ರಿ ಸಭೆಯಲ್ಲಿ ಜೆಡಿಎಸ್, ಬಿಜೆಪಿ ಕಾರ್ಯಕರ್ತರ ನಡುವೆ ವಾಗ್ವಾದ ಉಂಟಾಗಿದೆ.

ಜಿಲ್ಲೆಯ ತುರುವೇಕೆರೆಯಲ್ಲಿ ನಡೆದ ಸಭೆಯಲ್ಲಿ ಮಾತಿನ ಚಕಮಕಿ ಉಂಟಾಗಿದ್ದು, ಬಿಜೆಪಿ ಮುಖಂಡ  ಕೊಂಡಜ್ಜಿ ವಿಶ್ವನಾಥ್​ ಅಸಮಾಧಾನ ಹೊರಹಾಕಿದ್ದಾರೆ. ಕಳೆದ ಬಾರಿ ನಾನು ಸೋಲಲು ವಿಶ್ವನಾಥ್ ಕಾರಣವೆಂದು ಭಾಷಣದ ವೇಳೆ ತುರುವೇಕೆರೆ ಕ್ಷೇತ್ರದ ಶಾಸಕ ಎಂ.ಟಿ.ಕೃಷ್ಣಪ್ಪ ಆರೋಪ ಮಾಡಿದ್ದಾರೆ. ಈ ವೇಳೆ M.T.ಕೃಷ್ಣಪ್ಪ ಆರೋಪಕ್ಕೆ ವಿಶ್ವನಾಥ್ ಸಮಜಾಯಿಷಿ ನೀಡಲು ಮುಂದಾದರು.

ಇದನ್ನೂ ಓದಿ: ಸ್ಪರ್ಧೆಗೆ ಮಂಡ್ಯ ಕಾರ್ಯಕರ್ತರಿಂದ ಒತ್ತಡ, ಚನ್ನಪಟ್ಟಣ ಕಾರ್ಯಕರ್ತರಿಂದ ವಿರೋಧ: ಇಕ್ಕಟ್ಟಿನಲ್ಲಿ ಹೆಚ್​ಡಿ ಕುಮಾರಸ್ವಾಮಿ

ಈ ವೇಳೆ ತುಮಕೂರು ಕ್ಷೇತ್ರದ BJP ಅಭ್ಯರ್ಥಿ ವಿ.ಸೋಮಣ್ಣ ಬೇಡವೆಂದರು. ವೇದಿಕೆ ಮುಂಭಾಗದಲ್ಲಿದ್ದ ಜೆಡಿಎಸ್ ಕಾರ್ಯಕರ್ತ ಸತೀಶ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕಾರ್ಯಕರ್ತರ ನಡುವೆ ವಾಗ್ವಾದ ಹಿನ್ನೆಲೆ ಸಭೆಯಲ್ಲಿ ಕೆಲಕಾಲ ಗೊಂದಲ ಉಂಟಾಗಿದ್ದು, ಎಂ.ಟಿ.ಕೃಷ್ಣಪ್ಪ, ಮಸಾಲೆ ಜಯರಾಂ ಮಧ್ಯಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ.

ಮೈತ್ರಿ ಅಂದ್ಮೇಲೆ ಒಂದು ಮಾತು ಬರುತ್ತೆ, ಹೋಗುತ್ತೆ. ಆದರೆ ಅದನ್ನೇ ಮನದಲ್ಲಿ‌ ಇಟ್ಕೊಂಡು ಚುನಾವಣೆಗೆ ಇಳಿದರೆ ಸಂಕಷ್ಟ ಕಟ್ಟಿಟ್ಟ ಬುದ್ದಿ. ಅತ್ತ ಬಿಹಾರದಲ್ಲಿ ಸೀಟು ಹಂಚಿಕೆ‌ ಸುಸೂತ್ರವಾಗಿ ನೆರವೇರಿತ್ತು. ಆದರೆ ಕರ್ನಾಟಕ ವಿಷ್ಯದಲ್ಲಿ ಹಾಗಾಗಿಲ್ಲ. ಎರಡೂ ಪಕ್ಷದಲ್ಲೂ ಸೀಟು ಹಂಚಿಕೆ ಸವಾಲಾಗಿ‌ತ್ತು‌. ಈಗ ಇದಕ್ಕೆಲ್ಲಾ ಬಿಜೆಪಿಯಿಂದ ಸ್ಪಷ್ಟತೆ ಸಿಕ್ಕಿದೆ. ರಾಜ್ಯದಲ್ಲಿ ಜೆಡಿಎಸ್​ಗೆ ಮೂರು ಸೀಟು ಬಿಟ್ಟು ಕೊಡುವ ಬಗ್ಗೆ ಚರ್ಚೆ ಆಗಿದೆ.‌ ಇದೇ‌ ಮಾಹಿತಿಯನ್ನು ಇತ್ತೀಚೆಗೆ ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ರಾಧಾ ಮೋಹನ್ ದಾಸ್ ಹೇಳಿದ್ದರು.

ಇದನ್ನೂ ಓದಿ: ಹಾಸನದಲ್ಲಿ ದೋಸ್ತಿ ಕುಸ್ತಿ: ಬೀದಿಗೆ ಬಂತು ಜೆಡಿಎಸ್, ಬಿಜೆಪಿ ಅಂತಃ ಕಲಹ

ಬಿಜೆಪಿ, ಜೆಡಿಎಸ್​ ಸೀಟು ಹಂಚಿಕೆ ಕಗ್ಗಂಟಿಗೆ ಸದ್ಯ ಹೈಕಮಾಂಡ್ ತೆರೆ ಎಳೆದಿದೆ. ಮಂಡ್ಯ, ಹಾಸನ, ಕೋಲಾರ ಕ್ಷೇತ್ರಗಳನ್ನ ಜೆಡಿಎಸ್‌ಗೆ ನೀಡಿದ್ದಾಗಿ ರಾಧಾ ಮೋಹನ್ ದಾಸ್ ಅಗರ್‌ವಾಲ್ ಹೇಳಿದ್ದರು. ಬಿಜೆಪಿ, ಜೆಡಿಎಸ್ ಕಾರ್ಯಕರ್ತರ ಜೊತೆಗೂಡಿ ಕೆಲಸ ಮಾಡುವಂತೆ ಬಿಜೆಪಿ ಕಾರ್ಯಕರ್ತರಿಗೆ ರಾಧಾ ಮೋಹನ್​ ದಾಸ್​ ಖಡಕ್​ ಸೂಚನೆ ಕೊಟ್ಟಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.