ಸಿದ್ದಗಂಗಾ ಮಠದಲ್ಲಿ ಅಮಿತ್​ ಶಾ 2 ಗಂಟೆ ಕಾಲ ಉಪಸ್ಥಿತಿ; ಮಠದಲ್ಲಿ ಪ್ರಸಾದ ಸೇವಿಸಿದ ಬಳಿಕ ಹೊರಡ್ತಾರೆ: ವಿಜಯೇಂದ್ರ

Sri Siddaganga Mutt in Kyatsandra Tumkur: ಶ್ರೀ ಶಿವಕುಮಾರ ಶ್ರೀಗಳ 115ನೇ ಜನ್ಮದಿನ ಉತ್ಸವದ ಹಿನ್ನೆಲೆ ಸಿದ್ದಗಂಗಾ ಮಠಕ್ಕೆ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ ನೀಡಿ ಸಿದ್ಧತೆ ಪರಿಶೀಲಿಸಿದರು. ಇದೊಂದು ಐತಿಹಾಸಿಕ ಕಾರ್ಯಕ್ರಮ ಅಂದ್ರೆ ತಪ್ಪಾಗಲಾರದು. ಕೇಂದ್ರ ಸಚಿವ ಅಮಿತ್​ ಶಾ (Union Cooperative Minister Amit Shah) ಕಾರ್ಯಕ್ರಮದಲ್ಲಿ 2 ಗಂಟೆಗಳ ಕಾಲ ಇರುತ್ತಾರೆ ಎಂದು ಮಾಹಿತಿ ನೀಡಿದರು.

ಸಿದ್ದಗಂಗಾ ಮಠದಲ್ಲಿ ಅಮಿತ್​ ಶಾ 2 ಗಂಟೆ ಕಾಲ ಉಪಸ್ಥಿತಿ; ಮಠದಲ್ಲಿ ಪ್ರಸಾದ ಸೇವಿಸಿದ ಬಳಿಕ ಹೊರಡ್ತಾರೆ: ವಿಜಯೇಂದ್ರ
ನಾಯಕರನ್ನು ಸ್ವಾಗತಿಸಿ ಹಾಕಲಾಗಿರುವ ಬ್ಯಾನರ್​ಗಳು
Follow us
TV9 Web
| Updated By: ಸಾಧು ಶ್ರೀನಾಥ್​

Updated on:Mar 30, 2022 | 4:57 PM

ಕ್ಯಾತ್ಸಂದ್ರ (ತುಮಕೂರು): ಶ್ರೀ ಶಿವಕುಮಾರ ಶ್ರೀಗಳ 115ನೇ ಜನ್ಮದಿನ ಉತ್ಸವದ ಹಿನ್ನೆಲೆ ಸಿದ್ದಗಂಗಾ ಮಠಕ್ಕೆ (Sri Siddaganga Mutt in Kyatsandra Tumkur) ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ ನೀಡಿ ಸಿದ್ಧತೆ ಪರಿಶೀಲಿಸಿದರು. ಇದೊಂದು ಐತಿಹಾಸಿಕ ಕಾರ್ಯಕ್ರಮ ಅಂದ್ರೆ ತಪ್ಪಾಗಲಾರದು. ಕೇಂದ್ರ ಸಚಿವ ಅಮಿತ್​ ಶಾ (Union Cooperative Minister Amit Shah) ಕಾರ್ಯಕ್ರಮದಲ್ಲಿ 2 ಗಂಟೆಗಳ ಕಾಲ ಇರುತ್ತಾರೆ. ಮಠದಲ್ಲಿ ಪ್ರಸಾದ ಸೇವಿಸಿದ ಬಳಿಕ ಅಮಿತ್ ಶಾ ಹೊರಡ್ತಾರೆ. ಸಿಎಂ ಬೊಮ್ಮಾಯಿ ಸೇರಿದಂತೆ ರಾಜ್ಯದ ಕೆಲ ಸಚಿವರುಗಳು ಜನ್ಮದಿನೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ನೂರಾರು ಸಂಖ್ಯೆಯಲ್ಲಿ ಎಲ್ಲಾ ಮಠಾಧೀಶರು ಭಾಗವಹಿಸುತ್ತಾರೆ. ಸುಮಾರು ಸುಮಾರು ಎರಡು ಲಕ್ಷ ಜನ ಸೇರುವ ನಿರೀಕ್ಷೆ ಇದೆ. ಕಾರ್ಯಕ್ರಮಕ್ಕೆ ಬರುವ ಎಲ್ಲರಿಗೂ ದಾಸೋಹದ ವ್ಯವಸ್ಥೆ ಮಾಡಲಾಗುವುದು. ಜನರಿಗೆ ವಾಹನಗಳ ಪಾರ್ಕಿಂಗ್ ವ್ಯವಸ್ಥೆಯನ್ನ ಮಾಡಲಾಗಿದೆ ಎಂದು ಅವರು ಹೇಳಿದರು (Amit Shah in Karnataka).

ಗುರುವಂದನಾ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಅಧ್ಯಕ್ಷತೆ ಶ್ರೀಗಳ ಜನ್ಮದಿನದಂದು ಬೆಳಿಗ್ಗೆ 10 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದೆ. ಸುತ್ತೂರು ದೇಶಿಕೇಂದ್ರ ಸ್ವಾಮೀಜಿಗಳು ದಿವ್ಯ ಸಾನಿಧ್ಯ ವಹಿಸಲಿದ್ದಾರೆ. ಶ್ರೀ ಮಠದ ಸಿದ್ದಗಂಗಾ ಶ್ರೀಗಳ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಲಿದೆ. ಗುರುವಂದನಾ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಪ್ರಹ್ಲಾದ್ ಜೋಶಿ, ಭಗವಂತ್ ಖೂಬ ಸೇರಿದಂತೆ ಹಲವು ಕೇಂದ್ರ ನಾಯಕರು ಆಗಮಿಸಲಿದ್ದಾರೆ. ಸಿಎಂ ಬೊಮ್ಮಾಯಿ ಸೇರಿದಂತೆ ರಾಜ್ಯದ ಹಲವು ಸಚಿವರುಗಳು ಆಗಮಿಸಲಿದ್ದಾರೆ. ಇನ್ನು ಮಾಧುಸ್ವಾಮಿ, ಬಿ.ಸಿ. ನಾಗೇಶ್, ಡಾ. ಜಿ. ಪರಮೇಶ್ವರ್ ಸೇರಿದಂತೆ ಎಲ್ಲಾ ಪಕ್ಷದ ನಾಯಕರು ಪಕ್ಷಾತೀತವಾಗಿ ಆಗಮಿಸಲಿದ್ದಾರೆ. ನೂರಾರು ಸಂಖ್ಯೆಯಲ್ಲಿ ಎಲ್ಲಾ ಮಠಾಧಿಶರು ಭಾಗವಹಿಸಲಿದ್ದಾರೆ ಎಂದು ಬಿ.ವೈ.ವಿಜಯೇಂದ್ರ ಹೇಳಿದರು.

ಅಮಿತ್ ಶಾ ಮೊದಲಿಗೆ ತುಮಕೂರು ಯೂನಿವರ್ಸಿಟಿ ಕ್ಯಾಂಪಸ್ ‌ಗೆ ಬರ್ತಾರೆ. ಮೊದಲಿಗೆ ಬೆಳಗ್ಗೆ 10.45 ಕ್ಕೆ ಯುನಿವರ್ಸಿಟಿ ಹೆಲಿಪ್ಯಾಡ್ ಗೆ ಬರಲಿದ್ದಾರೆ. ನಂತರ ಶ್ರೀ ಶಿವಕುಮಾರ್ ಶ್ರೀಗಳ ಗದ್ದುಗೆ ದರ್ಶನ ಮಾಡಲಿದ್ದಾರೆ. ಬಳಿಕ ನೇರವಾಗಿ 11 ಗಂಟೆಗೆ ವೇದಿಕೆ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ. ಎರಡು ಗಂಟೆಗಳ ಕಾಲ ಕಾರ್ಯಕ್ರಮದಲ್ಲಿ ಅಮಿತ್ ಶಾ ಇರಲಿದ್ದಾರೆ. ಮಠದಲ್ಲಿ ಪ್ರಸಾದ ಸೇವಿಸಿದ ನಂತರ ಅಮಿತ್ ಶಾ ಚಿಕ್ಕಬಳ್ಳಾಪುರ ಕಡೆ ಪ್ರಯಾಣ ಬೆಳಸಲಿದ್ದಾರೆ. ಅಮಿತ್ ಶಾ ರನ್ನು ಸಾವಿರಾರು ಸಂಖ್ಯೆಯಲ್ಲಿ ಪಕ್ಷದ ಕಾರ್ಯಕರ್ತರು ನಗರದಲ್ಲಿ ಬರಮಾಡಿಕೊಳ್ತಾರೆ ಎಂದು ತುಮಕೂರಿನ ಸಿದ್ದಗಂಗಾ ಮಠದಲ್ಲಿ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಮುದ್ದೇನಹಳ್ಳಿಗೆ ಕೇಂದ್ರ ಸಚಿವ ಅಮಿತ್ ಶಾ ಶುಕ್ರವಾರ ಭೇಟಿ, ಕಾರ್ಯಕ್ರಮ ಯಶಸ್ವಿಗೊಳಿಸಲು ಸಚಿವ ಡಾ. ಸುಧಾಕರ್ ಕರೆ ಚಿಕ್ಕಬಳ್ಳಾಪುರ: ಕೇಂದ್ರ ಸಹಕಾರ ಸಚಿವರೂ ಆಗಿರುವ ಗೃಹ ಸಚಿವ ಅಮಿತ್ ಶಾ ಅವರು ನಾಳಿದ್ದು ಶುಕ್ರವಾರ ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ಆ ವೇಳೆ ಆಡಳಿತಾರೂಢ ಬಿಜೆಪಿ ವತಿಯಿಂದ ಪಕ್ಷದ ಉನ್ನತ ಮಟ್ಟದ ಸಭೆಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಜೊತೆಗೆ ಮುಖ್ಯವಾಗಿ, ಏಪ್ರಿಲ್ 1ರಂದು ಡಾ. ಶಿವಕುಮಾರ ಶ್ರೀಗಳ ಜನ್ಮ ದಿನಾಚರಣೆ ಅಂಗವಾಗಿ ತುಮಕೂರಿನಲ್ಲಿ ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದಾರೆ. ಅದಾದ ಬಳಿಕ ಚಿಕ್ಕಬಳ್ಳಾಪುರ ಜಿಲ್ಲೆಗೆ ಭೇಟಿ ನೀಡಲಿರುವ ಅಮಿತ್ ಶಾ ಅವರು ಮುದ್ದೇನಹಳ್ಳಿ ಗ್ರಾಮದಲ್ಲಿರುವ ಶ್ರೀ ಸತ್ಯ ಸಾಯಿ ಆಶ್ರಮಕ್ಕೆ ಭೇಟಿ ನೀಡಿ, 400 ಬೆಡ್ ಗಳ ಸತ್ಯ ಸಾಯಿ ಸರಳಾ ಮೇಮೊರಿಯಲ್ ಆಸ್ಪತ್ರೆಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ

ಇದನ್ನೂ ಓದಿ: ಕೇಂದ್ರ ಸಚಿವ ಅಮಿತ್ ಶಾ ನಾಳೆ ಬೆಂಗಳೂರಿಗೆ ಆಗಮನ, ಅರಮನೆ ಮೈದಾನದಲ್ಲಿ ವೇದಿಕೆ ಸಿದ್ಧತೆ ಪರಿಶೀಲಿಸಿದ ಸಿಎಂ ಬೊಮ್ಮಾಯಿ

ಇದನ್ನೂ ಓದಿ: Amit Shah: ಮುದ್ದೇನಹಳ್ಳಿಗೆ ಕೇಂದ್ರ ಸಚಿವ ಅಮಿತ್ ಶಾ ಶುಕ್ರವಾರ ಭೇಟಿ, ಕಾರ್ಯಕ್ರಮ ಯಶಸ್ವಿಗೊಳಿಸಲು ಸಚಿವ ಡಾ. ಸುಧಾಕರ್ ಕರೆ

Published On - 4:40 pm, Wed, 30 March 22

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ