AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರಿನಲ್ಲಿ 25 ವರ್ಷದ ಯುವತಿಯನ್ನು ಮದುವೆಯಾಗಿ ರಾಜ್ಯಾದ್ಯಂತ ಸಂಚಲನ ಮೂಡಿಸಿದ್ದ 45 ವರ್ಷದ ಶಂಕರಣ್ಣ ಆತ್ಯಹತ್ಯೆಗೆ ಶರಣು!

ಶಂಕರಣ್ಣ ಜೊತೆ ಮೇಘಾನ ಮದುವೆಯಾಗಿದ್ದರು. ಕುಣಿಗಲ್ ತಾಲೂಕಿನ ಹುಲಿಯೂರು ದುರ್ಗದಲ್ಲಿ ಕಳೆದ 5 ತಿಂಗಳ ಹಿಂದೆ ಮದುವೆ ನಡೆದಿತ್ತು. ಇಂದು ಬೆಳಗ್ಗೆ ತೋಟದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅಕ್ಕಿಮರಿ ಪಾಳ್ಯದ ಶಂಕರಣ್ಣ ಮೃತದೇಹ ಪತ್ತೆಯಾಗಿದೆ.

ತುಮಕೂರಿನಲ್ಲಿ 25 ವರ್ಷದ ಯುವತಿಯನ್ನು ಮದುವೆಯಾಗಿ ರಾಜ್ಯಾದ್ಯಂತ ಸಂಚಲನ ಮೂಡಿಸಿದ್ದ 45 ವರ್ಷದ ಶಂಕರಣ್ಣ ಆತ್ಯಹತ್ಯೆಗೆ ಶರಣು!
ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದ ಫೋಟೋಗಳು
TV9 Web
| Edited By: |

Updated on:Mar 29, 2022 | 10:06 AM

Share

ತುಮಕೂರು: 25 ವರ್ಷದ ಯುವತಿಯನ್ನು ಮದುವೆಯಾಗಿದ್ದ (Marriage) 45 ವರ್ಷದ ಶಂಕರಣ್ಣ ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾರೆ. ಈ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹುಲಿಯೂರು ದುರ್ಗ ಹೋಬಳಿಯ ಅಕ್ಕಿಮರಿ ಪಾಳ್ಯದಲ್ಲಿ ಸಂಭವಿಸಿದೆ. ಸುಮಾರು 5 ತಿಂಗಳ ಹಿಂದೆ ಈ ಜೋಡಿ ರಾಜ್ಯಾದ್ಯಂತ ಬಾರಿ ಸಂಚಲನ ಮೂಡಿಸಿತ್ತು. 25 ವರ್ಷದ ಯುವತಿಯನ್ನು 45 ವರ್ಷದ ಶಂಕರಣ್ಣ ಮದುವೆಯಾಗಿದ್ದರು. ವಯಸ್ಸಿನ ಅಂತರದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಟ್ರೋಲ್ ಆಗಿತ್ತು.

ಶಂಕರಣ್ಣ ಜೊತೆ ಮೇಘಾನ ಮದುವೆಯಾಗಿದ್ದರು. ಕುಣಿಗಲ್ ತಾಲೂಕಿನ ಹುಲಿಯೂರು ದುರ್ಗದಲ್ಲಿ ಕಳೆದ 5 ತಿಂಗಳ ಹಿಂದೆ ಮದುವೆ ನಡೆದಿತ್ತು. ಇಂದು ಬೆಳಗ್ಗೆ ತೋಟದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅಕ್ಕಿಮರಿ ಪಾಳ್ಯದ ಶಂಕರಣ್ಣ ಮೃತದೇಹ ಪತ್ತೆಯಾಗಿದೆ. ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸದ್ಯಕ್ಕೆ ಹುಲಿಯೂರು ದುರ್ಗ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಮೇಘನಾ ಸಂತೆಮಾವತ್ತೂರು ಗ್ರಾಮದ ನಿವಾಸಿಯಾಗಿದ್ದು, ಈಕೆಗೆ ಬೇರೆಯವರ ಜೊತೆ ಮೊದಲೇ ಒಂದು ಮದುವೆಯಾಗಿದೆ ಎಂದು ಹೇಳಲಾಗುತ್ತಿತ್ತು. ಆದರೆ ಪತಿ ಕಳೆದ ಎರಡು ವರ್ಷಗಳಿಂದ ಕಾಣೆಯಾಗಿದ್ದಾರೆ ಎಂಬ ಮಾಹಿತಿ ಇತ್ತು. ಪತಿ ಎರಡು ವರ್ಷಗಳಿಂದ ಬಾರದ ಹಿನ್ನೆಲೆಯಲ್ಲಿ ಮೇಘನಾಳೇ ಹೋಗಿ 45 ವರ್ಷದ ವ್ಯಕ್ತಿಯನ್ನ ಮದುವೆಯಾಗಿದ್ದರು.

ಮೇಘನಾ ಸ್ವತಃ ಶಂಕರಣ್ಣ ಬಳಿ ಹೋಗಿ ಮದುವೆಯಾಗಿ ಅಂತಾ ಕೇಳಿಕೊಂಡಿದ್ದರು. ಈ ವೇಳೆ ಮದುವೆಯಾಗದ ಶಂಕರಣ್ಣ ಯುವತಿಯನ್ನ ಒಪ್ಪಿ ಸಮೀಪದ ದೇವಾಲಯದಲ್ಲಿ ಮದುವೆಯಾಗಿದ್ದರು. ಇಬ್ಬರು ಮದುವೆಯಾಗಿರುವ ಫೋಟೋ ನೋಡಿ ಟ್ರೋಲಿಗರು ಟ್ರೋಲ್ ಮಾಡಿದ್ದರು. ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದ್ದವು.

ಇದನ್ನೂ ಓದಿ

Taapsee Pannu: ಬಾಲಿವುಡ್​ನಲ್ಲಿ ಮಹಿಳಾ ನಟಿಯರ ಸಂಭಾವನೆ ನಿಗದಿಯಾಗೋದು ಹೇಗೆ? ತಾಪ್ಸಿ ಪನ್ನು ಹೇಳಿದ್ದಿಷ್ಟು..

SRH vs RR: ಐಪಿಎಲ್​ನಲ್ಲಿಂದು ಹೈದರಾಬಾದ್-ರಾಜಸ್ಥಾನ್ ಮುಖಾಮುಖಿ: ಸಂಜು ಸ್ಯಾಮ್ಸನ್ ಮೇಲೆ ಎಲ್ಲರ ಕಣ್ಣು

Published On - 9:13 am, Tue, 29 March 22

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ