ತುಮಕೂರು ಪಾವಗಡದಲ್ಲಿ ಬಸ್ ದುರಂತ; ಮೃತರ ಸಂಖ್ಯೆ 7ಕ್ಕೇರಿಕೆ

ಪಳವಳ್ಳಿ ಕಟ್ಟೆ ಬಳಿ ಖಾಸಗಿ ಬಸ್ ಉಲ್ಟಾ ಹೊಡೆದಿತ್ತು. ಮಿತಿ ಮೀರಿ ಬಸ್ನಲ್ಲಿ ಜನರನ್ನು ತುಂಬಿ ಚಲಾಯಿಸಿದ ಹಿನ್ನೆಲೆ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದೆ. ಅಪಘಾತದಲ್ಲಿ ಸ್ಥಳದಲ್ಲಿ ಸುಮಾರು ಆರು ಜನ ಸಾವನ್ನಪ್ಪಿದ್ದರು.

ತುಮಕೂರು ಪಾವಗಡದಲ್ಲಿ ಬಸ್ ದುರಂತ; ಮೃತರ ಸಂಖ್ಯೆ 7ಕ್ಕೇರಿಕೆ
ಮೃತ ಯುವಕ ಮಹೇಂದ್ರ
Follow us
TV9 Web
| Updated By: sandhya thejappa

Updated on:Mar 26, 2022 | 8:39 AM

ತುಮಕೂರು: ಪಾವಗಡ ತಾಲೂಕಿನ ಪಳವಳ್ಳಿ ಕಟ್ಟೆ ಬಳಿ ನಡೆದ ಬಸ್ ಅಪಘಾತ (Bus Accident) ಪ್ರಕರಣಕ್ಕೆ ಸಂಬಂಧಿಸಿ ಮೃತರ ಸಂಖ್ಯೆ ಏಳಕ್ಕೆ ಏರಿಕೆಯಾಗಿದೆ. ಚಿಕಿತ್ಸೆ ಫಲಿಸದೆ 18 ವರ್ಷದ ಮಹೇಂದ್ರ ಮೃತಪಟ್ಟಿದ್ದಾರೆ. ಕಳೆದ ಒಂದು ವಾರದಿಂದ ಚಿಕಿತ್ಸೆ ಪಡೆಯುತ್ತಿದ್ದ ಯುವಕ ಕೊನೆಯುಸಿರೆಳೆದಿದ್ದಾರೆ. ಯುವಕ ಮಹೇಂದ್ರಗೆ ಚಿಕಿತ್ಸೆಗಾಗಿ ವಿವಿಧ ಆಸ್ಪತ್ರೆಗಳಿಗೆ ಸುತ್ತಿ, ಕೊನೆಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ (Victoria Hospital) ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ತಲೆಗೆ ಹಾಗೂ ಬೆನ್ನಿಗೆ ಗಂಭೀರ ಗಾಯವಾಗಿತ್ತು. 

ಪಳವಳ್ಳಿ ಕಟ್ಟೆ ಬಳಿ ಖಾಸಗಿ ಬಸ್ ಉಲ್ಟಾ ಹೊಡೆದಿತ್ತು. ಮಿತಿ ಮೀರಿ ಬಸ್​ನಲ್ಲಿ ಜನರನ್ನು ತುಂಬಿ ಚಲಾಯಿಸಿದ ಹಿನ್ನೆಲೆ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದೆ. ಅಪಘಾತದಲ್ಲಿ ಸ್ಥಳದಲ್ಲಿ ಸುಮಾರು ಆರು ಜನ ಸಾವನ್ನಪ್ಪಿದ್ದರು. ಹಲವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಗಂಭೀರ ಗಾಯಗೊಂಡಿದ್ದ ಪಾವಗಡ ತಾಲೂಕಿನ ಬುಡ್ಡಾರೆಡ್ಡಿಹಳ್ಳಿ ಗ್ರಾಮದ ನಿವಾಸಿ ಮಹೇಂದ್ರ ಇಂದು ಮೃತಪಟ್ಟಿದ್ದಾರೆ. ಇಂದು ಮಧ್ಯಾಹ್ನ ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ಆಟೋ ಟಾಪ್ ಮೇಲೆ ಕೂರಿಸಿ ಆಟೋ ಚಲಾಯಿಸಿದ ಚಾಲಕ: ಜಿಲ್ಲೆಯಲ್ಲಿ ಭೀಕರ ಅಪಘಾತ ನಡೆದರೂ ಜನರು ಮಾತ್ರ ನಿರ್ಲಕ್ಷ್ಯ ತೋರುತ್ತಿದ್ದಾರೆ. ಖಾಸಗಿ ಬಸ್ ಅಪಘಾತದಲ್ಲಿ ಸುಮಾರು 7 ಜನ ಮೃತಪಟ್ಟಿದ್ದಾರೆ. ಒಂದು ಬಸ್​ನಲ್ಲಿ 130ಕ್ಕೂ ಹೆಚ್ಚು ಜನರನ್ನು ಕೂರಿಸಿಕೊಂಡು ಪ್ರಯಾಣ ಮಾಡಿದ್ದಕ್ಕೆ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಹೀಗಿದ್ದೂ, ಆಟೋ ಚಾಲಕರು ಪಾವಗಡದಲ್ಲಿ ವಿದ್ಯಾರ್ಥಿಗಳನ್ನ ತುಂಬಿಕೊಂಡ ಚಲಾಯಿಸುತ್ತಿದ್ದಾರೆ. ಟಾಪ್ ಮೇಲೆಯೂ ವಿದ್ಯಾರ್ಥಿಗಳನ್ನ ಕೂರಿಸಿಕೊಂಡಿದ್ದು, ಅಧಿಕಾರಿಗಳು ಎಚ್ಚರ ವಹಿಸಿಲ್ಲ ಎಂಬ ಆರೋಪ ಕೇಳಿಬಂದಿದೆ.

ಇದನ್ನೂ ಓದಿ

Elon Musk: ಇನ್ನೆರಡು ವರ್ಷದಲ್ಲಿ ಎಲಾನ್ ಮಸ್ಕ್ ಆಸ್ತಿ 1 ಲಕ್ಷ ಕೋಟಿ ಯುಎಸ್​ಡಿ, ಅಂದರೆ 76 ಲಕ್ಷ ಕೋಟಿ ರೂ. ಅಂತಿದೆ ಈ ವರದಿ

Cumin for health: ಪ್ರತಿದಿನ ಜೀರಿಗೆ ಸೇವಿಸುವುದರಿಂದಾಗುವ ಆರೋಗ್ಯಕರ ಬದಲಾವಣೆ ಬಗ್ಗೆ ನಿಮಗೆಷ್ಟು ಗೊತ್ತು?

Published On - 8:38 am, Sat, 26 March 22

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್