ತುಮಕೂರು, ಆ.23: ಮೇಲಾಧಿಕಾರಿ ಕಿರುಕುಳಕ್ಕೆ ಬೇಸತ್ತು ಸಹಾಯಕ ಸರ್ವೆಯರ್ (Assistant Surveyor) ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ತುಮಕೂರು (Tumakur) ಜಿಲ್ಲಾಧಿಕಾರಿ ಆವರಣದಲ್ಲಿ ನಡೆದಿದೆ. ಮಹೇಶ್ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. 6 ರಿಂದ7 ವರ್ಷ ಕೆಲಸ ಮಾಡುತ್ತಿರುವ ಸಹಾಯಕ ಸರ್ವೆಯರ್ ಮಹೇಶ್ ಮೇಲೆ ಸರ್ವೆ ಮೇಲ್ವಿಚಾರಕಿ ಕವಿತಾ ಎಂಬುವವರು ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ. ಹೌದು, ಸರಿಯಾಗಿ ಕೆಲಸ ಮಾಡಿಲ್ಲ ಎಂದು ಮಹೇಶ್ಗೆ ಟಾರ್ಚರ್ ನೀಡುತ್ತಿದ್ದಾರೆ ಎಂದು ಮಹೇಶ್ ಆರೋಪಿಸಿ ಡೆತ್ನೋಟ್ ಬರೆದಿಟ್ಟು, ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕೂಡಲೇ ಅವರನ್ನು ತುಮಕೂರು ಜಿಲ್ಲಾಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗಿದೆ. ಇನ್ನು ಈ ಘಟನೆ ತುಮಕೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ರಾಮನಗರ: ತಾಲ್ಲೂಕಿನ ಲಕ್ಷ್ಮೀಪುರ ಗ್ರಾಮದಲ್ಲಿ ನಡೆಯುತ್ತಿದ್ದ ಪ್ರತಿಭಾ ಕಾರಂಜಿ ಕಾರ್ಯಕ್ರಮದ ವೇಳೆ ಪೆಟ್ರೋಲ್ ಬಿದ್ದು ವಿದ್ಯಾರ್ಥಿಯೊರ್ವನಿಗೆ ಸುಟ್ಟಗಾಯಗಳಾಗಿವೆ. ಕೂಡಲೇ ಬಾಲಕನನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಪ್ರೀತಮ್ (12)ಗಾಯಗೊಂಡ ವಿದ್ಯಾರ್ಥಿ. 5 ನೇ ತರಗತಿ ವ್ಯಾಸಾಂಗ ಮಾಡುತ್ತಿದ್ದ ಪ್ರೀತಮ್, ವೀರಗಾಸೆ ಪ್ರದರ್ಶನ ವೇಳೆ ಪೆಟ್ರೋಲ್ ಬಳಕೆ ಮಾಡಿದ್ದರು. ಈ ವೇಳೆ ಈ ಅವಘಡ ಸಂಭವಿಸಿದ್ದು, ಕಣ್ಣು, ಮುಖ ಹಾಗೂ ತಲೆ ಭಾಗಕ್ಕೆ ಸುಟ್ಟ ಗಾಯಗಳಾಗಿವೆ. ಘಟನೆ ಬಳಿಕ ವಿದ್ಯಾರ್ಥಿಗಳ ಕೈಯಲ್ಲಿ ಪೆಟ್ರೋಲ್ ಬಳಸಲು ಅನುಮತಿ ನೀಡಿದಕ್ಕೆ ಶಿಕ್ಷಕರ ವಿರುದ್ದ ಪೋಷಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ರಾಮನಗರ ಗ್ರಾಮಾಂತರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ತುಮಕೂರು: ಜಿಲ್ಲೆಯ ಕೊರಟಗೆರೆ ಬೆಸ್ಕಾಂ ಎಇಇ ಅರಸರಾಜು ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರೈತರ ಬಳಿ ಸದಾ ಲಂಚಕ್ಕಾಗಿ ಪೀಡಿಸುತ್ತಿದ್ದ ಆರೋಪದಡಿ ದಾಳಿ ಮಾಡಲಾಗಿದ್ದು, ಗುತ್ತಿಗೆದಾರ ಹರೀಶ್ ಎಂಬುವವರಿಂದ 50 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ. ಅರಸರಾಜು ಬಳಿಯಿದ್ದ ಸುಮಾರು 50 ಸಾವಿರ ನಗದು ವಶಕ್ಕೆ ಪಡೆಯಲಾಗಿದ್ದು, ಅರಸರಾಜು ಅವರನ್ನು ವಶಕ್ಕೆ ಪಡೆದು ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ.
ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ