ತುಮಕೂರು ಜಿಲ್ಲೆಯಲ್ಲಿ ಬಾಲ ಗರ್ಭಿಣಿಯರ ಸಂಖ್ಯೆ 326, ಸರ್ಕಾರಕ್ಕೆ ಶುರುವಾದ ತಲೆನೋವು

ಮಹಿಳಾ‌ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಡೆಸಿದ ಸರ್ವೆಯಲ್ಲಿ ತುಮಕೂರು ಜಿಲ್ಲೆಯಲ್ಲಿ ಕಳೆದ ಒಂದು ವರ್ಷದಲ್ಲಿ 326 ಮಂದಿ ಬಾಲಕಿಯರು ಗರ್ಭ ಧರಿಸಿರುವುದು ಬಹಿರಂಗವಾಗಿದೆ. ಬಹಿರಂಗವಾಗಿದೆ. ವರದಿ ಬೆನ್ನಲ್ಲೇ ಜಾಗರೂಕರಾದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಪೋಕ್ಸೋ ಕೇಸ್, ಬಾಲ್ಯವಿವಾಹಗಳನ್ನ ತಡೆಗಟ್ಟಲು ಮುಂದಾಗಿದ್ದಾರೆ.

ತುಮಕೂರು ಜಿಲ್ಲೆಯಲ್ಲಿ ಬಾಲ ಗರ್ಭಿಣಿಯರ ಸಂಖ್ಯೆ 326, ಸರ್ಕಾರಕ್ಕೆ ಶುರುವಾದ ತಲೆನೋವು
ಬಾಲ ಗರ್ಭಿಣಿ
Follow us
ಮಹೇಶ್ ಇ, ಭೂಮನಹಳ್ಳಿ
| Updated By: ವಿವೇಕ ಬಿರಾದಾರ

Updated on: Jul 07, 2024 | 10:12 AM

ತುಮಕೂರು, ಜುಲೈ 07: ಜಿಲ್ಲೆಯಲ್ಲಿ ಬಾಲ ಗರ್ಭಿಣಿಯರ (Underage Pregnancy) ಸಂಖ್ಯೆ ದಾಖಲೆಯ ಪ್ರಮಾಣದಲ್ಲಿ ಏರಿಕೆ ಕಂಡಿದೆ. ತಾಯ್ತನದ ವಯಸ್ಸಿಗೂ ಮೊದಲೆ ತುಮಕೂರು (Tumakur) ಜಿಲ್ಲೆಯಲ್ಲಿ ಬಾಲ ಗರ್ಭಿಣಿಯರ ಸಂಖ್ಯೆ ಏರಿಕೆ ಕಂಡಿರುವುದು ಆತಂಕಕ್ಕೆ ಕಾರಣವಾಗಿದೆ. ತುಮಕೂರು ಜಿಲ್ಲೆಯಲ್ಲಿ 326 ಬಾಲ ಗರ್ಭಿಣಿಯರಿದ್ದಾರೆ. ಕಳೆದ ಒಂದು ವರ್ಷದಲ್ಲಿ ಜಿಲ್ಲೆಯಲ್ಲಿ 326 ಮಂದಿ ಬಾಲಕಿಯರು ಗರ್ಭ ಧರಿಸಿರುವುದು ಮಹಿಳಾ‌ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಡೆಸಿದ ಸರ್ವೆಯಲ್ಲಿ ಬಹಿರಂಗವಾಗಿದೆ.

ಈ ವರದಿಯಿಂದ ಮಹಿಳಾ‌ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳಿಗೆ ತಲೆನೋವು ಶುರುವಾಗಿದೆ. 326 ಬಾಲಕಿಯರು ಲೈಂಗಿಕ ದೌರ್ಜನ್ಯ, ಬಾಲ್ಯ ವಿವಾಹದಿಂದ ಗರ್ಭಧರಿಸಿದ್ದಾರೆ ಎಂದು ತಿಳಿದುಬಂದಿದೆ. ವರದಿ ಬೆನ್ನಲ್ಲೇ ಜಾಗರೂಕರಾದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಪೋಕ್ಸೋ ಕೇಸ್, ಬಾಲ್ಯವಿವಾಹಗಳನ್ನ ತಡೆಗಟ್ಟಲು ಮುಂದಾಗಿದ್ದಾರೆ. ಪೋಷಕರು ಹಾಗೂ ಶಾಲೆಗಳಲ್ಲಿ ಅರಿವು ಜಾಗೃತಿ ಮೂಡಿಸುತ್ತಿದ್ದಾರೆ.

ಪ್ರೇಮ ವಿವಾಹ, ಬಾಲ್ಯ ವಿವಾಹ, ಲಿವ್​ ಇನ್ ರಿಲೇಶನ್ ಶಿಫ್, ಲೈಂಗಿಕ ದೌರ್ಜನ್ಯ, ಲೈಂಗಿಕ ತಿಳವಳಿಕೆ ಕೊರತೆ, ಜೀವನ ಶೈಲಿ ಸೇರಿದ್ದಂತೆ ನಾನಾ ಕಾರಣಗಳಿಂದ ಬೆಂಗಳೂರು ಸೇರಿದ್ದಂತೆ ರಾಜ್ಯದಲ್ಲಿ ಬಾಲ ಗರ್ಭಿಣಿಯರು ಸಂಖ್ಯೆ 28,657 ಕ್ಕೆ ಏರಿಕೆಯಾಗಿತ್ತು.

ರಾಜ್ಯದಲ್ಲಿ ಬಾಲ ಗರ್ಭಿಣಿಯರ ಸಂಖ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ, ಗೃಹ ಇಲಾಖೆ, ಅಲ್ಪಸಂಖ್ಯಾತರ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸೇರಿದ್ದಂತೆ ವಿವಿಧ ಇಲಾಖೆಗಳು ಕೇಂದ್ರ ಕಾರ್ಯಪಡೆ ರಚಿಸಿದೆ.

ಇದನ್ನೂ ಓದಿ: ಗರ್ಭಿಣಿಯಾದ 9ನೇ ತರಗತಿ ವಿದ್ಯಾರ್ಥಿನಿ; ಹಾಸ್ಟೆಲ್ ವಾರ್ಡನ್ ಅಮಾನತು

ಬಾಲಕಿಯರು ಗರ್ಭ ಧರಿಸಿದ ವೇಳೆ ಗರ್ಭಪಾತ, ಅವಧಿ ಪೂರ್ವ ಪ್ರಸವ, ದೈಹಿಕ ನ್ಯೂನತೆ ಹೊಂದಿರುವ ಶಿಶು ಜನನ ಸೇರಿದಂತೆ ಅನೇಕ ಸಮಸ್ಯೆಗಳು ಎದುರಾಗುತ್ತಿವೆ. ಬಾಲ್ಯದಲ್ಲೇ ಗರ್ಭ ಧರಿಸಿದರೆ ಬಾಲಕಿಯರ ಆರೋಗ್ಯದ ಮೇಲೆ ಗಂಭೀರ ಪರಿಣಾಮಗಳು ಕಂಡುಬರುತ್ತಿವೆ ಅಂತ ಕೆ ಸಿ ಜನರಲ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕಿ ಆಸ್ಪತ್ರೆಯ ಪ್ರಸೂತಿ ಹಾಗೂ ಸ್ತ್ರೀ ರೋಗ ತಜ್ಞರಾದ ಡಾ. ಇಂದಿರಾ ಆತಂಕ ವ್ಯಕ್ತಪಡಿಸಿದ್ದಾರೆ.

ಬಾಲಕಿ ಗರ್ಭಿಣಿಯಾಗುವುದು ಆರೋಗ್ಯದ ಮೇಲೂ ವ್ಯತಿರಿಕ್ತ ಪರಿಣಾಮ ಉಂಟಾಗುತ್ತದೆ. ಮಗು ಜನನದ ಬಳಿಕ ಬಾಲ ಬಾಣಂತಿಯರು ರಕ್ತ ಹೀನತೆ, ಅಧಿಕ ರಕ್ತದೊತ್ತಡ ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳಿಗೆ ತುತ್ತಾಗುವ ಭೀತಿ ಇದ್ದು, ಬಾಲ್ಯ ವಿವಾಹ ಹಾಗೂ ಇನ್ನಿತರ ಕಾರಣಗಳಿಂದ ಬಾಲಕಿಯರು ಅಪ್ರಾಪ್ತ ವಯಸ್ಸಿನಲ್ಲೇ ಗರ್ಭ ಧರಿಸುವ ಪ್ರಕರಣಗಳು ಸಾಮಾಜಿಕ ಪಿಡುಗಾಗಿ ಪರಿವರ್ತನೆಯಾಗಿದೆ. ಸಮಾಜದ ಮೇಲೂ ದುಷ್ಪರಿಣಾಮ ಬೀರುತ್ತಿದ್ದು ಸರ್ಕಾರ ಈ ಬಗ್ಗೆ ತ್ವರೀತವಾಗಿ ಕ್ರಮಕ್ಕೆ ಮುಂದಾಗಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ