ಹೊರಗುತ್ತಿಗೆಯಲ್ಲಿ ಮೀಸಲಾತಿ ತರಲು ಮುಂದಾದ ಸರ್ಕಾರ: ಆರೋಗ್ಯ ಇಲಾಖೆ ನೌಕರರ ವಿರೋಧ ಏಕೆ?

ಹೊರಗುತ್ತಿಗೆ ಪದ್ಧತಿಯಲ್ಲೂ ಮೀಸಲಾತಿ ತರಲು ಮುಂದಾಗಿರುವ ರಾಜ್ಯ ಸರ್ಕಾರದ ನಡೆಗೆ ತುಮಕೂರಿನ ಆರೋಗ್ಯ ಇಲಾಖೆ ವಿವಿಧ ವೃಂದದ ಹೊರಗುತ್ತಿಗೆ ನೌಕರರಿಂದ ವಿರೋಧ ವ್ಯಕ್ತವಾಗಿದೆ. ಒಂದು ವೇಳೆ ಸರ್ಕಾರ ಮೀಸಲಾತಿ ಜಾರಿ ಮಾಡಿದರೆ ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿರುವ ಸಾಕಷ್ಟು ಕುಟುಂಬಗಳು ಬೀದಿ ಪಾಲಾಗುತ್ತವೆ. ಹಾಗಾಗಿ ಯಾವುದೇ ಕಾರಣಕ್ಕೂ ಮೀಸಲಾತಿ ಬೇಡ ಎಂದು ಒತ್ತಾಯಿಸಲಾಗಿದೆ.

ಹೊರಗುತ್ತಿಗೆಯಲ್ಲಿ ಮೀಸಲಾತಿ ತರಲು ಮುಂದಾದ ಸರ್ಕಾರ: ಆರೋಗ್ಯ ಇಲಾಖೆ ನೌಕರರ ವಿರೋಧ ಏಕೆ?
ಹೊರಗುತ್ತಿಗೆಯಲ್ಲಿ ಮೀಸಲಾತಿ ತರಲು ಮುಂದಾದ ಸರ್ಕಾರ: ಆರೋಗ್ಯ ಇಲಾಖೆ ನೌಕರರ ವಿರೋಧ ಏಕೆ?
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: May 26, 2024 | 4:34 PM

ತುಮಕೂರು, ಮೇ 26: ಹೊರಗುತ್ತಿಗೆ ಪದ್ಧತಿಯಲ್ಲೂ ಮೀಸಲಾತಿ (reservation) ತರಲು ಸರ್ಕಾರ ಮುಂದಾಗಿದೆ. ಆದರೆ ಸರ್ಕಾರದ ನಡೆಗೆ ಆರೋಗ್ಯ ಇಲಾಖೆ ವಿವಿಧ ವೃಂದದ ಹೊರಗುತ್ತಿಗೆ ನೌಕರರಿಂದ ವಿರೋಧ ವ್ಯಕ್ತವಾಗಿದೆ.  ತುಮಕೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ವಿರೋಧ ವ್ಯಕ್ತಪಡಿಸಿರುವ ನೌಕರರು (employees), ಹೊರಗುತ್ತಿಗೆಯಲ್ಲಿ ಮೀಸಲಾತಿ ಜಾರಿಯಾದರೆ ಬೀದಿ ಪಾಲಾಗುತ್ತವೆ. ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿರುವ ಕುಟುಂಬಗಳು ಬೀದಿ ಪಾಲಾಗುತ್ತವೆ. ಯಾವುದೇ ಕಾರಣಕ್ಕೂ ಹೊರಗುತ್ತಿಗೆಯಲ್ಲಿ ಮೀಸಲಾತಿಯನ್ನ ತರಬಾರದು ಎಂದು ಒತ್ತಾಯಿಸಿದ್ದಾರೆ.

ಇನ್ನು ಮೀಸಲಾತಿ ವಿಚಾರದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಕ್ಷರಿ ನೀಡಿರುವ ಹೇಳಿಕೆ ಸರಿಯಲ್ಲ. ಹೊರಗುತ್ತಿಗೆ ನೌಕರರ ಬಗ್ಗೆ ಲಘುವಾಗಿ ಮಾತನಾಡಿರುವುದಕ್ಕೆ ವಿರೋಧವಿದೆ. ಇಲಾಖೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ 9 ಸಾವಿರಕ್ಕೂ ಹೆಚ್ಚು ನೌಕರರು ಕೆಲಸ ಮಾಡುತ್ತಿದ್ದಾರೆ ಎಂದರು.

ಇದನ್ನೂ ಓದಿ: ರಾಜ್ಯ ಸರ್ಕಾರದ ಹೊರ ಗುತ್ತಿಗೆ ನೇಮಕಾತಿಯಲ್ಲೂ ಮೀಸಲಾತಿ: ಮಹಿಳೆಯರಿಗೆ ಬಂಪರ್ ಕೊಡುಗೆ

ಸರ್ಕಾರವು ಖಾಸಗಿ ಸಂಸ್ಥೆಗೆ ಟೆಂಡರ್ ನೀಡಿ ನೌಕರರನ್ನು ಶೋಷಿಸುತ್ತಿದೆ. ಖಾಸಗಿ ಸಂಸ್ಥೆ ಬದಲು ಸರ್ಕಾರದಡಿ ಬರುವ ಸಂಸ್ಥೆಗೆ ಟೆಂಡರ್ ನೀಡಬೇಕು. ಆ ಮೂಲಕ ಸೇವಾಭದ್ರತೆ ನೀಡುವುದು ಸೇರಿದಂತೆ ಹಲವು ಬೇಡಿಕೆಗಳನ್ನು ನೌಕರರು ಮುಂದಿಟ್ಟಿದ್ದಾರೆ.

ಇತ್ತೀಚೆಗೆ ರಾಜ್ಯ ಸರ್ಕಾರ ವಿವಿಧ ಹುದ್ದೆಗಳಿಗೆ ಹೊರಗುತ್ತಿಗೆ ಆಧಾರದಲ್ಲಿ ನೇಮಕಾತಿಯಲ್ಲೂ ಮೀಸಲಾತಿ ಕಲ್ಪಿಸಲು ಕರ್ನಾಟಕ ಸರ್ಕಾರ ಮಹತ್ವದ ಆದೇಶ ಹೊರಡಿಸಿತ್ತು. ರಾಜ್ಯ ಸರ್ಕಾರದ ಕಛೇರಿಗಳಲ್ಲಿನ ವಾಹನ ಚಾಲಕರು, ಡಾಟಾ ಎಂಟ್ರಿ ಆಪರೇಟರ್, ಸ್ವಚ್ಛತಾ ಸಿಬ್ಬಂದಿ, ಗ್ರೂಪ್-ಡಿ ಹುದ್ದೆಗಳನ್ನು ಹೊರಗುತ್ತಿಗೆ ಮೂಲಕ ಭರ್ತಿ ಮಾಡಿಕೊಳ್ಳುವುದು ಸರ್ಕಾರದ ಇತ್ತೀಚಿನ ಅಂಗೀಕೃತ ಕಾರ್ಯ ನೀತಿಯಾಗಿರುತ್ತದೆ. ಆದರೆ, ಇನ್ನು ಮುಂದೆ ಎಲ್ಲ ಹೊರಗುತ್ತಿಗೆ ನೇಮಕಾತಿಯಲ್ಲಿಯೂ ಮೀಸಲಾತಿಯನ್ನು ಕಡ್ಡಾಯವಾಗಿ ಅನುಸರಿಸಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು.

ಇದನ್ನೂ ಓದಿ: ಹಾಸ್ಟೆಲ್ ಹೊರಗುತ್ತಿಗೆ ಸಿಬ್ಬಂದಿಗೆ ಸಂಕಷ್ಟ; ಕಳೆದ ಒಂಬತ್ತು ತಿಂಗಳಿಂದ ವೇತನ ಸಿಗದೇ ಪರದಾಟ

ಹೊರಗುತ್ತಿಗೆ ನೇಮಕಾತಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳಿಗೆ ನಿಗದಿಪಡಿಸಿದ ಮೀಸಲಾತಿ ಪ್ರಮಾಣದಲ್ಲಿ ಕನಿಷ್ಠ ಶೇಕಡ 33 ರಷ್ಟು ಮಹಿಳೆಯರನ್ನು ನೇಮಕಾತಿ ಮಾಡಿಕೊಳ್ಳುವುದಕ್ಕೆ ಆದೇಶದಲ್ಲಿ ಸೂಚಿಸಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ತಾಜಾ ಸುದ್ದಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
ವಿದ್ಯಾರ್ಥಿಗಳ ನಡುವೆಯೂ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಜನಪ್ರಿಯರು
ವಿದ್ಯಾರ್ಥಿಗಳ ನಡುವೆಯೂ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಜನಪ್ರಿಯರು
 ದುಡ್ಡಿನ ವಿಷಯದಲ್ಲಿ ದರ್ಶನ್ ಕಡ್ಡಿ ಮುರಿದಂತೆ ಮಾತಾಡುತ್ತಿದ್ದರು: ಕೆ ಮಂಜು
 ದುಡ್ಡಿನ ವಿಷಯದಲ್ಲಿ ದರ್ಶನ್ ಕಡ್ಡಿ ಮುರಿದಂತೆ ಮಾತಾಡುತ್ತಿದ್ದರು: ಕೆ ಮಂಜು