AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು: 11 ದಿನಗಳ ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು

ತುಮಕೂರು: 11 ದಿನಗಳ ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು

ಅಕ್ಷತಾ ವರ್ಕಾಡಿ
|

Updated on:Oct 11, 2026 | 12:57 PM

Share

ತುಮಕೂರು ದಸರಾ 2026ರ 11 ದಿನಗಳ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧಗಂಗಾ ಶ್ರೀಗಳು ಚಾಲನೆ ನೀಡಿದರು. ಈ ಭವ್ಯ ದಸರಾ ಮಹೋತ್ಸವವು ದುಷ್ಟ ಶಕ್ತಿಗಳ ವಿರುದ್ಧ ಶಿಷ್ಟ ಶಕ್ತಿಗಳ ವಿಜಯವನ್ನು ಸಾರಲಿದೆ. ಡಿಸಿಎಂ ಜಿ. ಪರಮೇಶ್ವರ್ ಸೇರಿದಂತೆ ಹಲವು ಗಣ್ಯರು, ಶ್ರೀಗಳು ಮತ್ತು ಶಾಸಕರು ಉದ್ಘಾಟನಾ ಸಮಾರಂಭದಲ್ಲಿ ಉಪಸ್ಥಿತರಿದ್ದರು. 5,000 ಕಲಾವಿದರು ಹಾಗೂ ಸ್ಯಾಂಡಲ್‌ವುಡ್ ಗಾಯಕರು ಭಾಗವಹಿಸಲಿದ್ದಾರೆ.

ತುಮಕೂರು ದಸರಾ ಮಹೋತ್ಸವಕ್ಕೆ ಸಿದ್ಧಗಂಗಾ ಮಠದ ಪರಮಪೂಜ್ಯ ಶ್ರೀ ಸಿದ್ಧಲಿಂಗ ಸ್ವಾಮೀಜಿ ಅವರು ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಅವರು ಉಪಸ್ಥಿತರಿದ್ದರು. ವೇದಿಕೆ ಮೇಲೆ ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ, ಹನುಮಂತನಾಥ ಶ್ರೀ, ವೀರಭದ್ರ ಶಿವಾಚಾರ್ಯ ಶ್ರೀ ಮತ್ತು ವೀರಬಸವ ಸ್ವಾಮೀಜಿಗಳ ದಿವ್ಯ ಸಾನಿಧ್ಯವಿತ್ತು. ಇದೇ ಸಂದರ್ಭದಲ್ಲಿ ಕಾರದೀಶ್ವರ ಮಠ, ಬೆಳ್ಳಾವಿಯ ಶ್ರೀ ಶ್ರೀ ಶ್ರೀ ಕಾರದ ವೀರಬಸವ ಮಹಾಸ್ವಾಮಿಗಳನ್ನು ಜಿಲ್ಲಾಡಳಿತದ ಪರವಾಗಿ ಸ್ವಾಗತಿಸಲಾಯಿತು. ಶಾಸಕರಾದ ಜ್ಯೋತಿಗಣೇಶ್, ಕೆ. ವೆಂಕಟೇಶ್ ಮತ್ತು ಕೆ. ಷಡಕ್ಷರಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಈ ಮಹೋತ್ಸವದಲ್ಲಿ ಒಂದೇ ವೇದಿಕೆಯಲ್ಲಿ 5,000ಕ್ಕೂ ಹೆಚ್ಚು ಕಲಾವಿದರು ತಮ್ಮ ಕಲಾಪ್ರತಿಭೆಯನ್ನು ಪ್ರದರ್ಶಿಸಲಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published on: Oct 11, 2026 12:56 PM

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More