AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರಿನಲ್ಲಿ ಕೆಎಸ್ಆರ್​ಟಿಸಿ ಬಸ್- ಆಟೋ ಡಿಕ್ಕಿ: ಓರ್ವ ಮಹಿಳೆ ಸಾವು, 9 ಪ್ರಯಾಣಿಕರಿಗೆ ಗಾಯ

ತುಮಕೂರು ಜಿಲ್ಲೆ ಮಧುಗಿರಿ ತಾಲ್ಲೂಕಿನ ಕೊಡಿಗೇನಹಳ್ಳಿ ಸಮೀಪ ಕೆಎಸ್ಆರ್ ಟಿಸಿ ಬಸ್ ಹಾಗೂ ಆಟೋ ನಡುವೆ ರಸ್ತೆ ಅಪಘಾತ ಸಂಭವಿಸಿದೆ.

ತುಮಕೂರಿನಲ್ಲಿ ಕೆಎಸ್ಆರ್​ಟಿಸಿ ಬಸ್- ಆಟೋ ಡಿಕ್ಕಿ: ಓರ್ವ ಮಹಿಳೆ ಸಾವು,  9 ಪ್ರಯಾಣಿಕರಿಗೆ ಗಾಯ
ಕೆಎಸ್ಆರ್ ಟಿಸಿ ಬಸ್ ಹಾಗೂ ಆಟೋ ನಡುವೆ ಡಿಕ್ಕಿ
ಮಹೇಶ್ ಇ, ಭೂಮನಹಳ್ಳಿ
| Updated By: ರಮೇಶ್ ಬಿ. ಜವಳಗೇರಾ|

Updated on: Aug 08, 2023 | 10:49 AM

Share

ತುಮಕೂರು, (ಆಗಸ್ಟ್ 08): ಕೆಎಸ್ಆರ್ ಟಿಸಿ ಬಸ್ ಹಾಗೂ ಆಟೋ ನಡುವೆ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಆಟೋದಲ್ಲಿದ್ದ ಓರ್ವ ಮಹಿಳೆ ಹಾಗೂ 9 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ತುಮಕೂರು ಜಿಲ್ಲೆ ಮಧುಗಿರಿ ತಾಲ್ಲೂಕಿನ ಕೊಡಿಗೇನಹಳ್ಳಿ ಸಮೀಪವಿರುವ ಜಯಮಂಗಲಿ ಬ್ರಿಡ್ಜ್ ಬಳಿ ಈ ದುರ್ಘಟನೆ ಸಂಭವಿಸಿದೆ. ಆಟೋ ಮಹಿಳೆಯರು ಕರೆದುಕೊಂಡು ಗೌರಿಬಿದನೂರು ಗಾರ್ಮೆಂಟ್ಸ್ ಫ್ಯಾಕ್ಟರಿಗೆ ತೆರಳುತ್ತಿತ್ತು. ಈ ವೇಳೆ ಕೆಎಸ್ಆರ್ ಟಿಸಿ ಬಸ್ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಜೋಗೇನೇಹಳ್ಳಿ ಗ್ರಾಮದ ಲಕ್ಷ್ಮೀದೇವಿ (33) ಮೃತಪಟ್ಟ ಮಹಿಳೆ. ಉಳಿದ 9 ಮಹಿಳೆಯರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಮಧುಗಿರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಕೊಡಿಗೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಮನಗರ ನಗರಸಭೆ ಆಯುಕ್ತ‌ರ ಕಾರಿಗೆ ಯುವತಿ ಬಲಿ 

ರಾಮನಗರ, (ಆಗಸ್ಟ್ 08): ನಗರಸಭೆ ಆಯುಕ್ತ‌ರ ಕಾರು ಡಿಕ್ಕಿಯಾಗಿ ಯುವತಿಯೋರ್ವಳ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಮನಗರ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ನಡೆದಿದೆ. ಅಂಜುಂ(22)‌ ಮೃತ ದುರ್ವೈವಿ. ರಾಮನಗರ ನಗರಸಭೆ ಆಯುಕ್ತ‌ ನಾಗೇಶ್ ಕಾರು ಬೆಂಗಳೂರಿನಿಂದ‌ ಮೈಸೂರು ಕಡೆ ತೆರಳುತ್ತಿದ್ದ ಬೈಕ್​ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಯುವತಿ ಅಂಜುಂ ಸಾವನ್ನಪ್ಪಿದ್ದು, ಮತ್ತೊಬ್ಬರಿಗೆ ಗಾಯಗಳಾಗಿವೆ. ಗಾಯಾಳನ್ನು ರಾಮನಗರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಸ್ಥಳಕ್ಕೆ ಪೊಲೀಸರು ದೌಡಾಯಿಸಿ ರಾಮನಗರ ನಗರಸಭೆ ಆಯುಕ್ತ‌ ನಾಗೇಶ್ ಕಾರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಬಗ್ಗೆ ರಾಮನಗರ ಸಂಚಾರಿ‌ ಪೊಲೀಸ್ ಠಾಣೆಯಲ್ಲಿ ಪ್ರಕರಣ‌ ದಾಖಲಾಗಿದೆ.

ಮರಕ್ಕೆ ಡಿಕ್ಕಿಯಾಗಿ ಬೈಕ್​ ಸವಾರ ಸಾವು

ಬೆಂಗಳೂರು: ದ್ವಿಚಕ್ರ ವಾಹನವೊಂದು ವೇಗವಾಗಿ ಬಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಯಶವಂತಪುರ ಬಳಿ ನಡೆದಿದೆ. ತ್ರಿಪುರ ಮೂಲದ ಬಿಜ್ಜು ಸೆಲ್ಫ್ ಆಕ್ಸಿಡೆಂಟ್ ನಲ್ಲಿ ಸಾವನ್ನಪ್ಪಿದ ವ್ಯಕ್ತಿ. ಇವರು ಕಾಂಗ್ರೆಸ್ ಮುಖಂಡ ಅನೂಪ್ ಅಯ್ಯರ್ ಮನೆಯಲ್ಲಿ ಕೆಲಸ ಮಾಡುತಿದ್ದ. ಸಂಬಂಧಿ‌ಯೊಬ್ಬನನ್ನು ಡ್ರಾಪ್ ಮಾಡಿ, ಯಶವಂತಪುರದಿಂದ ಮಲ್ಲೇಶ್ವರಂನ ಅನೂಪ್ ಅಯ್ಯರ್ ಮನೆಗೆ ಬರುತಿದ್ದ ವೇಳೆ ಅಪಘಾತವಾಗಿದೆ. ಮೃತ ದೇಹವನ್ನು ಪೊಲೀಸರು ಎಂಎಸ್ ರಾಮಯ್ಯ ಆಸ್ಪತ್ರೆಗೆ ರವಾನಿಸಿದ್ದು, ಯಶವಂತಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ