ಪತ್ನಿ ಕಾಟಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾದ ಪತಿ, ಆಡಿಯೋ ಮೆಸೇಜ್​ನಲ್ಲಿ ಹೆಂಡ್ತಿಯ ಕರಾಳ ಮುಖ ಬಿಚ್ಚಿಟ್ಟ

ಪತ್ನಿಯ ಕಾಟಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ತುಮಕೂರು ಜಿಲ್ಲೆ ಕೆ.ಬಿ ಕ್ರಾಸ್ ಬಳಿಯ ಕುಂದೂರು ಪಾಳ್ಯದಲ್ಲಿ ನಡೆದಿದೆ. ಇನ್ನು ಆತ್ಮಹತ್ಯೆಗೂ ಮುನ್ನ ಮಂಜುನಾಥ್​ ತನ್ನ ಸಹೋದರನಿಗೆ ಆಡಿಯೋ ಮೆಸೇಜ್​ ಕಳುಹಿಸಿದ್ದು, ಆಡಿಯೋದಲ್ಲಿ ಹೆಂಡ್ತಿಯ ಕರಾಳ ಮುಖ ಬಿಚ್ಚಿಟ್ಟಿದ್ದಾರೆ.

ಪತ್ನಿ ಕಾಟಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾದ ಪತಿ, ಆಡಿಯೋ ಮೆಸೇಜ್​ನಲ್ಲಿ ಹೆಂಡ್ತಿಯ ಕರಾಳ ಮುಖ ಬಿಚ್ಚಿಟ್ಟ
Follow us
ಮಹೇಶ್ ಇ, ಭೂಮನಹಳ್ಳಿ
| Updated By: ರಮೇಶ್ ಬಿ. ಜವಳಗೇರಾ

Updated on: Sep 14, 2023 | 1:45 PM

ತುಮಕೂರು, (ಸೆಪ್ಟೆಂಬರ್ 14): ಪತ್ನಿಯ(Wife) ಕಾಟಕ್ಕೆ ಬೇಸತ್ತು ಪತಿ(Husband) ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ತುಮಕೂರು (Tumakuru) ಜಿಲ್ಲೆ ಕೆ.ಬಿ ಕ್ರಾಸ್ ಬಳಿಯ ಕುಂದೂರು ಪಾಳ್ಯದಲ್ಲಿ ನಡೆದಿದೆ. ಮಂಜುನಾಥ್ (38) ನೇಣುಬಿಗಿದುಕೊಂಡು ಆತ್ಮಹತ್ಯೆಗೆ (Suicide) ಶರಣಾದ ಮೃತ ದುರ್ದೈವಿ. ಬೆಂಗಳೂರಿನ ಬಿಎಂಆರ್ ಸಿಎಲ್ ನಲ್ಲಿ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಮಂಜುನಾಥ್, ಕಳೆದ 10 ವರ್ಷದ ಹಿಂದೆ ತುರುವೇಕೆರೆ ಮೂಲದ ಪ್ರೀಯಾಂಕಳನ್ನ ಮದುವೆಯಾಗಿದ್ದ. ಬಳಿಕ ದಂಪತಿ ಬೆಂಗಳೂರಿನಲ್ಲಿ ವಾಸವಿತ್ತು. ಆದ್ರೆ, ಹೊಂದಾಣಿಕೆ ಇಲ್ಲದೇ ಪದೇ ಪದೇ ಗಂಡ ಹೆಂಡತಿ ನಡುವೆ ಗಲಾಟೆ ನಡೆಯುತ್ತಿತ್ತು. ನೀನು ಹಳ್ಳಿ ಗುಗ್ಗು ನಿನ್ನನ್ನ ಮದುವೆಯಾಗಲು ನನಗೆ ಇಷ್ಟ ಇರಲಿಲ್ಲ ಎಂದು ಪ್ರೀಯಾಂಕ, ಪತಿ ಮಂಜುನಾಥನಿಗೆ ಪದೇ ಪದೇ ಕಿಚಾಯಿಸುತ್ತಿದ್ದಳಂತೆ. ಇದೇ ವಿಚಾರಕ್ಕೆ ಇಬ್ಬರ ನಡುವೆ ಪದೇ ಪದೇ ಗಲಾಟೆ ನಡೆಯುತ್ತಿತ್ತು. ಕೊನೆಗೆ ಇದೀಗ ಮಂಜುನಾಥ್ ಪತ್ನಿಯ ಕಿರುಕುಳಕ್ಕೆ ಮನನೊಂದು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಇದನ್ನೂ ಓದಿ: ಕೋಲಾರ: ಕೊಳೆತ ಸ್ಥಿತಿಯಲ್ಲಿ ತಂದೆ ಮಗನ ಶವ ಪತ್ತೆ, ಸಾವಿನ ಸುತ್ತ ಅನುಮಾನಗಳ ಹುತ್ತ

ಆತ್ಮಹತ್ಯೆಯ ಮುನ್ನ ತನ್ನ ಸಹೋದರನಿಗೆ ಆಡಿಯೋ ಮೇಸೆಜ್ ಕಳುಹಿಸಿದ್ದು, ನನಗೆ ಅವಳ ಜೊತೆ ಜೀವನ ಮಾಡುವುದಕ್ಕೆ ಆಗುತ್ತಿಲ್ಲ. ಆ ಮನೆ ಹಾಳಿಯಿಂದ ನಾನು ಸಾಯುತ್ತಿದ್ದೇನೆ. ನನ್ನ ಮಕ್ಕಳನ್ನ ಚೆನ್ನಾಗಿ ನೋಡಿಕೊಳ್ಳಿ ಎಂದು ಆಡಿಯೋ ಮೇಸೆಜ್ ಮಂಜುನಾಥ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನು ಈ ಬಗ್ಗೆ ಪತ್ನಿ ಪ್ರೀಯಾಂಕಳ ವಿರುದ್ಧ ಕಿಬ್ಬನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು,ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ