ತುಮಕೂರು: ಗಾರ್ಮೆಂಟ್ಸ್ ಸಿಬ್ಬಂದಿ ತೆರಳುತ್ತಿದ್ದ ಮಿನಿ ಬಸ್ ಅಪಘಾತ; ಓರ್ವ ಸಾವು, 18 ಜನರಿಗೆ ಗಾಯ
ಗಾರ್ಮೆಂಟ್ಸ್ ನೌಕರ ಕೆಂಪಣ್ಣ (40) ಮೃತ ದುರ್ದೈವಿ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅತಿವೇಗವಾಗಿ ಬಂದು ಮಿನಿ ಬಸ್ ಪಲ್ಟಿಯಾಗಿರುವ ಶಂಕೆ ವ್ಯಕ್ತವಾಗಿದೆ.
ತುಮಕೂರು: ಗಾರ್ಮೆಂಟ್ಸ್ ಸಿಬ್ಬಂದಿ ತೆರಳುತ್ತಿದ್ದ ಮಿನಿ ಬಸ್ ಅಪಘಾತಕ್ಕೊಳಗಾದ ಘಟನೆ ತುಮಕೂರು ತಾಲೂಕಿನ ಪಂಡಿತನಹಳ್ಳಿ ಬಳಿ ನಡೆದಿದೆ. ಘಟನೆಯಲ್ಲಿ ಒಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 18 ಜನರಿಗೆ ಗಂಭೀರ ಗಾಯವಾಗಿದೆ. ಗಾರ್ಮೆಂಟ್ಸ್ ನೌಕರ ಕೆಂಪಣ್ಣ (40) ಮೃತ ದುರ್ದೈವಿ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅತಿವೇಗವಾಗಿ ಬಂದು ಮಿನಿ ಬಸ್ ಪಲ್ಟಿಯಾಗಿರುವ ಶಂಕೆ ವ್ಯಕ್ತವಾಗಿದೆ. ಕ್ಯಾತ್ಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಧಾರವಾಡ: ಮುಂದುವರಿದ ಪುಡಿ ರೌಡಿಗಳ ಪುಂಡಾಟ ಧಾರವಾಡದಲ್ಲಿ ಪುಡಿ ರೌಡಿಗಳ ಪುಂಡಾಟ ಮುಂದುವರಿದಿದೆ. ಬೇರೆಡೆಯಿಂದ ಬಂದಿರುವ ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ ಮಾಡಲಾಗಿದೆ. ಧಾರವಾಡದಿಂದ ಓಡಿಸುತ್ತೇನೆ ಎಂದು ಪುಂಡರು ಆವಾಜ್ ಹಾಕಿದ್ದಾರೆ. ಧಾರವಾಡದ ಕೋರ್ಟ್ ವೃತ್ತದಲ್ಲಿ ಕ್ಷುಲ್ಲಕ ಕಾರಣಕ್ಕೆ ಧಮ್ಕಿ ಹಾಕಲಾಗಿದೆ. ರೌಡಿಶೀಟರ್, ಡಿಸಿ ಕಚೇರಿ ಎದುರೇ ಮಧ್ಯಾಹ್ನ ಹಲ್ಲೆ ನಡೆಸಿದ್ದ. ಪೊಲೀಸರೆದುರೇ ಯುವಕನ ಬಟ್ಟೆ ಹರಿದು ಹಲ್ಲೆ ಮಾಡಿದ್ದ. ರೌಡಿಶೀಟರ್ ಹಲ್ಲೆ ಮಾಡುತ್ತಿದ್ದರು ಪೊಲೀಸರು ಸುಮ್ಮನಿದ್ದರು ಎಂದು ಹೇಳಲಾಗಿದೆ. ಧಾರವಾಡದಲ್ಲಿ ಹಲ್ಲೆ ಪ್ರಕರಣಗಳು ದಿನೇದಿನೆ ಹೆಚ್ಚುತ್ತಿದೆ. ಹುಬ್ಬಳ್ಳಿ- ಧಾರವಾಡ ಪೊಲೀಸರ ನಿಷ್ಕ್ರಿಯತೆಗೆ ಸಾರ್ವಜನಿಕರ ಆಕ್ರೋಶ ವ್ಯಕ್ತವಾಗಿದೆ. ಧಾರವಾಡ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ವಿಜಯಪುರ: RTO ಚೆಕ್ಪೋಸ್ಟ್ ಮೇಲೆ ಎಸಿಬಿ ದಾಳಿ ವಿಜಯಪುರ ಜಿಲ್ಲೆ ಚಡಚಣ ತಾಲೂಕಿನ ಧೂಳಖೇಡ ಗ್ರಾಮದ ಬಳಿಯ RTO ಚೆಕ್ಪೋಸ್ಟ್ ಮೇಲೆ ಎಸಿಬಿ ದಾಳಿ ನಡೆಸಿದೆ. ರಾಷ್ಟ್ರೀಯ ಹೆದ್ದಾರಿ 50ರಲ್ಲಿರುವ ಆರ್ಟಿಒ ಚೆಕ್ಪೋಸ್ಟ್ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಕರ್ನಾಟಕ- ಮಹಾರಾಷ್ಟ್ರ ರಾಜ್ಯ ಸಂಪರ್ಕಿಸುವ ಎನ್ಹೆಚ್ 50 ಚೆಕ್ಪೋಸ್ಟ್ನಲ್ಲಿ ಭಾರಿ ಪ್ರಮಾಣದ ಅವ್ಯವಹಾರ ಆರೋಪ ಕೇಳಿಬಂದಿತ್ತು. ವ್ಯಾಪಕ ದೂರಿನ ಹಿನ್ನೆಲೆಯಲ್ಲಿ ಎಸಿಬಿ ಅಧಿಕಾರಿಗಳ ದಾಳಿ ಮಾಡಿದ್ದಾರೆ.
ಎಸಿಬಿ ಡಿವೈಎಸ್ಪಿ ಮಂಜುನಾಥ ಗಂಗಲ್ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ. ಎಸಿಬಿ ದಾಳಿ ವೇಳೆ ಹೋಮ್ಗಾರ್ಡ್ಗಳು ಓಡಿಹೋಗಿದ್ದಾರೆ. ಆರ್ಟಿಒ ಅಧಿಕಾರಿಗಳು, ಖಾಸಗಿ ವ್ಯಕ್ತಿಗಳನ್ನು ನಿಯೋಜಿಸಿದ್ದರು ಎಂದು ತಿಳಿದುಬಂದಿದೆ. ಧೂಳಖೇಡ ಚೆಕ್ಪೋಸ್ಟ್ನಲ್ಲಿ ಅಧಿಕಾರಿಗಳಿಂದ ತಪಾಸಣೆ ನಡೆಸಲಾಗಿದೆ.
ಹಾವೇರಿ: ಹೋರಿ ಬೆದರಿಸುವ ಹಬ್ಬ ಆಯೋಜಿಸಿದ್ದವರ ವಿರುದ್ಧ ಪ್ರಕರಣ ಹೋರಿ ಬೆದರಿಸುವ ಹಬ್ಬ ಆಯೋಜಿಸಿದ್ದವರ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ. ಹಾವೇರಿ ತಾಲೂಕಿನ ಗುತ್ತಲ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಹಾವೇರಿ ತಾಲೂಕಿನ ಬಸಾಪುರದಲ್ಲಿ ಹಬ್ಬ ಆಯೋಜಿಸಿದ್ದರು. ಹೋರಿ ತಿವಿದು ನಿನ್ನೆ 8 ಜನರು ಗಂಭೀರ ಗಾಯಗೊಂಡಿದ್ದರು. ಈ ಹಿನ್ನೆಲೆಯಲ್ಲಿ, ಆಲದಮ್ಮದೇವಿ ಸಮಿತಿ ಸದಸ್ಯರ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ. ಭಾರತೀಯ ದಂಡ ಸಂಹಿತೆ 336, 338, 325, 289, ಎನ್ಡಿಎಂಎ ಕಲಂ 5ರಡಿ ಪ್ರಕರಣ ಪೊಲೀಸರು ದಾಖಲಿಸಿದ್ದಾರೆ. ಐವರನ್ನು ಬಂಧಿಸಿ ಪೊಲೀಸರು ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ. ಅನುಮತಿ ಪಡೆಯದೆ, ಮುಂಜಾಗ್ರತಾ ಕ್ರಮಕೈಗೊಳ್ಳದೆ ಅಪಾಯ ಉಂಟಾಗಿದೆ. ದನಗಳಿಗೆ ಹಿಂಸೆ ಆಗುವ ರೀತಿಯಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದು ಹಾವೇರಿ ಎಸ್ಪಿ ಹನುಮಂತರಾಯ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.
ಇದನ್ನೂ ಓದಿ: Crime News: ಅಕ್ರಮ ಗೋಸಾಗಾಟ ಮಾಡುತ್ತಿದ್ದ ವಾಹನ ಬೆನ್ನತ್ತಿದ ಯುವಕರು, ಲಾರಿ ಚಾಲಕನ ಅಜಾಗ್ರತೆಯಿಂದ ಉರುಳಿದ 9 ಕಂಬ
ಇದನ್ನೂ ಓದಿ: ನೆಲಮಂಗಲ: ಪರವಾನಗಿ ಪಡೆಯದೆ ಅಕ್ರಮ ಗ್ಯಾಸ್ ರೀಫಿಲಿಂಗ್ ಮಾಡುತ್ತಿದ್ದ ಮನೆ ಮೇಲೆ ಸಿಸಿಬಿ ದಾಳಿ; ಓರ್ವನ ಬಂಧನ