ತುಮಕೂರು: ಎರಡು ಕಾರುಗಳ ಮಧ್ಯೆ ಮುಖಾಮುಖಿ ಡಿಕ್ಕಿ; ಮಹಿಳೆ ಸಾವು

| Updated By: ವಿವೇಕ ಬಿರಾದಾರ

Updated on: Nov 12, 2022 | 9:25 PM

ಎರಡು ಕಾರುಗಳ ಮಧ್ಯೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಮಹಿಳೆ ಸಾವನ್ನಪ್ಪಿರುವ ಘಟನೆ ಕೊರಟಗೆರೆ ತಾಲೂಕಿನ ದೊಮ್ಮಗಲಯ್ಯನಪಾಳ್ಯ ಗೇಟ್ ಬಳಿ ನಡೆದಿದೆ.

ತುಮಕೂರು: ಎರಡು ಕಾರುಗಳ ಮಧ್ಯೆ ಮುಖಾಮುಖಿ ಡಿಕ್ಕಿ; ಮಹಿಳೆ ಸಾವು
ಸಾಂದರ್ಭಿಕ ಚಿತ್ರ
Image Credit source: PTI
Follow us on

ತುಮಕೂರು: ಎರಡು ಕಾರುಗಳ ಮಧ್ಯೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಮಹಿಳೆ ಸಾವನ್ನಪ್ಪಿರುವ ಘಟನೆ ಕೊರಟಗೆರೆ ತಾಲೂಕಿನ ದೊಮ್ಮಗಲಯ್ಯನಪಾಳ್ಯ ಗೇಟ್ ಬಳಿ ನಡೆದಿದೆ. ಇನ್ನು ಕಾರಿನಲ್ಲಿದ್ದ ಐವರಿಗೆ ಗಂಭೀರ ಗಾಯಗಳಾಗಿದ್ದು, ಕೊರಟಗೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಗಳೂರು ಕಡೆ ತೆರಳುತ್ತಿದ್ದ ಮಹೇಂದ್ರ ಕಾರು ಮತ್ತು ಎಲೆರಾಂಪುರದಿಂದ ಮಧುಗಿರಿ ಕಡೆಗೆ ಹೊರಟಿದ್ದ ಇಟಿಯೋಸ್ ನಡುವೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಇಟಿಯೋಸ್ ಕಾರು ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಕೊರಟಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಹಾಲಿನ ಟ್ಯಾಂಕರ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಬೆಂಗಳೂರಿನ ಮೂವರು ದುರ್ಮರಣ

ಬೆಂಗಳೂರು: ಹಾಲಿನ ಟ್ಯಾಂಕರ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಬೆಂಗಳೂರಿನ ಮೂವರು ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಚಿತ್ತೂರು ಬಳಿಯ ಬೆಂಗಳೂರು-ಪೂತಲಪಟ್ಟು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಬೆಂಗಳೂರಿನ ಬಸವಣ್ಣನಗರದ ನಿವಾಸಿ ಅಶೋಕ್ ಬಾಬು(31), 28 ವರ್ಷದ ಪತ್ನಿ, 2 ವರ್ಷದ ಮಗು ಸಾವನ್ನಪ್ಪಿದೆ. ಮೂವರು kA53 mh 1858 ರ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಚಿತ್ತೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಕಾಲುಜಾರಿ ಹೊಂಡಕ್ಕೆ ಬಿದ್ದು ಬಾಲಕಿ ಮತ್ತು ಯುವತಿ ಸಾವು

ಕಲಬುರಗಿ: ಕಾಲುಜಾರಿ ಹೊಂಡಕ್ಕೆ ಬಿದ್ದು ಬಾಲಕಿ ಮತ್ತು ಯುವತಿ ಸಾವನ್ನಪ್ಪಿರುವ ಘಟನೆ ಶಹಬಾದ್ ತಾಲೂಕಿನ ರಾಮಘಡ್ ಕಾಲೋನಿಯ ಬಳಿ ನಡೆದಿದೆ. ಮಾಣಿಕಮ್ಮ ದಾಸರ್(20) ಹಾಗೂ ಕೀರ್ತಿಕಾ(12) ಮೃತ ದುರ್ದೈವಿಗಳು. ಬಾಲಕಿ ಮತ್ತು ಬಟ್ಟೆ ತೊಳೆಯಲು ಹೋಗಿದ್ದಾಗ ಕಾಲುಜಾರಿ ಬಿದ್ದು ಸಾವನ್ನಪ್ಪಿದ್ದಾರೆ. ಶಹಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ