ತುಮಕೂರು, (ಸೆಪ್ಟೆಂಬರ್ 27): ಜೆಡಿಎಸ್, ಬಿಜೆಪಿಯೊಂದಿಗೆ ಮೈತ್ರಿ (JDS And BJP Alliance) ಮಾಡಿಕೊಂಡಿದ್ದು, ಮುಂಬರುವ ಲೋಕಸಭಾ ಚುನಾವಣೆಗೆ (Loksabha Elections 2024) ಜಂಟಿಯಾಗಿ ಅಖಾಡಕ್ಕಿಳಿಯಲಿವೆ. ಆದ್ರೆ, ಅದಕ್ಕೂ ಮುನ್ನ ಜೆಡಿಎಸ್ ನಾಯಕರು ಒಬ್ಬೊಬ್ಬರಾಗಿಯೇ ಪಕ್ಷ ತೊರೆಯುತ್ತಿದ್ದಾರೆ. ಇದೀಗ ತುಮಕೂರಿನಲ್ಲಿ (Tumakuru) ಜೆಡಿಎಸ್ನ ಮತ್ತೊಂದು ವಿಕೆಟ್ ಪತನವಾಗಿದೆ. ಅಲ್ಪಸಂಖ್ಯಾತ ಸಮುದಾಯದ ಮುಖಂಡ ಹಾಗೂ ಮಾಜಿ ಶಾಸಕ ಶಫಿ ಅಹಮದ್(shafi ahmed) ಜೆಡಿಎಸ್ಗೆ ರಾಜೀನಾಮೆ ನೀಡಿದ್ದಾರೆ.
ಜೆಡಿಎಸ್ ಪ್ರಾಥಮಿಕ ಸದಸ್ಯತ್ವ ಹಾಗೂ ರಾಜ್ಯಾ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಶಫೀ ಅಹಮದ್ ರಾಜೀನಾಮೆ ನೀಡಿದ್ದು, ರಾಜೀನಾಮೆ ಪತ್ರವನ್ನು ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಹಾಗೂ ಜಿಲ್ಲಾ ಅಧ್ಯಕ್ಷರಿಗೆ ರವಾನಿಸಿದ್ದಾರೆ. ಅಲ್ಲದೇ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್ಡಿ ಕುಮಾರಸ್ವಾಮಿ, ಹೆಚ್ಡಿ ದೇವೇಗೌಡ ಅವರಿಗೆ ವಾಟ್ಸಪ್ ಮಾಡಿದ್ದಾರೆ.
ಇದನ್ನೂ ಓದಿ: ಜೆಡಿಎಸ್ಗೆ ಬಿಗ್ ಶಾಕ್, ಸಾಮೂಹಿಕವಾಗಿ ಪಕ್ಷ ತೊರೆಯಲು ತೀರ್ಮಾನಿಸಿದ ಮುಸ್ಲಿಂ ನಾಯಕರು
ಕಳದ ವಿಧಾನಸಭಾ ಚುನಾವಣೆಯಲ್ಲಿ ಅಹಮದ್ ಕಾಂಗ್ರೆಸ್ಗೆ ಗುಡ್ ಬೈ ಹೇಳಿ ಜೆಡಿಎಸ್ ಸೇರಿದ್ದರು. ಇದೀಗ ಜೆಡಿಎಸ್ ತೊರೆದು ವಾಪಸ್ ಕಾಂಗ್ರೆಸ್ನತ್ತ ಮುಖ ಮಾಡಿದ್ದಾರೆ. ಆದ್ರೆ, ಕಾಂಗ್ರೆಸ್ ಸೇರುವ ಬಗ್ಗೆ ಇನ್ನೂ ಅವರು ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.
ಮೊನ್ನೇ ಅಷ್ಟೇ ಜೆಡಿಎಸ್ನ ಅಲ್ಪಸಂಖ್ಯಾತ ನಾಯಕರು ಸಭೆ ಮಾಡಿದ್ದು, ಸಾಮೂಹಿಕವಾಗಿ ಜೆಡಿಎಸ್ ತೊರೆಯಲು ತೀರ್ಮಾನಿಸಿದ್ದಾರೆ. ಆದ್ರೆ, ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಇದುವರೆಗೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೂ ಇಬ್ರಾಹಿಂ ಸಹ ಜೆಡಿಎಸ್ಗೆ ಗುಡ್ಬೈ ಹೇಳುವ ಸಾಧ್ಯತೆಗಳು ಹೆಚ್ಚಿವೆ. ಯಾಕಂದ್ರೆ ಇಬ್ರಾಹಿಂ ಹಾಗೂ ಬಿಜೆಪಿಯ ಸಿದ್ಧಾಂತಗಳನ್ನು ಮೊದಲಿನಿಂದಲೂ ವಿರೋಧಿಸಿಕೊಂಡು ಬಂದಿದ್ದಿದ್ದಾರೆ. ಇದೀಗ ಜೆಡಿಎಸ್ ಬಿಜೆಪಿಯೊಂದಿಗೆ ಮೈತ್ರಿ ಮಾಡಿಜೊಂಡಿದೆ. ಇದರಿಂದ ಅವರು ಪಕ್ಷ ತೊರೆದರೂ ಅಚ್ಚರಿಪಡಬೇಕಿಲ್ಲ.
ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ