ತುಮಕೂರು: ಪಾವಗಡ ತಾಲೂಕಿನ ಪಳವಳ್ಳಿ ಕಟ್ಟೆ ಬಳಿ ನಡೆದ ಬಸ್ ಅಪಘಾತ (Bus Accident) ಪ್ರಕರಣಕ್ಕೆ ಸಂಬಂಧಿಸಿ ಮೃತರ ಸಂಖ್ಯೆ ಏಳಕ್ಕೆ ಏರಿಕೆಯಾಗಿದೆ. ಚಿಕಿತ್ಸೆ ಫಲಿಸದೆ 18 ವರ್ಷದ ಮಹೇಂದ್ರ ಮೃತಪಟ್ಟಿದ್ದಾರೆ. ಕಳೆದ ಒಂದು ವಾರದಿಂದ ಚಿಕಿತ್ಸೆ ಪಡೆಯುತ್ತಿದ್ದ ಯುವಕ ಕೊನೆಯುಸಿರೆಳೆದಿದ್ದಾರೆ. ಯುವಕ ಮಹೇಂದ್ರಗೆ ಚಿಕಿತ್ಸೆಗಾಗಿ ವಿವಿಧ ಆಸ್ಪತ್ರೆಗಳಿಗೆ ಸುತ್ತಿ, ಕೊನೆಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ (Victoria Hospital) ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ತಲೆಗೆ ಹಾಗೂ ಬೆನ್ನಿಗೆ ಗಂಭೀರ ಗಾಯವಾಗಿತ್ತು.
ಪಳವಳ್ಳಿ ಕಟ್ಟೆ ಬಳಿ ಖಾಸಗಿ ಬಸ್ ಉಲ್ಟಾ ಹೊಡೆದಿತ್ತು. ಮಿತಿ ಮೀರಿ ಬಸ್ನಲ್ಲಿ ಜನರನ್ನು ತುಂಬಿ ಚಲಾಯಿಸಿದ ಹಿನ್ನೆಲೆ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದೆ. ಅಪಘಾತದಲ್ಲಿ ಸ್ಥಳದಲ್ಲಿ ಸುಮಾರು ಆರು ಜನ ಸಾವನ್ನಪ್ಪಿದ್ದರು. ಹಲವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಗಂಭೀರ ಗಾಯಗೊಂಡಿದ್ದ ಪಾವಗಡ ತಾಲೂಕಿನ ಬುಡ್ಡಾರೆಡ್ಡಿಹಳ್ಳಿ ಗ್ರಾಮದ ನಿವಾಸಿ ಮಹೇಂದ್ರ ಇಂದು ಮೃತಪಟ್ಟಿದ್ದಾರೆ. ಇಂದು ಮಧ್ಯಾಹ್ನ ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
ಆಟೋ ಟಾಪ್ ಮೇಲೆ ಕೂರಿಸಿ ಆಟೋ ಚಲಾಯಿಸಿದ ಚಾಲಕ:
ಜಿಲ್ಲೆಯಲ್ಲಿ ಭೀಕರ ಅಪಘಾತ ನಡೆದರೂ ಜನರು ಮಾತ್ರ ನಿರ್ಲಕ್ಷ್ಯ ತೋರುತ್ತಿದ್ದಾರೆ. ಖಾಸಗಿ ಬಸ್ ಅಪಘಾತದಲ್ಲಿ ಸುಮಾರು 7 ಜನ ಮೃತಪಟ್ಟಿದ್ದಾರೆ. ಒಂದು ಬಸ್ನಲ್ಲಿ 130ಕ್ಕೂ ಹೆಚ್ಚು ಜನರನ್ನು ಕೂರಿಸಿಕೊಂಡು ಪ್ರಯಾಣ ಮಾಡಿದ್ದಕ್ಕೆ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಹೀಗಿದ್ದೂ, ಆಟೋ ಚಾಲಕರು ಪಾವಗಡದಲ್ಲಿ ವಿದ್ಯಾರ್ಥಿಗಳನ್ನ ತುಂಬಿಕೊಂಡ ಚಲಾಯಿಸುತ್ತಿದ್ದಾರೆ. ಟಾಪ್ ಮೇಲೆಯೂ ವಿದ್ಯಾರ್ಥಿಗಳನ್ನ ಕೂರಿಸಿಕೊಂಡಿದ್ದು, ಅಧಿಕಾರಿಗಳು ಎಚ್ಚರ ವಹಿಸಿಲ್ಲ ಎಂಬ ಆರೋಪ ಕೇಳಿಬಂದಿದೆ.
ಇದನ್ನೂ ಓದಿ
Cumin for health: ಪ್ರತಿದಿನ ಜೀರಿಗೆ ಸೇವಿಸುವುದರಿಂದಾಗುವ ಆರೋಗ್ಯಕರ ಬದಲಾವಣೆ ಬಗ್ಗೆ ನಿಮಗೆಷ್ಟು ಗೊತ್ತು?
Published On - 8:38 am, Sat, 26 March 22