ತುಮಕೂರು ಯುವ ಕಾಂಗ್ರೆಸ್ ಘಟಕದಿಂದ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ದೂರು ದಾಖಲು
ಚಂದ್ರು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಸಚಿವ ಆರಗ ಜ್ಞಾನೇಂದ್ರ ಮಾಧ್ಯಮದ ಮುಂದೆ ಪ್ರತಿಕ್ರಿಯೆ ನೀಡುವಾಗ ಉರ್ದು ಮಾತನಾಡದಿದ್ದಕ್ಕೆ ಹತ್ಯೆ ಮಾಡಿದ್ದಾರೆ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆ ಬಹಳಷ್ಟು ವಿವಾದಕ್ಕೆ ಕಾರಣವಾಗಿದೆ.
ತುಮಕೂರು: ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra) ಅವರ ವಿರುದ್ಧ ತುಮಕೂರು ಯುವ ಕಾಂಗ್ರೆಸ್ (Congress) ಘಟಕದಿಂದ ದೂರು ದಾಖಲಾಗಿದೆ. ತುಮಕೂರು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಶಶಿಹುಲಿಕುಂಟೆಮಠ್ ನೇತೃತ್ವದಲ್ಲಿ ತುಮಕೂರು ಎಎಸ್ಪಿ ಉದೇಶ್ಗೆ ದೂರು ಸಲ್ಲಿಸಿದ್ದಾರೆ. ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ. ಜಾತಿಗಳ ಮಧ್ಯೆ ಕೋಮುಗಲಭೆ ಸೃಷ್ಟಿ ಮಾಡುವ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ. ಹೀಗಾಗಿ ಕ್ರಮ ಕೈಗೊಳ್ಳಿ ಎಂದು ಒತ್ತಾಯಿಸಿದ್ದಾರೆ.
ವಿವಾದಕ್ಕೆ ಕಾರಣವಾದ ಸಚಿವರ ಹೇಳಿಕೆ ಏನು?: ಚಂದ್ರು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಸಚಿವ ಆರಗ ಜ್ಞಾನೇಂದ್ರ ಮಾಧ್ಯಮದ ಮುಂದೆ ಪ್ರತಿಕ್ರಿಯೆ ನೀಡುವಾಗ ಉರ್ದು ಮಾತನಾಡದಿದ್ದಕ್ಕೆ ಹತ್ಯೆ ಮಾಡಿದ್ದಾರೆ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆ ಬಹಳಷ್ಟು ವಿವಾದಕ್ಕೆ ಕಾರಣವಾಗಿದೆ. ಜೊತೆಗೆ ಸಚಿವರ ವಿರುದ್ಧ ಹಲವರು ಗರಂ ಆಗಿದ್ದಾರೆ.
ಹೇಳಿಕೆ ತಪ್ಪಾಗಿದೆ ಎಂದ ಆರಗ: ತಕ್ಷಣದ ಮಾಹಿತಿ ಆಧರಿಸಿ ನಾನು ಹೇಳಿಕೆ ನೀಡಿದ್ದೆ. ನಾನು ನೀಡಿರುವ ಹೇಳಿಕೆ ತಪ್ಪಾಗಿದೆ. ಪೊಲೀಸರು ವಿಸ್ತೃತವಾದ ಮಾಹಿತಿ ನೀಡಿದ್ದಾರೆ. ಬೈಕ್ ಡಿಕ್ಕಿಯಾಗಿ ಗಲಾಟೆಯಾಗಿ ಚಂದ್ರುಗೆ ಚೂರಿ ಇರಿತ ಆಗಿದೆ. ಆಸ್ಪತ್ರೆಗೆ ಹೋಗುವಷ್ಟರಲ್ಲಿ ರಕ್ತಸ್ರಾವವಾಗಿ ಚಂದ್ರು ಸಾವನ್ನಪ್ಪಿದ್ದಾರೆ. ಈ ಹಿಂದೆ ನಾನು ನೀಡಿದ್ದ ಹೇಳಿಕೆ ತಪ್ಪಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ ನೀಡಿದ್ದರು. ಮೂಲಗಳ ಮಾಹಿತಿ ಆಧಾರವಾಗಿ ನಾನು ಹೇಳಿಕೆ ನೀಡಿದ್ದೆ. ನಾನು ಈ ಹಿಂದೆ ಹೇಳಿದಂತೆ ಯಾವುದೇ ಘಟನೆ ನಡೆದಿಲ್ಲ. ಉರ್ದು ಮಾತನಾಡದಿದ್ದಕ್ಕೆ ಹತ್ಯೆ ಮಾಡಿದ್ದಾರೆ ಎಂದು ಹೇಳಿದ್ದೆ. ನನ್ನ ಹೇಳಿಕೆ ತಪ್ಪಾಗಿದೆ ಎಂದು ಆರಗ ಜ್ಞಾನೇಂದ್ರ ತಿಳಿಸಿದ್ದರು.
ಇದನ್ನೂ ಓದಿ: PBKS vs GT: ಐಪಿಎಲ್ನಲ್ಲಿಂದು ಮಯಾಂಕ್ vs ಹಾರ್ದಿಕ್: ಗೆಲುವಿನ ಓಟ ಮುಂದುವರೆಸುತ್ತಾ ಗುಜರಾತ್?
ಕೃಷಿ ಆದಾಯ 10 ಲಕ್ಷ ಮೀರಿದರೆ ಕಟ್ಟುನಿಟ್ಟಿನ ಪರಿಶೀಲನೆ: ತೆರಿಗೆ ನಿಯಮ ಬಿಗಿಗೊಳಿಸಲು ಮುಂದಾದ ಸರ್ಕಾರ