AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆದರಿಸಲು ಹೋಗಿ ಅಂಗನವಾಡಿ ಸಹಾಯಕಿ ಎಡವಟ್ಟು, ಬಾಲಕನ ಗುಪ್ತಾಂಗಕ್ಕೆ ಬೆಂಕಿ ಗಾಯ

ಪದೇ ಪದೇ ಮೂತ್ರ ಮಾಡಿಕೊಳ್ಳುತ್ತಿದ್ದ ಬಾಲಕನನ್ನ ಹೆದರಿಸಲು ಹೋಗಿ ಅಂಗನವಾಡಿ ಶಿಕ್ಷಕಿ ಹಾಗೂ ಸಹಾಯಕಿ ಈ ರೀತಿ ಶಿಕ್ಷೆ ಕೊಟ್ಟಿದ್ದಾರೆ. ಇದರಿಂದ ಬಾಲಕನ ಗುಪ್ತಾಂಗ ಮತ್ತು ತೊಡೆ ಮೇಲೆ ಸುಟ್ಟ ಗಾಯಗಳಾಗಿವೆ.

ಬೆದರಿಸಲು ಹೋಗಿ ಅಂಗನವಾಡಿ ಸಹಾಯಕಿ ಎಡವಟ್ಟು, ಬಾಲಕನ ಗುಪ್ತಾಂಗಕ್ಕೆ ಬೆಂಕಿ ಗಾಯ
ಬೆದರಿಸಲು ಹೋಗಿ ಅಂಗನವಾಡಿ ಸಹಾಯಕಿ ಎಡವಟ್ಟು, ಬಾಲಕನ ಗುಪ್ತಾಂಗಕ್ಕೆ ಬೆಂಕಿ ಗಾಯ
TV9 Web
| Edited By: |

Updated on:Aug 30, 2022 | 7:29 PM

Share

ತುಮಕೂರು: ಮೂರು ವರ್ಷದ ಸಿದ್ದಾರ್ಥ ಎಂಬ ಬಾಲಕ ಚಡ್ಡಿಯಲ್ಲಿಯೇ ಪದೇ ಪದೇ ಮೂತ್ರ ಮಾಡಿಕೊಳ್ಳುತ್ತಿದ್ದ ಎಂಬ ಕಾರಣಕ್ಕೆ ಆತನ ಚಡ್ಡಿಗೆ ಬೆಂಕಿ ಹಚ್ಚಿರುವ ಘಟನೆ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿಯ ಗೋಡೆಕೆರೆ ಅಂಗನವಾಡಿಯಲ್ಲಿ ನಡೆದಿದೆ.

ಪದೇ ಪದೇ ಮೂತ್ರ ಮಾಡಿಕೊಳ್ಳುತ್ತಿದ್ದ ಬಾಲಕನನ್ನ ಹೆದರಿಸಲು ಹೋಗಿ ಅಂಗನವಾಡಿ ಶಿಕ್ಷಕಿ ಹಾಗೂ ಸಹಾಯಕಿ ಈ ರೀತಿ ಶಿಕ್ಷೆ ಕೊಟ್ಟಿದ್ದಾರೆ. ಇದರಿಂದ ಬಾಲಕನ ಗುಪ್ತಾಂಗ ಮತ್ತು ತೊಡೆ ಮೇಲೆ ಸುಟ್ಟ ಗಾಯಗಳಾಗಿವೆ. ಈ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಗ್ರಾಮಕ್ಕೆ ಜಿಲ್ಲಾ ಮಕ್ಕಳ ಹಕ್ಕು ರಕ್ಷಣಾ ಘಟಕದ ಅಧಿಕಾರಿಗಳು ಭೇಟಿ ನೀಡಿ, ಶಿಕ್ಷಕಿ, ಸಹಾಯಕಿ ಮತ್ತು ಬಾಲಕನ ಪೋಷಕರ ಬಳಿ ಹೇಳಿಕೆ ಪಡೆದುಕೊಂಡು ನೋಟಿಸ್ ನೀಡಿದ್ದಾರೆ. ಅಂಗನವಾಡಿ ಶಿಕ್ಷಕಿಯ ನಡೆಗೆ ಸಾರ್ವಜನಿಕರು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದ್ಯ ಮನೆಯಲ್ಲಿ ಬಾಲಕ ಇದ್ದು ಯಾವುದೇ ತೊಂದರೆ ಇಲ್ಲ ಎನ್ನಲಾಗಿದೆ. ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

tmk chaddi fire

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:09 pm, Tue, 30 August 22