ತುಮಕೂರು: ಬಟ್ಟೆ ತೊಳೆಯಲು ಹೋಗಿದ್ದ ಮಹಿಳೆ ಕಾಲು ಜಾರಿ ನೀರಿಗೆ ಬಿದ್ದು ಸಾವು

ನಿನ್ನೆ (ಆ.17) ಮಧ್ಯಾಹ್ನ ಬಟ್ಟೆ ತೊಳೆಯಲು ಹೋಗಿದ್ದ ಮಹಿಳೆ ಕಾಲುಜಾರಿ ಬಿದ್ದು ಸಾವನ್ನಪ್ಪಿದ ಘಟನೆ ತುಮಕೂರು ತಾಲ್ಲೂಕಿನ ತಿಮ್ಮನಾಯಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಸೌಂದರ್ಯ(26) ಮೃತ ಮಹಿಳೆ.

ತುಮಕೂರು: ಬಟ್ಟೆ ತೊಳೆಯಲು ಹೋಗಿದ್ದ ಮಹಿಳೆ ಕಾಲು ಜಾರಿ ನೀರಿಗೆ ಬಿದ್ದು ಸಾವು
ತುಮಕೂರು
Follow us
ಮಹೇಶ್ ಇ, ಭೂಮನಹಳ್ಳಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: Aug 18, 2023 | 11:41 AM

ತುಮಕೂರು, ಆ.18: ಗೋಕಟ್ಟೆಗೆ ಬಟ್ಟೆ ತೊಳೆಯಲು ಹೋಗಿದ್ದ ಮಹಿಳೆ ಕಾಲು ಜಾರಿ ನೀರಿಗೆ ಬಿದ್ದು ಸಾವನ್ನಪ್ಪಿದ ಘಟನೆ ತುಮಕೂರು(Tumakur) ತಾಲ್ಲೂಕಿನ ತಿಮ್ಮನಾಯಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಊರ್ಡಿಗೆರೆ ಹೋಬಳಿ ತಿಮ್ಮನಾಯಕನಹಳ್ಳಿ ಗ್ರಾಮದ ಸೌಂದರ್ಯ(26) ಮೃತ ಮಹಿಳೆ. ತಿಮ್ಮನಾಯಕನಹಳ್ಳಿಯ ತವರು ಮನೆಗೆ ಬಂದಿದ್ದ ವೇಳೆ ಈ ಘಟನೆ ನಡೆದಿದೆ. ನಿನ್ನೆ (ಆ.17) ಮಧ್ಯಾಹ್ನ ಬಟ್ಟೆ ತೊಳೆಯಲು ಹೋಗಿದ್ದ ಮಹಿಳೆ ಮನೆಗೆ ವಾಪಸ್ ಬಾರದೇ ಇದ್ದ ಕಾರಣ ಗಂಡನ ಮನೆಗೆ ಹೋಗಿರಬೇಕು ಎಂದು ಭಾವಿಸಿದ್ದರು. ಶುಕ್ರವಾರ ಬೆಳಿಗ್ಗೆ ಗ್ರಾಮಸ್ಥರು ಗೋಕಟ್ಟೆ ಬಳಿ ಹೋದಾಗ ಘಟನೆ ಬೆಳಕಿಗೆ ಬಂದಿದೆ. ಈ ಕುರಿತು ಕ್ಯಾತ್ಸಂದ್ರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಎರಡು ಬೈಕ್​ಗಳ ನಡುವೆ ಡಿಕ್ಕಿಯಾಗಿ ಸಾವು ಪ್ರಕರಣ; ಸಿಸಿಟಿವಿಯಲ್ಲಿ ಸೆರೆ

ಬೆಂಗಳೂರು: ಆಗಸ್ಟ್​ 15 ರ ರಾತ್ರಿ ಕೆಂಗೇರಿ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಎರಡು ಬೈಕ್​ಗಳ ನಡುವೆ ಡಿಕ್ಕಿಯಾಗಿ ನರಸಪ್ಪ (51) ಹಾಗೂ ರಕ್ಷಾ (21) ಇಬ್ಬರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪಘಾತದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬೈಕ್​ನಲ್ಲಿ ಸ್ನೇಹಿತನ ಜೊತೆಗೆ ಆಗಮಿಸುತ್ತಿದ್ದ ಮೃತ ರಕ್ಷಾ ಅವರಿಗೆ ಅಡ್ಡಲಾಗಿ ನರಸಪ್ಪ ಅವರ ಬೈಕ್​ ಬಂದಿದ್ದು, ಈ ವೇಳೆ ಮುಖಾಮುಖಿ ಡಿಕ್ಕಿಯಾಗಿ, ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದರು. ಮೃತ ರಕ್ಷಾ ಸ್ನೇಹಿತ ಚಂದನ್​ಗೆ ಗಂಭೀರ ಗಾಯವಾಗಿತ್ತು. ಈ ಕುರಿತು ಕೆಂಗೇರಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಪ್ರತ್ಯೇಕ ಘಟನೆ: ಕಾಫಿ‌ ಎಸ್ಟೇಟ್ ಮ್ಯಾನೇಜರ್ ಅನುಮಾನಾಸ್ಪದ ಸಾವು, ಹೆಣ್ಣು ಕೊಟ್ಟ ಮಾವನನ್ನೇ ಹತ್ಯೆಗೈದ ಅಳಿಯ

ಕರ್ತವ್ಯದಲ್ಲಿದ್ದ ಹೋಮ್ ಗಾರ್ಡ್​ಗೆ ಕ್ಯಾಂಟರ್ ಡಿಕ್ಕಿ; ಸಿಸಿಟಿವಿಯಲ್ಲಿ ಸೆರೆ

ಬೆಂಗಳೂರು: ಆಗಸ್ಟ್​ 16 ರ ರಾತ್ರಿ 8 ಗಂಟೆ ಸುಮಾರಿಗೆ ನಗರದ ಕೆಂಗೇರಿ ನೈಸ್ ರೋಡ್ ಬಳಿಯ ದೊಡ್ಡಬೆಲೆ ಜಂಕ್ಷನ್​ನಲ್ಲಿ ಕರ್ತವ್ಯದಲ್ಲಿದ್ದ ಹೋಮ್ ಗಾರ್ಡ್​ಗೆ ಕ್ಯಾಂಟರ್ ಡಿಕ್ಕಿಯಾಗಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪಘಾತದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನಗರದ ಒಳಗಡೆ ಬರುತ್ತಿದ್ದ ವಾಹನಗಳನ್ನು ಹೋಂ ಗಾರ್ಡ್​ ಡೈವರ್ಟ್ ಮಾಡುತ್ತಿದ್ದರು. ಈ ವೇಳೆ ಕುಂಬಳಗೋಡು ಕಡೆಯಿಂದ ಬರುತ್ತಿದ್ದ ಕ್ಯಾಂಟರ್​ನ್ನು ಡೈವರ್ಟ್ ಮಾಡಲು ಮುಂದಾಗಿದ್ದ ಹೋಂ ಗಾರ್ಡ್​ ವಿಜಯ್ ಕುಮಾರ್​ಗೆ ನೇರವಾಗಿ ಹೋಗುತ್ತಿದ್ದ ಟ್ಯಾಂಕರ್ ಡಿಕ್ಕಿ ಹೊಡೆದಿತ್ತು. ಇದರಿಂದ ಕೆಳಗೆ ಬಿದ್ದ ಹೋಂಗಾರ್ಡ್ ಮೇಲೆ ಕ್ಯಾಂಟರ್ ಹರಿದಿದ್ದು, ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ವಿಜಯ್ ಕುಮಾರ್ ಅವರನ್ನು ತಕ್ಷಣವೇ ಟ್ರಾಫಿಕ್ ಪೊಲೀಸ್​ ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ, ಮಾರ್ಗ ಮಧ್ಯೆಯೆ ವಿಜಯ್ ಕುಮಾರ್ ಮೃತಪಟ್ಟಿದ್ದರು. ಈ ಕುರಿತು ಕೆಂಗೇರಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ