ತುಮಕೂರು: 7 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ; ಆರೋಪಿಯನ್ನ ಹಿಡಿದು ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು
ತುಮಕೂರಿನ ರೈಲ್ವೆ ಸ್ಟೇಷನ್, ಬಸ್ ನಿಲ್ದಾಣದಲ್ಲಿ ಭಿಕ್ಷೆ ಬೇಡಿಕೊಂಡು ಓಡಾಡುತ್ತಿದ್ದ ಏಳು ವರ್ಷದ ಅಪ್ರಾಪ್ತ ಬಾಲಕಿಯನ್ನ ಪುಸಲಾಯಿಸಿ. ತನ್ನ ಆಟೋದಲ್ಲಿಯೇ ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದ ಆರೋಪಿ. ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ.
ತುಮಕೂರು, ಅ.19: ಕೆಲವೊಂದು ಘಟನೆಗಳನ್ನು ನೋಡಿದಾಗ ಸಮಾಜ ಏತ್ತ ಸಾಗುತ್ತಿದೆ ಅನ್ನಿಸುತ್ತದೆ. ಹೌದು ಏಳು ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ತುಮಕೂರಿನ(Tumakur) ಕ್ಯಾತ್ಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೂಡಲೇ ಸಾರ್ವಜನಿಕರು ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಷಫಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿ. ಇನ್ನು ಆರೋಪಿ ಷಫಿ ತುಮಕೂರಿನ ಶಾಂತಿನಗರದ ಗೂಡ್ ಶೆಡ್ ಕಾಲೋನಿ ನಿವಾಸಿಯಾಗಿದ್ದು, ವೃತ್ತಿಯಲ್ಲಿ ಆಟೋ ಚಾಲಕನಾಗಿದ್ದಾನೆ. ಇತನ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಆಟೋದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ
ಇನ್ನು ತುಮಕೂರಿನ ರೈಲ್ವೆ ಸ್ಟೇಷನ್, ಬಸ್ ನಿಲ್ದಾಣದಲ್ಲಿ ಭಿಕ್ಷೆ ಬೇಡಿಕೊಂಡು ಓಡಾಡುತ್ತಿದ್ದ ಏಳು ವರ್ಷದ ಅಪ್ರಾಪ್ತ ಬಾಲಕಿಯನ್ನ ಪುಸಲಾಯಿಸಿ. ತನ್ನ ಆಟೋದಲ್ಲಿಯೇ ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದ ಆರೋಪಿ. ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ. ಈ ವೇಳೆ ಆರೋಪಿಯನ್ನು ರೇಡ್ ಹ್ಯಾಂಡ್ ಆಗಿ ಹಿಡಿದ ಸಾರ್ವಜನಿಕರು, ಅಪ್ರಾಪ್ತ ಬಾಲಕಿಯನ್ನು ರಕ್ಷಿಸಿ ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಸದ್ಯ ಆರೋಪಿ ಹಾಗೂ ಕೃತ್ಯಕ್ಕೆ ಬಳಸಿದ ಆಟೋವನ್ನ ವಶಕ್ಕೆ ಪಡೆದು ತನಿಖೆ ನಡೆಸಿದ್ದಾರೆ. ಇನ್ನು ಅಪ್ರಾಪ್ತ ಬಾಲಕಿಯನ್ನು ತುಮಕೂರಿನ ಬಾಲಮಂದಿರಕ್ಕೆ ಬಿಟ್ಟು ರಕ್ಷಣೆ ನೀಡಲಾಗಿದೆ.
ಇದನ್ನೂ ಓದಿ:ಚಿತ್ರದುರ್ಗ: 8 ತಿಂಗಳ ಮಗು ಮೇಲೆ ಅತ್ಯಾಚಾರವೆಸಗಿದ್ದ ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ
ಹಸುಗಳನ್ನು ಕದ್ದು ಪರಾರಿಯಾಗುತ್ತಿದ್ದವರನ್ನ ಬೆನ್ನಟ್ಟಿ ಹಿಡಿದ ಗ್ರಾಮಸ್ಥರು
ನೆಲಮಂಗಲ: ಬೆಂಗಳೂರು ಉತ್ತರ ತಾಲೂಕಿನ ಹೊಟ್ಟೆಪ್ಪನಪಾಳ್ಯದಲ್ಲಿ ಹಸುಗಳನ್ನು ಟಿಟಿ ವಾಹನದಲ್ಲಿ ಕದ್ದು ಪರಾರಿಯಾಗುತ್ತಿದ್ದವರನ್ನ ಗ್ರಾಮಸ್ಥರು ಬೆನ್ನಟ್ಟಿದ್ದಾಗ ಸ್ಥಳದಲ್ಲೇ ವಾಹನ ಬಿಟ್ಟು ನಾಲ್ವರು ದನಗಳ್ಳರು ಪರಾರಿಯಾದ ಘಟನೆ ನಡೆದಿದೆ. ಈ ಮೂಲಕ ರೈತ ಜಗದೀಶ್‌ಗೆ ಸೇರಿದ 2 ಹಸುಗಳನ್ನು ಸ್ಥಳೀಯರು ರಕ್ಷಿಸಿದ್ದಾರೆ. ನಕಲಿ ನಂಬರ್ ಪ್ಲೇಟ್ ಬಳಸಿ ಕೃತ್ಯವೆಸಗಲು ಯತ್ನಿಸಿದ್ದರು. ಇದೀಗ ಪೊಲೀಸರು ಬೈಕ್ ಹಾಗೂ ಟಿಟಿ ವಾಹನವನ್ನು ಜಪ್ತಿ ಮಾಡಿದ್ದಾರೆ. ಇನ್ನು ಹಸುಗಳನ್ನ ಕದ್ದು, ಟಿಟಿ ವಾಹನದಲ್ಲಿ ವಾಹನಕ್ಕೆ ತುಂಬುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ