ತುಮಕೂರಿನಲ್ಲಿ ತಾಯಿ ಎದುರೇ 17 ವರ್ಷದ ಮಗಳ ಅಪಹರಣ! ಬಾಗಿಲು ಮುರಿದು ಮನೆಗೆ ನುಗ್ಗಿ ಬಾಲಕಿ ಕಿಡ್ನ್ಯಾಪ್

ಪೋಷಕರು ಮಲಗಿದ್ದಾಗ ಬಾಗಿಲು ಬಡಿದು ಒಳಗೆ ನುಗ್ಗಿದ್ದಾರೆ. ನಂತರ ಬಾಲಕಿಯನ್ನ ಬೈಕಲ್ಲಿ ಕೂರಿಸಿಕೊಂಡು ಎಸ್ಕೇಪ್ ಆಗಿದ್ದಾರೆ. ಕೋಳಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ತುಮಕೂರಿನಲ್ಲಿ ತಾಯಿ ಎದುರೇ 17 ವರ್ಷದ ಮಗಳ ಅಪಹರಣ! ಬಾಗಿಲು ಮುರಿದು ಮನೆಗೆ ನುಗ್ಗಿ ಬಾಲಕಿ ಕಿಡ್ನ್ಯಾಪ್
ಸಾಂದರ್ಭಿಕ ಚಿತ್ರ
Follow us
TV9 Web
| Updated By: sandhya thejappa

Updated on:Mar 14, 2022 | 12:34 PM

ತುಮಕೂರು: ತಾಯಿ (Mother) ಎದುರೇ 17 ವರ್ಷದ ಮಗಳನ್ನು ಅಪಹರಣ (Kidnap) ಮಾಡಿರುವ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಪುರದಹಳ್ಳಿ ಗ್ರಾಮದಲ್ಲಿ ನಡೆದಿದೆ. ಬಾಗಿಲು ಮುರಿದು ಮನೆಗೆ ನುಗ್ಗಿ ಬಾಲಕಿಯನ್ನು ಕಿಡ್ನ್ಯಾಪ್ ಮಾಡಿದ್ದಾರೆ. ಪೋಷಕರು ಮಲಗಿದ್ದಾಗ ಬಾಗಿಲು ಬಡಿದು ಒಳಗೆ ನುಗ್ಗಿದ್ದಾರೆ. ನಂತರ ಬಾಲಕಿಯನ್ನ ಬೈಕ್​ನಲ್ಲಿ ಕೂರಿಸಿಕೊಂಡು ಎಸ್ಕೇಪ್ ಆಗಿದ್ದಾರೆ. ಕೋಳಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಮನೆಯಲ್ಲಿ ಮಲಗಿದ್ದ ವೇಳೆ ಬೈಕ್​ನಲ್ಲಿ ಆಗಮಿಸಿದ ಇಬ್ಬರು ಮನೆಯ ಬಾಗಿಲು ಬಡೆದಿದ್ದಾರೆ. ಯಾರೋ ಕಳ್ಳರು ಅಂತಾ ಮನೆಯಲ್ಲಿದ್ದವರು ತಿಳಿದಿದ್ದಾರೆ. ಈ ವೇಳೆ ಏಕಾಏಕಿ ಮನೆಗೆ ನುಗ್ಗಿದ ಇಬ್ಬರು ಮನೆಯಲ್ಲಿದ್ದ ವಿದ್ಯಾರ್ಥಿನಿ ಯನ್ನ ಅಪಹರಿಸಿದ್ದಾರೆ. ಈ ಬಗ್ಗೆ ತಾಯಿ ಕೋಳಾಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಾಗಿ ಶೋಧಕಾರ್ಯ ನಡೆಸುತ್ತಿದ್ದಾರೆ.

ಆರೋಪಿಗಳು ದೊಡ್ಡಬಳ್ಳಾಪುರ ತಾಲೂಕಿನ ಶರಶೆಟ್ಟಿಹಳ್ಳಿ ಗ್ರಾಮದ ಹನುಮಂತ ರಾಯಪ್ಪ ಎಂಬುವರ ಮಗ ಮಂಜುನಾಥ್ ಮತ್ತು ಆತನ ಸ್ನೇಹಿತ ಎಂದು ಹೇಳಲಾಗುತ್ತಿದೆ.

ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ: ವಿಜಯಪುರ: ನಗರದ ಹೊರ ಭಾಗದ ಶಿರಡಿ ಸಾಯಿಬಾಬಾ ನಗರದ ಬಳಿ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೆಲವೇ ಕ್ಷಣಗಳಲ್ಲಿ ಇಂಡಿಕಾ ಕಾರು ಧಗಧಗನೇ ಉರಿದಿದೆ. ಕಾರಿನಲ್ಲಿದ್ದ ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಕಾರಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಲೇ ಚಾಲಕ ಕಾರಿನಿಂದ ಹೊರಗಡೆ ಬಂದಿದ್ದಾರೆ. ವಿಜಯಪುರದಿಂದ ಹುಬ್ಬಳ್ಳಿಯತ್ತ ತೆರಳುತ್ತಿದ್ದ ವೇಳೆ ಈ ಅವಘಡ ನಡೆದಿದೆ.

ಆಕಸ್ಮಿಕ ಬೆಂಕಿ ತಗುಲಿ ಗುಡಿಸಲು ಸುಟ್ಟು ಭಸ್ಮ: ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ವೆಂಕಟಗೌಡನಪಾಳ್ಯದಲ್ಲಿ ಆಕಸ್ಮಿಕ ಬೆಂಕಿ ತಗುಲಿ ಗುಡಿಸಲು ಸುಟ್ಟು ಭಸ್ಮವಾಗಿದೆ. ಲಲಿತಮ್ಮಗೆ ಸೇರಿದ ಗುಡಿಸಲು ಸುಟ್ಟು ಹೋಗಿದೆ. ಗುಡಿಸಲಿನಲ್ಲಿದ್ದ ವಸ್ತುಗಳು ಸುಟ್ಟು ಕರಕಲಾಗಿವೆ. ಘಟನಾ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡದೆ ನಿರ್ಲಕ್ಷ್ಯ ವಹಿಸಿದ್ದಾರೆ ಅಂತ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

12 ಸಾವಿರ ಲೀಟರ್ ಇಂಧನ ತುಂಬಿದ್ದ ಟ್ಯಾಂಕರ್ ಅಪಘಾತ: ಚಾಲಕನ ನಿಯಂತ್ರಣ ತಪ್ಪಿ 12 ಸಾವಿರ ಲೀಟರ್ ಇಂಧನ ತುಂಬಿದ್ದ ಟ್ಯಾಂಕರ್ ರಸ್ತೆ ಡಿವೈಡರ್​ಗೆ ಗುದ್ದಿದೆ. ಈ ಘಟನೆ ತುಮಕೂರು ಜಿಲ್ಲೆಯ ಪಾವಗಡ ಹೊರವಲಯದಲ್ಲಿ ನಡೆದಿದೆ. ಗುದ್ದಿದ ರಭಸಕ್ಕೆ ಟ್ಯಾಂಕರ್​ನಲ್ಲಿದ್ದ ಪೆಟ್ರೋಲ್, ಡಿಸೇಲ್ ರಸ್ತೆ ಪಾಲಾಗಿದೆ. ಸ್ಥಳಕ್ಕೆ ಅಗ್ನಿ ಶಾಮಕದಳ ಹಾಗೂ ಪೊಲೀಸರು ಭೇಟಿ ನೀಡಿದರು. ರಸ್ತೆಯಲ್ಲಿ ಸಂಗ್ರಹವಾಗಿದ್ದ ಇಂಧನ ಮೇಲೆ ಮಣ್ಣು ಹಾಕಲಾಗಿದೆ.

ಮರಳು ದಿಬ್ಬ ಕುಸಿದು ವ್ಯಕ್ತಿ ಸಾವು: ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಪೋತಗಾನಹಳ್ಳಿ ಗ್ರಾಮದಲ್ಲಿ ಮರಳು ದಿಬ್ಬ ಕುಸಿದು ವ್ಯಕ್ತಿ ಸಾವನ್ನಪ್ಪಿದ್ದಾರೆ. ಗ್ರಾಮದ ಕೆರೆಯಲ್ಲಿ ಮರಳಿನ ದಿಬ್ಬ ಅಗೆಯುವಾಗ ದುರಂತ ನಡೆದಿದೆ. ಮಂಜುನಾಥ್ (35) ಮೃತ ದುರ್ದೈವಿ.

ಇದನ್ನೂ ಓದಿ

Gold Price Today: ಚಿನ್ನ, ಬೆಳ್ಳಿ ದರದಲ್ಲಿ ಮತ್ತೆ ಕೊಂಚ ಏರಿಕೆ; ಬೆಂಗಳೂರು ಹಾಗೂ ಪ್ರಮುಖ ನಗರಗಳ ಇಂದಿನ ದರ ತಿಳಿಯಿರಿ

‘ಡಿವೋರ್ಸ್​ ಆಗಿರಬಹುದು, ಆದ್ರೆ ಜೊತೆಗಿದ್ದೇವೆ’; ಇಬ್ಬರು ಮಾಜಿ ಪತ್ನಿಯರ ಬಗ್ಗೆ ಮಾತಾಡಿದ ಆಮಿರ್​ ಖಾನ್​

Published On - 9:23 am, Mon, 14 March 22

ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ