50 ವರ್ಷದ ವಿವಾಹಿತನ ಜೊತೆ 19 ರ ಕಾಲೇಜು ವಿದ್ಯಾರ್ಥಿನಿ ನಾಪತ್ತೆ; ಆತ್ಮಹತ್ಯೆ ಶಂಕೆ

ವಿವಾಹಿತ ಪುರುಷನೊಂದಿಗೆ ಕಾಲೇಜು ವಿದ್ಯಾರ್ಥಿನಿ ನಾಪತ್ತೆಯಾದ ಘಟನೆ ನಡೆದಿದ್ದು, ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಮಾವತ್ತೂರು ಕೆರೆ(Mavathur Kere)ಯ ಬಳಿ ನಾಪತ್ತೆಯಾದವರ ಚಪ್ಪಲಿಗಳು ಪತ್ತೆಯಾಗಿದೆ. ಈ ಹಿನ್ನಲೆ ಅಗ್ನಿಶಾಮಕ ದಳದ ಸಿಬ್ಬಂದಿ ಕೆರೆಯಲ್ಲಿ ಬೋಟ್ ಸಹಾಯದಿಂದ ಹುಡುಕಾಟ ನಡೆಸಿದ್ದಾರೆ. ಜೊತೆಗೆ ಈಜು ಪಟುಗಳನ್ನು ಕರೆಯಿಸಿ ಕೆರೆಯಲ್ಲಿ ಇಬ್ಬರಿಗಾಗಿ ಶೋಧ ಕಾರ್ಯ ಮುಂದುವರಿದಿದೆ.

50 ವರ್ಷದ ವಿವಾಹಿತನ ಜೊತೆ 19 ರ ಕಾಲೇಜು ವಿದ್ಯಾರ್ಥಿನಿ ನಾಪತ್ತೆ; ಆತ್ಮಹತ್ಯೆ ಶಂಕೆ
50 ವರ್ಷದ ವಿವಾಹಿತನ ಜೊತೆ 19 ರ ಕಾಲೇಜು ವಿದ್ಯಾರ್ಥಿನಿ ನಾಪತ್ತೆ
Follow us
ಮಹೇಶ್ ಇ, ಭೂಮನಹಳ್ಳಿ
| Updated By: ಕಿರಣ್ ಹನುಮಂತ್​ ಮಾದಾರ್

Updated on:Jun 22, 2024 | 6:57 PM

ತುಮಕೂರು, ಜೂ.22: ವಿವಾಹಿತ ಪುರುಷನೊಂದಿಗೆ ಕಾಲೇಜು ವಿದ್ಯಾರ್ಥಿನಿ ನಾಪತ್ತೆಯಾದ ಘಟನೆ ನಡೆದಿದ್ದು, ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಮಾವತ್ತೂರು ಕೆರೆ(Mavathur Kere)ಯ ಬಳಿ ನಾಪತ್ತೆಯಾದವರ ಚಪ್ಪಲಿಗಳು ಪತ್ತೆಯಾಗಿದೆ. ಜೊತೆಗೆ ಇಲ್ಲಿಯೇ ಕಾರು ನಿಲ್ಲಿಸಿ ಮೊಬೈಲ್​ಗಳನ್ನು ಕಾರಲ್ಲಿಟ್ಟು ಆತ್ಮಹತ್ಯೆ ಮಾಡಿಕೊಂಡ ಶಂಕೆ ವ್ಯಕ್ತವಾಗಿದೆ. ಕೋಳಾಲ ಹೋಬಳಿ ಲಕ್ಕಯ್ಯನಪಾಳ್ಯದ ಅನನ್ಯ (19) ಎಂಬ ಕಾಲೇಜು ವಿದ್ಯಾರ್ಥಿನಿ, ಬೈರಗೊಂಡ್ಲು ಗ್ರಾಮದ ರಂಗಶಾಮಣ್ಣ (50) ಎಂಬ ವಿವಾಹಿತ ಪುರುಷನೊಂದಿಗೆ ಕಳೆದ 3ದಿನಗಳ ಹಿಂದೆ ಮನೆಯಿಂದ ನಾಪತ್ತೆಯಾಗಿದ್ದಳು.

ಯುವತಿ ಪ್ರೇಮಕ್ಕೆ ಕುಟುಂಬದವರ ವಿರೋಧ; ಆತ್ಮಹತ್ಯೆ ಶಂಕೆ

ಇನ್ನು ಯುವತಿ ಪ್ರೇಮಕ್ಕೆ ಕುಟುಂಬದವರ ವಿರೋಧ ಹಿನ್ನಲೆ ಇಬ್ಬರು ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಇದರಿಂದ ಅಗ್ನಿಶಾಮಕ ದಳದ ಸಿಬ್ಬಂದಿ ಕೆರೆಯಲ್ಲಿ ಬೋಟ್ ಸಹಾಯದಿಂದ ಹುಡುಕಾಟ ನಡೆಸಿದ್ದಾರೆ. ಜೊತೆಗೆ ಈಜು ಪಟುಗಳನ್ನು ಕರೆಯಿಸಿ ಕೆರೆಯಲ್ಲಿ ಇಬ್ಬರಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಇತ್ತ ಸ್ಥಳದಲ್ಲಿ ಕೊರಟಗೆರೆ ಪೊಲೀಸ್ ಠಾಣೆಯ ಸಿಪಿಐ ಅನಿಲ್, ಕೊಳಾಲ ಪಿಎಸ್‌ಐ ರೇಣುಕಾ ಯಾದವ್ ಹಾಗೂ ಯೋಗೇಶ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ್ದಾರೆ.

ಇದನ್ನೂ ಓದಿ:ಒಂಟೆಗಳನ್ನು ಹುಡುಕಿಕೊಂಡು ಹೋದ ಮೂವರು ಮಕ್ಕಳು ನಾಪತ್ತೆ: ಶವವಾಗಿ ಪತ್ತೆ

ಜೂಜು ಅಡ್ಡೆ ಮೇಲೆ ಪೊಲೀಸರ ದಾಳಿ; 15ಜನ ವಶ, 5.54 ಲಕ್ಷ ರೂ. ಜಪ್ತಿ

ದಾವಣಗೆರೆ: ಇಸ್ಪೀಟ್​ ಅಡ್ಡೆ ಮೇಲೆ ಪೊಲೀಸರ ದಾಳಿ ಮಾಡಿದ್ದು, ಈ ವೇಳೆ 15ಜನ ವಶಕ್ಕೆ ಪಡೆದು  5.54 ಲಕ್ಷ ರೂಪಾಯಿ ನಗದನ್ನು ಜಪ್ತಿ ಮಾಡಿದ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಹೆಬ್ಬಳಗೆರೆ ಕ್ರಾಸ್​ನಲ್ಲಿ ನಡೆದಿದೆ. ಖಚಿತ ಮಾಹಿತಿ ಮೇಲೆ ಎಸ್ಪಿ ಕಚೇರಿ ಪೊಲೀಸ್ ನಿರೀಕ್ಷಕ ಇಮ್ರಾನ್ ಬೇಗ್ ನೇತ್ರತ್ವದಲ್ಲಿ ದಾಳಿ ಮಾಡಲಾಗಿತ್ತು. ಇದೇ ಸ್ಥಳದಲ್ಲಿ ಹಲವಾರು ದಿನಗಳಿಂದ ಇಸ್ಪೀಟ್ ಜೂಜಾಟದಲ್ಲಿ ಆರೋಪಿಗಳು ತೊಡಗಿದ್ದರು. ಈ ವೇಳೆ ಅರೆಸ್ಟ್​ ಮಾಡಲಾಗಿದ್ದು, ಪೊಲೀಸ್ ಸಿಬ್ಬಂದಿ ಕಾರ್ಯಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:57 pm, Sat, 22 June 24

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ