ತುಮಕೂರಿನಲ್ಲಿ ಚಲಿಸುತ್ತಿದ್ದ ರೈಲಿಗೆ ಸಿಲುಕಿ ವೃದ್ಧೆ ಸಾವು

ಇತ್ತೀಚೆಗೆ ವೃದ್ದರು ರೈಲಿಗೆ ಸಿಲುಕಿ ಸಾವನ್ನಪ್ಪುವ ಘಟನೆಗಳು ಪದೇ ಪದೇ ಮರುಕಳಿಸುತ್ತಲೇ ಇವೆ. ಬಹುತೇಕ ಕೌಟುಂಬಿಕ ಕಲಹಗಳಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದು, ಮಕ್ಕಳಿಂದ ಬೇಸತ್ತು ಈ ರೀತಿಯ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ.

ತುಮಕೂರಿನಲ್ಲಿ ಚಲಿಸುತ್ತಿದ್ದ ರೈಲಿಗೆ ಸಿಲುಕಿ ವೃದ್ಧೆ ಸಾವು
ರೈಲಿಗೆ ಸಿಲುಕಿ ಅಪರಿಚಿತ ವೃದ್ಧೆ ಸಾವನ್ನಪ್ಪಿದ್ದಾಳೆ
Edited By:

Updated on: Aug 01, 2021 | 9:18 AM

ತುಮಕೂರು: ಚಲಿಸುತ್ತಿದ್ದ ರೈಲಿಗೆ ಸಿಲುಕಿ ವೃದ್ಧೆ ಸಾವನ್ನಪ್ಪಿದ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರು ಹಾಗೂ ಕ್ಯಾತ್ಸಂದ್ರ ಮಧ್ಯೆ ರೈಲ್ವೆ ಹಳಿ ಮೇಲೆ ಅಪರಿಚಿತ ವೃದ್ಧೆ ಸಿಲುಕಿ ಮೃತಳಾಗಿದ್ದಾಳೆ. ಸುಮಾರು 50 ವರ್ಷದ ವೃದ್ಧೆ ಮಹಿಳೆ ಎನ್ನಲಾಗಿದ್ದು, ಇನ್ನೂ ಗುರುತು ಪತ್ತೆಯಾಗಿಲ್ಲ. ಕೌಟುಂಬಿಕ ಕಲಹದಿಂದ ತಾನೇ ಆತ್ಮಹತ್ಯೆ ಮಾಡಿಕೊಂಡಿರಬಹುದು ಅಂತಾ ಊಹಿಸಲಾಗಿದೆ. ಸ್ಥಳಕ್ಕೆ ತುಮಕೂರು ರೈಲ್ವೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇತ್ತೀಚೆಗೆ ವೃದ್ದರು ರೈಲಿಗೆ ಸಿಲುಕಿ ಸಾವನ್ನಪ್ಪುವ ಘಟನೆಗಳು ಪದೇ ಪದೇ ಮರುಕಳಿಸುತ್ತಲೇ ಇವೆ. ಬಹುತೇಕ ಕೌಟುಂಬಿಕ ಕಲಹಗಳಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದು, ಮಕ್ಕಳಿಂದ ಬೇಸತ್ತು ಈ ರೀತಿಯ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಆದರೆ ರೈಲಿಗೆ ಸಿಕ್ಕಿ ಸಾವನ್ನಪ್ಪಿರುವ ಅಪರಿಚಿತ ವೃದ್ಧೆ ಕೌಟುಂಬಿಕ ಕಲಹದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೋ ಅಥವಾ ಆಕಸ್ಮಿಕವಾಗಿ ಮೃತರಾದರೋ ಅಂತಾ ಪೊಲೀಸರ ತನಿಖೆಯಿಂದ ತಿಳಿಯಬೇಕಿದೆ.

ಇದನ್ನೂ ಓದಿ

ದಾವಣಗೆರೆ: ಅಜ್ಜಿ ಹಬ್ಬದ ವಿಶೇಷತೆ ಏನು? ಮಳೆಗಾಲದಲ್ಲಿಯೇ ಈ ಹಬ್ಬ ಆಚರಿಸಲು ಅನೇಕ ಕಾರಣಗಳಿವೆ

ಗ್ಯಾಂಬ್ಲಿಂಗ್ ಆಡುತ್ತಿದ್ದ ಮಹಿಳೆಯರು, ಮುಂಗಾರು ಮಳೆ 2 ನಟಿ ನೇಹಾ ಶೆಟ್ಟಿ ತಂದೆ ಹಾಗೂ 42 ಮಂದಿ ವಿರುದ್ಧ ಸಿಸಿಬಿ ಚಾರ್ಜ್​ಶೀಟ್ ಸಲ್ಲಿಕೆ