ತುಮಕೂರು: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ, ಓರ್ವ ಬಾಲಕಿ ಸೇರಿ ಆರು ಸಾವು

ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಕೆರೆಗಳಪಾಳ್ಯ ಬಳಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಆರು ದುರ್ಮರಣ ಹೊಂದಿರುವಂತಹ ಘಟನೆ ನಡೆದಿದೆ. ಒಂದೇ ಕುಟುಂಬದ ನಾಲ್ವರು, ಮತ್ತೊಂದು ಕಾರು ಚಾಲಕ ಸಹ ಮೃತಪಟ್ಟಿದ್ದಾರೆ. ಮಧುಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ತುಮಕೂರು: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ, ಓರ್ವ ಬಾಲಕಿ ಸೇರಿ ಆರು ಸಾವು
ತುಮಕೂರು: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ, ಓರ್ವ ಬಾಲಕಿ ಸೇರಿ ಐವರು ಸಾವು
Follow us
ಮಹೇಶ್ ಇ, ಭೂಮನಹಳ್ಳಿ
| Updated By: ಗಂಗಾಧರ​ ಬ. ಸಾಬೋಜಿ

Updated on:Sep 08, 2024 | 11:11 PM

ತುಮಕೂರು, ಸೆಪ್ಟೆಂಬರ್​ 08: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ (collision) ಹೊಡೆದ ಪರಿಣಾಮ ಓರ್ವ ಬಾಲಕಿ ಸೇರಿ ಆರು ದುರ್ಮರಣ ಹೊಂದಿರುವಂತಹ ಘಟನೆ ಜಿಲ್ಲೆಯ ಮಧುಗಿರಿ ತಾಲೂಕಿನ ಕೆರೆಗಳಪಾಳ್ಯ ಬಳಿ ನಡೆದಿದೆ. ಪಾವಗಡ ತಾಲೂಕಿನ ಎತ್ತಿನಹಳ್ಳಿ ಗ್ರಾಮದ ಜನಾರ್ದನ ರೆಡ್ಡಿ(60), ಸಿಂಧೂ(33), ವೇದಾಸ್ ರೆಡ್ಡಿ(12), ಆನಂದ್(30), ಕಾರೇನಹಳ್ಳಿ ಗ್ರಾಮದ ನಾಗರಾಜ್, ಸಿದ್ದಗಂಗಾ(35) ಮೃತರು.

ಅಪಘಾತದಲ್ಲಿ 1 ವರ್ಷದ ಗಂಡು ಮಗುವಿಗೆ ಗಂಭೀರ ಗಾಯವಾಗಿದ್ದು, ನಾಲ್ವರು ಗಾಯಾಳುಗಳಿಗೆ ತುಮಕೂರು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಧುಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಕೆಎ-03 NB 2646 ಸಂಖ್ಯೆಯ ನೆಕ್ಸಾ ಮಾರುತಿ ಕಾರು ಹಾಗೂ ಕೆಎ-64 M 2627 ಸಂಖ್ಯೆಯ ಟಿಯಾಗೋ ಕಾರು ನಡುವೆ ಅಪಘಾತ ಸಂಭವಿಸಿದೆ. ಮಧುಗಿರಿ ಕಡೆಯಿಂದ ತುಮಕೂರು ಕಡೆಗೆ ಟಿಯಾಗೋ ಕಾರು ಹೊರಟಿತ್ತು. ಸ್ಥಳಕ್ಕೆ ಮಧುಗಿರಿ ಪಿಎಸ್​ಐ ವಿಜಯ್ ಕುಮಾರ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಅಪಘಾತ ಕಾರುಗಳ ತೆರವು ಕಾರ್ಯಾಚರಣೆ ಮಾಡಲಾಗಿದೆ.

ಜಾಗದ ವಿಚಾರಕ್ಕೆ ಮಹಿಳೆ ಮೇಲೆ ಹಲ್ಲೆ ಆರೋಪ: ದೂರು, ಪ್ರತಿದೂರು ದಾಖಲು

ಉತ್ತರ ಕನ್ನಡ: ಜಾಗದ ವಿಚಾರಕ್ಕೆ ಮಹಿಳೆ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಜಿಲ್ಲೆಯ ದಾಂಡೇಲಿ ಬಸ್ ನಿಲ್ದಾಣದ ಬಳಿ ಘಟನೆ ನಡೆದಿದೆ. ಇಂದು ಬೆಳಗ್ಗೆ ಮನೆಯ ಹಿಂಬದಿ ಜಾಗದಲ್ಲಿ ಮಹಿಳೆ ಸುಧಾ ಕಂಬ ಹಾಕುತ್ತಿದ್ದರು. ಈ ವೇಳೆ ಸ್ಥಳಕ್ಕೆ ಬಂದು ಪಕ್ಕದ ಲಾಡ್ಜ್ ಮಾಲೀಕ ಅಸ್ಲಾಂ ನೀರಲಗಿ ತಡೆದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.

ಇದನ್ನೂ ಓದಿ: ರಾಯಚೂರಿನಲ್ಲಿ ಮತ್ತೊಂದು ಬಸ್ ಅಪಘಾತ: ಚಾಲಕ ಸಾವು, 9 ಜನರಿಗೆ ಗಾಯ

ಸುಧಾರನ್ನು ಹಿಡಿದು ಎಳೆದಾಡಿ ಸರ ತುಂಡರಿಸಿದ್ದಾಗಿ, ಅಲ್ಲದೇ ಜೀವ ಬೆದರಿಕೆ ಹಾಕಿದ ಆರೋಪ ಮಾಡಲಾಗಿದೆ. ದಾಂಡೇಲಿ ಠಾಣೆಗೆ ಹಲ್ಲೆಗೊಳಗಾದ ಸುಧಾ ಪ್ರದೀಪ್ ದೂರು ನೀಡಿದ್ದಾರೆ. ಅತ್ತ ಲಾಡ್ಜ್ ಮಾಲೀಕ ಅಸ್ಲಾಂ ನೀರಲಗಿಯಿಂದಲೂ ಪ್ರತಿದೂರು ನೀಡಲಾಗಿದೆ. ನನ್ನ ಹಾಗೂ ಸಿಬ್ಬಂದಿ ಮೇಲೆ ಸುಧಾ ಹಲ್ಲೆಗೆ ಯತ್ನಿಸಿರುವುದಾಗಿ ದಾಂಡೇಲಿ ನಗರ ಪೊಲೀಸ್ ಠಾಣೆಯಲ್ಲಿ ದೂರು, ಪ್ರತಿದೂರು ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:30 pm, Sun, 8 September 24

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ