AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾರ್ಕೋನಹಳ್ಳಿ ಡ್ಯಾಂನಲ್ಲಿ ಘೋರ ದುರಂತ: ಕೊಚ್ಚಿ ಹೋದ ಒಂದೇ ಕುಟುಂಬದ 7 ಜನ

ತುಮಕೂರಿನಲ್ಲಿ ಘೋರ ದುರಂತವೊಂದು ಸಂಭವಿಸಿದೆ. ಯಡಿಯೂರು ಬಳಿ ಮಾರ್ಕೋನಹಳ್ಳಿ ಡ್ಯಾಂ ನೀರಿಗೆ ಇಳಿದಿದ್ದ ಒಂದೇ ಕುಟುಂಬದ 7 ಜನರು ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ. ಈಗಾಗಲೇ ಇಬ್ಬರ ಮೃತದೇಹ ಪತ್ತೆಯಾಗಿದ್ದು, ಒಬ್ಬರನ್ನು ರಕ್ಷಣೆ ಮಾಡಲಾಗಿದೆ. ಇನ್ನುಳಿದ ನಾಲ್ವರು ಕಣ್ಮರೆಯಾಗಿದ್ದು, ಶೋಧ ಕಾರ್ಯ ನಡೆದಿದೆ. ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.

ಮಾರ್ಕೋನಹಳ್ಳಿ ಡ್ಯಾಂನಲ್ಲಿ ಘೋರ ದುರಂತ: ಕೊಚ್ಚಿ ಹೋದ ಒಂದೇ ಕುಟುಂಬದ 7 ಜನ
Markonahalli Dam
Jagadisha B
| Edited By: |

Updated on:Oct 07, 2025 | 7:50 PM

Share

ತುಮಕೂರು, (ಅಕ್ಟೋಬರ್ 07): ಮಾರ್ಕೋನಹಳ್ಳಿ ಡ್ಯಾಂ ( markonahalli dam) ನೀರಿನಲ್ಲಿ ಈಜಲು ಹೋಗಿದ್ದ ಒಂದೇ ಕುಟುಂಬದ ಏಳು ಜನರು ಕೊಚ್ಚಿಕೊಂಡು ಹೋಗಿದ್ದು, ಸದ್ಯ ಇಬ್ಬರ ಮೃತದೇಹ ಪತ್ತೆಯಾಗಿದೆ.  ತುಮಕೂರು (tumakuru) ಜಿಲ್ಲೆ ಕುಣಿಗಲ್ ತಾಲೂಕಿನ ಯಡಿಯೂರು ಬಳಿ ಮಾರ್ಕೋನಹಳ್ಳಿ ಡ್ಯಾಂ ನೀರಿಗಿಳಿದ್ದ ಒಂದೇ ಕುಟುಂಬದ 7 ಜನರಲ್ಲಿ ಈಗಾಗಲೇ ಇಬ್ಬರ ಮೃತದೇಹ ಸಿಕ್ಕಿದ್ದು, ಮತ್ತೋಬ್ಬರನ್ನು ರಕ್ಷಣೆ ಮಾಡಲಾಗಿದೆ. ಆದರೆ ಇನ್ನು ನಾಲ್ವರು ಏನಾಗಿದ್ದಾರೆ ಎಂದು ಗೊತ್ತಿಲ್ಲ. ಜಲಾಶಯದಲ್ಲಿ ಮುಳುಗಿ ಸಾಜಿಯಾ, ಅರ್ಬಿನ್ ಸಾವನ್ನಪ್ಪಿದ್ದಾರೆ. ಇನ್ನು ಕಣ್ಮರೆಯಾಗಿರುವ ತಬಾಸುಮ್, ಶಬಾನ, ಮಿಫ್ರಾ, ಮಹಿಬ್​ ಗಾಗಿ ಶೋಧ ಕಾರ್ಯ ನಡೆದಿದೆ.

ಸಾಜಿಯಾ, ಅರ್ಬಿನ್ ಮೃತರು. ತಬಾಸುಮ್ (45), ಶಬಾನ (44), ಮಿಫ್ರಾ (4) ಹಾಗೂ ಮಹಿಬ್ (1) ಕಣ್ಮರೆಯಾದವರು. ಇನ್ನು ನವಾಜ್‌ ಎಂಬಾತ ಪ್ರಾಣಾಪಾಯದಿಂದ ಪಾರಾಗಿದ್ದು, ಸದ್ಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇವರೆಲ್ಲರೂ ತುಮಕೂರು ನಗರದ ಬಿ.ಜಿ.ಪಾಳ್ಯದ ನಿವಾಸಿಗಳು ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಕಾಂತಾರ ನೋಡಲು ಹೋಗಿದ್ದ ಇಬ್ಬರು ನೀರುಪಾಲು: ಕರ್ನಾಟಕದಲ್ಲಿ ಪ್ರತ್ಯೇಕ ದುರಂತಗಳಲ್ಲಿ 6 ಮಂದಿ ಜಲಸಮಾಧಿ

ಕುಣಿಗಲ್‌ ತಾಲ್ಲೂಕಿನ ಮಾಗಡಿಪಾಳ್ಯ ಗ್ರಾಮದ ಸಂಬಂಧಿಕರ ಮನೆಗೆ ಆಗಮಿಸಿದ್ದು, ಊಟ ಮುಗಿಸಿಕೊಂಡು ಜಲಾಶಯಕ್ಕೆ ಹೋಗಿದ್ದರು. ಹಿನ್ನೀರಿನ ಕಾಲುವೆಗೆ ಇಳಿಯುತ್ತಿದ್ದಂತೆಯೇ ರಭಸವಾಗಿ ಹರಿಯುತ್ತಿದ್ದ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ.

ಸದ್ಯ ಈ ಸಂಬಂಧ ಮಾಹಿತಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ. ಹುಲಿಯೂರುದುರ್ಗ ಪೊಲೀಸರು ಹಾಗೂ ಅಮೃತೂರು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಸಿಬ್ಬಂದಿ ನಾಪತ್ತೆ ಆಗಿರುವವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:44 pm, Tue, 7 October 25

Follow Us
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಬರೋಬ್ಬರಿ 6 ಕಿ.ಮೀ. ಓಡಿದ ದಳಪತಿ ವಿಜಯ್
ಬರೋಬ್ಬರಿ 6 ಕಿ.ಮೀ. ಓಡಿದ ದಳಪತಿ ವಿಜಯ್
ಮಂತ್ರಾಲಯಕ್ಕೆ ಭಕ್ತ ಸಾಗರ: 21 ದಿನಗಳಲ್ಲೇ ಬಂತು ಕೋಟಿ ಕೋಟಿ ಕಾಣಿಕೆ!
ಮಂತ್ರಾಲಯಕ್ಕೆ ಭಕ್ತ ಸಾಗರ: 21 ದಿನಗಳಲ್ಲೇ ಬಂತು ಕೋಟಿ ಕೋಟಿ ಕಾಣಿಕೆ!
ಚಲಿಸುತ್ತಿದ್ದ ಓಮಿನಿ ಕಾರಿನಿಂದ ಕೆಳಗೆ ಬಿದ್ದ ಐವರು ಮಕ್ಕಳು!
ಚಲಿಸುತ್ತಿದ್ದ ಓಮಿನಿ ಕಾರಿನಿಂದ ಕೆಳಗೆ ಬಿದ್ದ ಐವರು ಮಕ್ಕಳು!
ಎಣ್ಣೆ ಕಿಕ್​ನಲ್ಲಿ ಮಹಿಳಾ PSIಗೇ ಕಾಲಿನಿಂದ ಒದ್ದು ನಿಂದಿಸಿದ ಯುವತಿ
ಎಣ್ಣೆ ಕಿಕ್​ನಲ್ಲಿ ಮಹಿಳಾ PSIಗೇ ಕಾಲಿನಿಂದ ಒದ್ದು ನಿಂದಿಸಿದ ಯುವತಿ
ಮಂಜುನಾಥಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಬಿವೈ ವಿಜಯೇಂದ್ರ
ಮಂಜುನಾಥಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಬಿವೈ ವಿಜಯೇಂದ್ರ
ಶರಾವತಿ ವಿದ್ಯುದಾಗಾರಕ್ಕೆ ನುಗ್ಗಿದ ನೀರು: 7ನೇ ಯುನಿಟ್‌ನಲ್ಲಿ ಭಾರೀ ಅವಘಡ
ಶರಾವತಿ ವಿದ್ಯುದಾಗಾರಕ್ಕೆ ನುಗ್ಗಿದ ನೀರು: 7ನೇ ಯುನಿಟ್‌ನಲ್ಲಿ ಭಾರೀ ಅವಘಡ
ವಾಣಿಜ್ಯ ಎಲ್‌ಪಿಜಿ ಪೂರೈಕೆ ಮೇಲಿನ ಎಲ್ಲಾ ನಿರ್ಬಂಧ ಹಿಂಪಡೆದ ಕೇಂದ್ರ
ವಾಣಿಜ್ಯ ಎಲ್‌ಪಿಜಿ ಪೂರೈಕೆ ಮೇಲಿನ ಎಲ್ಲಾ ನಿರ್ಬಂಧ ಹಿಂಪಡೆದ ಕೇಂದ್ರ
ಇಂದು ಈ ರಾಶಿಯವರಿಗೆ ಇಂದು ಅನಾರೋಗ್ಯ ಕಾಡಬಹುದು, ಎಚ್ಚರ!
ಇಂದು ಈ ರಾಶಿಯವರಿಗೆ ಇಂದು ಅನಾರೋಗ್ಯ ಕಾಡಬಹುದು, ಎಚ್ಚರ!
ಭಾವಿ ಪತ್ನಿಗೆ ಹಾಕಿದ್ದ ಚಿನ್ನ ನಕಲಿ: ಮದ್ವೆ ಕ್ಯಾನ್ಸಲ್, ಕಂಗಾಲಾದ ಯುವಕ
ಭಾವಿ ಪತ್ನಿಗೆ ಹಾಕಿದ್ದ ಚಿನ್ನ ನಕಲಿ: ಮದ್ವೆ ಕ್ಯಾನ್ಸಲ್, ಕಂಗಾಲಾದ ಯುವಕ