AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೃಹ ಸಚಿವರ ತವರು ಜಿಲ್ಲೆಯಲ್ಲಿ ಮಹಿಳಾ ಪೊಲೀಸ್​ ಮುಂದೆ ಡ್ರ್ಯಾಗರ್ ಹಿಡಿದು ಪುಡಿರೌಡಿಯ ಹುಚ್ಚಾಟ

ಆರೋಪಿ ಮೋಜಾ ಅಲಿಯಾಸ್​ ಮಧುವನ್ನು ಸೆರೆ ಹಿಡಿಯಲು ಹೋದ ವೇಳೆ, ಎನ್​ಇಪಿಎಸ್ ಠಾಣೆಯ ಮಹಿಳಾ ಪೊಲೀಸ್ ಮಂಗಳಮ್ಮ ಮುಂದೆ ಡ್ರ್ಯಾಗರ್ ಹಿಡಿದು ಪುಂಡಾಟವಾಡಿದ್ದಾನೆ. ಸುಮಾರು ಅರ್ಧ ಗಂಟೆಗಳ ಕಾಲ ಮಹಿಳಾ ಪೊಲೀಸ್​ ಮುಂದೆ ಹುಚ್ಚಾಟವಾಡಿದ್ದಾನೆ. ಕೊನೆಗೆ ಪೊಲೀಸರು ಹರಸಾಹಸಪಟ್ಟು ಆರೋಪಿಯನ್ನು ಹಿಡಿಯಲು ಯಶಸ್ವಿಯಾದರು.

ಮಹೇಶ್ ಇ, ಭೂಮನಹಳ್ಳಿ
| Edited By: |

Updated on:Oct 31, 2023 | 10:47 AM

Share

ತುಮಕೂರು ಅ.31: ಗೃಹ ಸಚಿವ ಡಾ.ಜಿ ಪರಮೇಶ್ವರ್ (G Parmeshwara)​​ ಅವರ ತವರು ಜಿಲ್ಲೆ ತುಮಕೂರಿನಲ್ಲಿ (Tumakuru) ಪುಡಿರೌಡಿಗಳ (Rowdy) ಅಟ್ಟಹಾಸ ಮಿತಿ ಮೀರಿದೆ ಎಂಬ ಅನುಮಾನ ವ್ಯಕ್ತವಾಗಿದೆ. ಹೌದು ಓರ್ವ ಪುಡಿರೌಡಿ ಕೈಯಲ್ಲಿ ಡ್ಯ್ರಾಗರ್​ ಹಿಡಿದು ಮಹಿಳಾ ಪೊಲೀಸ್ (Police) ಸಿಬ್ಬಂದಿ ಮುಂದೆಯೇ ಹುಚ್ಚಾಟವಾಡಿದ್ದಾನೆ.

ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಮೋಜಾ ಅಲಿಯಾಸ್​​ ಮಧು ಇತ್ತೀಚೆಗಷ್ಟೇ ಜೈಲಿನಿಂದ ಜಾಮೀನು ಮೇಲೆ ಹೊರಬಂದಿದ್ದನು. ನಿನ್ನೆ (ಅ.30) ರಂದು ತುಮಕೂರಿನ ಅಶೋಕ ರಸ್ತೆಯಲ್ಲಿನ ಖಾಸಗಿ ಬಸ್​ ನಿಲ್ದಾಣದ ಬಳಿ ಕೈಯಲ್ಲಿ ಡ್ರ್ಯಾಗರ್ ಹಿಡಿದು, ಸಾರ್ವಜನಿಕರಿಗೆ ಬೆದರಿಸಿ ಮೊಬೈಲ್ ದೋಚುತ್ತಿದ್ದನು. ಈ ಬಗ್ಗೆ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದರು. ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದರು.

ಇದನ್ನೂ ಓದಿ: ಬೆಂಗಳೂರಿನಲ್ಲಿ ಪುಡಿರೌಡಿಗಳ ಅಟ್ಟಹಾಸ: ಯುವಕನ ಮೇಲೆ ಮಾರಣಾಂತಿಕ ಹಲ್ಲೆ

ಆರೋಪಿ ಮೋಜಾ ಅಲಿಯಾಸ್​ ಮಧುವನ್ನು ಸೆರೆ ಹಿಡಿಯಲು ಹೋದ ವೇಳೆ, ಎನ್​ಇಪಿಎಸ್ ಠಾಣೆಯ ಮಹಿಳಾ ಪೊಲೀಸ್ ಮಂಗಳಮ್ಮ ಮುಂದೆ ಡ್ರ್ಯಾಗರ್ ಹಿಡಿದು ಪುಂಡಾಟವಾಡಿದ್ದಾನೆ. ಸುಮಾರು ಅರ್ಧ ಗಂಟೆಗಳ ಕಾಲ ಮಹಿಳಾ ಪೊಲೀಸ್​ ಮುಂದೆ ಹುಚ್ಚಾಟವಾಡಿದ್ದಾನೆ. ಕೊನೆಗೆ ಪೊಲೀಸರು ಹರಸಾಹಸಪಟ್ಟು ಆರೋಪಿಯನ್ನು ಹಿಡಿಯಲು ಯಶಸ್ವಿಯಾದರು. ಆರೋಪಿ ಮೋಜಾ ಅಲಿಯಾಸ್​ ಮಧು ಹಾಗೂ ಆತನ ಜೊತೆಯಿದ್ದ ಮನೋಜ್ ಎಂಬಾತನನ್ನೂ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ ಹೊಸ ಬಡಾವಣೆ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:47 am, Tue, 31 October 23

ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ