ತುಮಕೂರು: ಬಸ್ಸರಹಳ್ಳಿಯಲ್ಲಿ ಕಲುಷಿತ ನೀರು ಕುಡಿದು 15 ಮಂದಿ ಅಸ್ವಸ್ಥ

ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಳ್ಳುತ್ತಿರುವ ಪ್ರಕರಣಗಳು ನಡೆಯುತ್ತಿದೆ. ತುಮಕೂರು ಜಿಲ್ಲೆಯಲ್ಲೂ ಈ ದುರ್ಘಟನೆ ಸಂಭವಿಸಿದ್ದು, 15 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ತುಮಕೂರು: ಬಸ್ಸರಹಳ್ಳಿಯಲ್ಲಿ ಕಲುಷಿತ ನೀರು ಕುಡಿದು 15 ಮಂದಿ ಅಸ್ವಸ್ಥ
ಬಸ್ಸರಹಳ್ಳಿಯಲ್ಲಿ ಕಲುಷಿತ ನೀರು ಕುಡಿದು 15 ಮಂದಿ ಅಸ್ವಸ್ಥ
Follow us
ಮಹೇಶ್ ಇ, ಭೂಮನಹಳ್ಳಿ
| Updated By: Rakesh Nayak Manchi

Updated on:Jul 16, 2023 | 4:15 PM

ತುಮಕೂರು, ಜುಲೈ 16: ಕಲುಷಿತ ನೀರು (Contaminated Water) ಕುಡಿದು ಮಾಡಿ 15 ಮಂದಿ ಅಸ್ವಸ್ಥಗೊಂಡ ಘಟನೆ ಜಿಲ್ಲೆಯ ಪಾವಗಡ ತಾಲೂಕಿನ ಬಸ್ಸರಹಳ್ಳಿಯಲ್ಲಿ ನಡೆದಿದೆ. ಅಸ್ವಸ್ಥ ಕೂಲಿಕಾರ್ಮಿಕರನ್ನು ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿಸಲಾಗಿದೆ. ಯಾವುದೇ ಪ್ರಾಣಾಪಾಯ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

ಪಾವಗಡ ತಾಲೂಕಿನ ವೈಎನ್ ಹೊಸಕೋಟೆ ಗ್ರಾಮದ ಬೆಸ್ತರಹಳ್ಳಿ ಬಳಿ ನಿನ್ನೆ (ಜುಲೈ 15) ಕಲುಷಿತ ನೀರು ಸೇವಿಸಿ 15 ಜನರು ಅಸ್ವಸ್ಥಗೊಂಡಿದ್ದರು. ಈ ಪೈಕಿ 14 ಮಂದಿಯನ್ನು ಗ್ರಾಮದ ಸರ್ಕಾರಿಗೆ ಆಸ್ಪತ್ರೆಗೆ ದಾಖಲಿಸಿದ್ದರೆ, ಒಬ್ಬನನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಘಟನೆಗೆ ಸ್ಥಳೀಯ ಆಡಳಿತ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ.

ಇದನ್ನೂ ಓದಿ: Vijayanagara News: ವಿಜಯನಗರ ಬಡೇಲಡಕುವಿನಲ್ಲಿ ಕಲುಷಿತ ನೀರು ಸೇವಿಸಿ 10ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ವೈಎನ್ ಹೊಸಕೋಟೆ ಗ್ರಾಮದಲ್ಲಿ ನೀರು ಸರಬರಾಜು ಸಂಪರ್ಕದ 30 ಗೇಟ್​ವಾಲ್​ಗಳಿವೆ. ಇವುಗಳಲ್ಲಿ ಕೆಲವೊಂದು ಸೋರಿಕೆಯಾಗುತ್ತಿದ್ದು, ಗುಂಡಿಯಲ್ಲಿ ಶೇಕರಣೆಯಾದ ಕಸ-ಕಡ್ಡಿ ಮತ್ತು ನೀರು ಕೊಳೆತು ಮತ್ತೆ ನಳಗಳಿಗೆ ಸೇರುತ್ತಿವೆ. ಪರಿಸ್ಥಿತಿ ಹೀಗಿದ್ದರೂ ಸಮಸ್ಯೆ ನಿವಾರಿಸುವಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಇತ್ತೀಚೆಗಷ್ಟೇ, ಚಿತ್ರದುರ್ಗದ ಮೊಳಕಾಲ್ಮೂರು ತಾಲೂಕಿನ ನಾಗ ಸಮುದ್ರ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 33 ಜನರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಆರೋಗ್ಯ ಸ್ಥಿತಿ ಗಂಭೀರ ಇರುವ ಕೆಲವರನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:07 pm, Sun, 16 July 23