ಪರಮೇಶ್ವರ್ ಒಡೆತನದ ಸಿದ್ದಾರ್ಥ ಇಂಜಿನಿಯರಿಂಗ್ ಕಾಲೇಜಿನ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ
ಗೃಹಸಚಿವ ಪರಮೇಶ್ವರ್ ಒಡೆತನದ ಸಿದ್ದಾರ್ಥ ಇಂಜಿನಿಯರಿಂಗ್ ಕಾಲೇಜಿನ ಹಾಸ್ಟೆಲ್‌ನಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಡೆದಿದೆ. ಸ್ಥಳಕ್ಕೆ ತುಮಕೂರು ಡಿವೈಎಸ್‌ಪಿ ಪಿ.ಚಂದ್ರಶೇಖರ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ತಿಲಕ್ ಪಾರ್ಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ತುಮಕೂರು, ಅಕ್ಟೋಬರ್ 26: ಗೃಹಸಚಿವ ಪರಮೇಶ್ವರ್ (G Parameshwara) ಒಡೆತನದ ಸಿದ್ದಾರ್ಥ ಇಂಜಿನಿಯರಿಂಗ್ ಕಾಲೇಜಿನ ಹಾಸ್ಟೆಲ್‌ನಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಡೆದಿದೆ. ನೇಣುಬಿಗಿದ ಸ್ಥಿತಿಯಲ್ಲಿ 19 ವರ್ಷದ ಬನಸಿರಿ (ಭಾವನಾ) ಶವ ಪತ್ತೆ ಆಗಿದೆ. ಬಿಇ ಐಎಸ್ ವಿಭಾಗದಲ್ಲಿ 3ನೇ ಸೆಮಿಸ್ಟರ್ ಓದುತ್ತಿದ್ದಳು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ತುಮಕೂರು ಡಿವೈಎಸ್‌ಪಿ ಪಿ.ಚಂದ್ರಶೇಖರ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ತಿಲಕ್ ಪಾರ್ಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಕೋಲಾರ ಜಿಲ್ಲಾ ಆಸ್ಪತ್ರೆಯಲ್ಲಿ ನವಜಾತ ಶಿಶು ಕಳ್ಳತನ
ಕೋಲಾರ: ಜಿಲ್ಲಾ ಆಸ್ಪತ್ರೆಯಲ್ಲಿ ನವಜಾತ ಶಿಶು ಕಳ್ಳತನ ಮಾಡಿರುವಂತಹ ಘಟನೆ ನಡೆದಿದೆ. 5 ದಿನದ ಗಂಡುಮಗುವನ್ನು ಮೂವರು ಮಹಿಳೆಯರು ಕಳ್ಳತನ ಮಾಡಿದ್ದು, ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ ಆಗಿದೆ. ಮಾಲೂರು ಪಟ್ಟಣದ ಪಟೇಲರ ಬೀದಿಯ ನಿವಾಸಿಗಳಾಗಿರುವ ನಂದಿನಿ ಹಾಗೂ ಪೂವರ್ ಸನ್ ದಂಪತಿಗೆ ನವಜಾತ ಶಿಶು ಸೇರಿದೆ. ಕೋಲಾರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ನಿಯಂತ್ರಣ ತಪ್ಪಿ ಕಾರು ಪಲ್ಟಿ, ಬಾಲಕ ಸೇರಿ ಇಬ್ಬರು ಸಾವು
ಕಲಬುರಗಿ: ನಿಯಂತ್ರಣ ತಪ್ಪಿ ಕಾರು ಪಲ್ಟಿ, ಬಾಲಕ ಸೇರಿ ಇಬ್ಬರು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಚಿತ್ತಾಪುರ ತಾಲೂಕಿನ ಹಲಕರ್ಟಿ-ಲಾಡ್ಲಾಪುರ ಸಮೀಪ ನಡೆದಿದೆ. ಶಹಬಾದ್ನ ದಯಾನಂದ್(8), ರಮೇಶ್(45) ದುರ್ಮರಣ. ಕಾರಿನಲ್ಲಿದ್ದ 5 ಜನರಿಗೆ ಗಾಯ, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ವಿದ್ಯಾರ್ಥಿನಿ ಮೇಲೆ ಸರ್ಕಾರಿ ಶಾಲೆ HM ಆ್ಯಸಿಡ್ ದಾಳಿ ಆರೋಪ
ಚಿತ್ರದುರ್ಗ: ವಿದ್ಯಾರ್ಥಿನಿ ಮೇಲೆ ಸರ್ಕಾರಿ ಶಾಲೆ ಹೆಚ್ಎಂ ಆ್ಯಸಿಡ್ ದಾಳಿ ಆರೋಪ ಕೇಳಿಬಂದಿದೆ. ಚಿತ್ರದುರ್ಗ ತಾಲೂಕಿನ ಜೋಡಿಚಿಕ್ಕೇನಹಳ್ಳಿ ಶಾಲೆ ಶೌಚಾಲಯ ತೊಳೆಯುವ ಪೌಡರ್ ಪಾಕೆಟ್ ತೆರೆಯುವಾಗ ಘಟನೆ ಸಂಭವಿಸಿದೆ. ಈ ಕುರಿತಾಗಿ ಹೆಚ್ಎಂ ಹೇಳಿಕೆ ನೀಡಿದ್ದು, ಇದು ಆಕಸ್ಮಿಕವಾಗಿ ನಡೆದ ಘಟನೆ, ದುರುದ್ದೇಶದಿಂದ ಪೌಡರ್ ಎರಚಿಲ್ಲ ಎಂದಿದ್ದಾರೆ.
ಇದನ್ನೂ ಓದಿ: ನೆಲಮಂಗಲ: ಬಾಯ್ಲರ್ ಸ್ಫೋಟ: ಓರ್ವ ಕಾರ್ಮಿಕ ಸ್ಥಳದಲ್ಲೇ ಸಾವು, ಮತ್ತೊಬ್ಬನಿಗೆ ಗಾಯ
2ನೇ ತರಗತಿ ವಿದ್ಯಾರ್ಥಿನಿ ಮೇಲೆ ಹೆಚ್ಎಂ ಆ್ಯಸಿಡ್ ದಾಳಿ ಆರೋಪ ಮಾಡಲಾಗಿದೆ. ಬೆನ್ನಿಗೆ ಗಂಭೀರ ಗಾಯವಾಗಿ ಜಿಲ್ಲಾಸ್ಪತ್ರೆಗೆ ವಿದ್ಯಾರ್ಥಿನಿ ದಾಖಲಾಗಿದ್ದಾಳೆ. ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 9:54 pm, Thu, 26 October 23