ಹೇಮಾವತಿ ಲಿಂಕ್ ಕೆನಾಲ್ ವಿರೋಧಿಸಿ ಜೂ 25ರಂದು ತುಮಕೂರು ಜಿಲ್ಲೆ ಬಂದ್‌ಗೆ ಕರೆ
ಹೇಮಾವತಿ ಲಿಂಕ್ ಕೆನಾಲ್ ವಿರೋಧಿಸಿ ಜೂನ್ 25 ರಂದು ತುಮಕೂರು ಜಿಲ್ಲೆ ಬಂದ್‌ಗೆ ಹೋರಾಟ ಸಮಿತಿ ಕರೆ ನೀಡಿದೆ. ನಾಳೆ ತುಮಕೂರು ನಗರ ಸೇರಿದಂತೆ 10 ತಾಲೂಕುಗಳಲ್ಲಿ ಬಂದ್‌ಗೆ ಸಿದ್ಧತೆ ಮಾಡಲಾಗಿದೆ. ಆಯಾ ತಾಲೂಕು ಕೇಂದ್ರಗಳಲ್ಲಿ ಹೋರಾಟಗಾರರು ಪ್ರತಿಭಟನೆ ನಡೆಸಲಿದ್ದಾರೆ. ಸ್ವಯಂಪ್ರೇರಿತರಾಗಿ ಬಂದ್‌ಗೆ ಬೆಂಬಲ ನೀಡುವಂತೆ ಹೋರಾಟ ಸಮಿತಿ ಮನವಿ ಮಾಡಿದೆ.
ತುಮಕೂರು, ಜೂನ್ 24: ಹೇಮಾವತಿ (Hemavati River) ಲಿಂಕ್ ಕೆನಾಲ್ ವಿರೋಧಿಸಿ ಜೂನ್ 25 ರಂದು ತುಮಕೂರು ಜಿಲ್ಲೆ ಬಂದ್‌ಗೆ (Bandh) ಹೋರಾಟ ಸಮಿತಿ ಕರೆ ನೀಡಿದೆ. ವಿವಿಧ ರೈತಪರ, ಕನ್ನಡಪರ ಸಂಘಟನೆಗಳು, ಮಠಾಧೀಶರು, ವರ್ತಕರು, ವಕೀಲರ ಸಂಘ, ಹೋಟೆಲ್ ಅಸೋಸಿಯೇಷನ್ ಸೇರಿ ಹಲವು ಸಂಘಟನೆಗಳಿಂದ ಬಂದ್‌ಗೆ ಬೆಂಬಲ ಸೂಚಿಸಿವೆ. ನಾಳೆ ಬೆಳಗ್ಗೆ 10 ಗಂಟೆಗೆ ಟೌನ್‌ಹಾಲ್‌ನಿಂದ ಪ್ರತಿಭಟನಾ ಮೆರವಣಿಗೆ ನಡೆಯಲಿದ್ದು, ಬಳಿಕ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಗುವುದು.
ನಾಳೆ ತುಮಕೂರು ನಗರ ಸೇರಿದಂತೆ 10 ತಾಲೂಕುಗಳಲ್ಲಿ ಬಂದ್‌ಗೆ ಸಿದ್ಧತೆ ಮಾಡಲಾಗಿದೆ. ಆಯಾ ತಾಲೂಕು ಕೇಂದ್ರಗಳಲ್ಲಿ ಹೋರಾಟಗಾರರು ಪ್ರತಿಭಟನೆ ನಡೆಸಲಿದ್ದಾರೆ. ಸ್ವಯಂಪ್ರೇರಿತರಾಗಿ ಬಂದ್‌ಗೆ ಬೆಂಬಲ ನೀಡುವಂತೆ ಹೋರಾಟ ಸಮಿತಿ ಮನವಿ ಮಾಡಿದೆ.
ಇದನ್ನೂ ಓದಿ: ಹೇಮಾವತಿ ಲಿಂಕ್ ಕೆನಾಲ್ಗೆ 3 ಹಿಡಿ ಮಣ್ಣು ಹಾಕುವ ಮೂಲಕ ಹೋರಾಟಕ್ಕೆ ಚಾಲನೆ, ಏನಿದು ಯೋಜನೆ? ಏಕೆ ವಿರೋಧ?
ಹೇಮಾವತಿ ನಾಲಾ ವ್ಯಾಪ್ತಿಯ ಗುಬ್ಬಿ, ತುರುವೇಕೆರೆ ತಾಲೂಕು ಹಾಗೂ ತುಮಕೂರು ತಾಲೂಕುಗಳಲ್ಲಿ ಬಂದ್‌ಗೆ ತೀವ್ರ ಸ್ವರೂಪ ಪಡೆಯಲಿದೆ. ಹೀಗಾಗಿ ಜಿಲ್ಲಾದ್ಯಂತ ಬಂದ್ ಹಿನ್ನೆಲೆ ಪೊಲೀಸ್ ಇಲಾಖೆಯಿಂದಲೂ ಬಿಗಿ ಭದ್ರತೆ ಕೈಗೊಂಡಿದ್ದು, 3 ತಾಲೂಕುಗಳಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಿದೆ.
ಇದನ್ನೂ ಓದಿ: ಮಳೆಗೆ ಕೈ ಬೀಸಿ ಕರೆಯುತ್ತಿರೋ ಪ್ರಕೃತಿ ಸೊಬಗು; ನೋಡುಗರ ಮನ ಸೆಳೆಯುತ್ತಿದೆ ದೇವರಾಯನದುರ್ಗ ಬೆಟ್ಟ ಹಾಗೂ ನಾಮದಚಿಲುಮೆ
ಬಂದ್ ವಿಚಾರವಾಗಿ ತುಮಕೂರಿನಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ ವೆಂಕಟ್ ಮಾಧ್ಯಮದವರೊಂದಿಗೆ ಮಾತನಾಡಿದ್ದು, ಬಲವಂತವಾಗಿ ಅಂಗಡಿ-ಮುಂಗಟ್ಟು ಮುಚ್ಚಿಸದರೆ ಕ್ರಮ ಕೈಗೊಳ್ಳುತ್ತೇವೆ ಎಂದು ಖಡಕ್ ಸೂಚನೆ ನೀಡಿದ್ದಾರೆ.
ಹೇಮಾವತಿ ನೀರನ್ನ ಕುಣಿಗಲ್ ಮತ್ತು ಮಾಗಡಿ ತಾಲೂಕಿನ 33 ಕೆರೆಗಳಿಗೆ ನೀರು ಹರಿಸುವ ಉದ್ದೇಶದಿಂದ ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ಯೋಜನೆಗೆ ಸರ್ಕಾರ ಈಗಾಗಲೇ ಒಪ್ಪಿಗೆ ನೀಡಿತ್ತು. ಡಿಸಿಎಂ ಡಿಕೆ ಶಿವಕುಮಾರ್ ಅವರ ಕನಸಿನ ಯೋಜನೆ ಇದಾಗಿದೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಸಹೋದರ ಡಿಕೆ ಸುರೇಶ್ ಅವರ ಗೆಲುವಿಗೆ ಸಹಕಾರಿಯಾಗುತ್ತದೆ ಎನ್ನುವ ಉದ್ದೇಶದಿಂದ ತರಾತುರಿಯಲ್ಲಿಯೇ ಈ ಯೋಜನೆಗೆ ಶಂಕುಸ್ಥಾಪನೆಯನ್ನೂ ನೆರವೇರಿಸಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 9:35 pm, Mon, 24 June 24