PSI ಅಕ್ರಮ ಮಾಸುವ ಮುನ್ನವೇ ಮತ್ತೊಂದು ಪ್ರಕರಣ ಬೆಳಕಿಗೆ: ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆಯಲ್ಲಿ ಅಕ್ರಮ ಆರೋಪ

ಜವಾಹರ್ ಲಾಲ್ ನೆಹರು ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಆರೋಪ ಕೇಳಿ ಬಂದಿದೆ. ಏಪ್ರಿಲ್ 30ರಂದು ಪ್ರವೇಶ ಪರೀಕ್ಷೆ ನಡೆದಿತ್ತು.

PSI ಅಕ್ರಮ ಮಾಸುವ ಮುನ್ನವೇ ಮತ್ತೊಂದು ಪ್ರಕರಣ ಬೆಳಕಿಗೆ: ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆಯಲ್ಲಿ ಅಕ್ರಮ ಆರೋಪ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ಆಯೇಷಾ ಬಾನು

Updated on:May 06, 2022 | 10:03 AM

ತುಮಕೂರು: ಪಿಎಸ್ಐ ಪರೀಕ್ಷೆ ಅಕ್ರಮ ಮಾಸುವ ಮುನ್ನವೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಜವಾಹರ್ ಲಾಲ್ ನೆಹರು ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಆರೋಪ ಕೇಳಿ ಬಂದಿದೆ. ಏಪ್ರಿಲ್ 30ರಂದು ಪ್ರವೇಶ ಪರೀಕ್ಷೆ ನಡೆದಿತ್ತು. ಈ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿದ್ದು 6ನೇ ತರಗತಿ ವಿದ್ಯಾರ್ಥಿಗಳು ಹಾಗೂ ಪೋಷಕರು ಮರು ಪರೀಕ್ಷೆ ಮಾಡುವಂತೆ ಒತ್ತಾಯಿಸಿದ್ದಾರೆ.

ಪಿಎಸ್ಐ ಪರೀಕ್ಷೆ ಅಕ್ರಮ ಮಾಸುವ ಮುನ್ನವೇ ನವೋದಯ ಪರೀಕ್ಷೆಯಲ್ಲಿ ಗೋಲ್ ಮಾಲ್ ನಡೆದಿರುವ ಆರೋಪ ಕೇಳಿ ಬಂದಿದೆ.ತುಮಕೂರಿನ ನವೋದಯ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂದು ಸುಮಾರು 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ ಪೋಷಕರು ಆರೋಪಿಸಿದ್ದಾರೆ. ಜಿಲ್ಲಾದ್ಯಂತ ನಡೆದ ನವೋದಯ ಪರೀಕ್ಷೆಯಲ್ಲಿ ಕೊಠಡಿಗಳ ಮೇಲ್ವಿಚಾರಕರು ವಿದ್ಯಾರ್ಥಿಗಳ ಬಳಿ ಉತ್ತರವನ್ನು ನೋಡಿಕೊಂಡು ಇತರ ವಿದ್ಯಾರ್ಥಿಗಳಿಗೆ ಬರೆದುಕೊಟ್ಟಿದ್ದಾರೆಂದು ತುಮಕೂರು ಡಿಸಿ ವೈಎಸ್ ಪಾಟೀಲ್ ಗೆ ದೂರು ನೀಡಿದ್ದಾರೆ. ಜವಾಹರಲಾಲ್ ನೆಹರು ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಆರೋಪ ಕೇಳಿಬಂದಿದೆ.

ಕಳೆದ ಏಪ್ರಿಲ್ 30 ರಂದು ನಡೆದ ಪರೀಕ್ಷೆಯಲ್ಲಿ ಕೊಠಡಿಗಳ ಮೇಲ್ವಿಚಾರಕರು ತಮ್ಮ ಕೈಯಲ್ಲಿ ಉತ್ತರ ಬರೆದುಕೊಂಡು ಬಂದು ಆಯ್ದ ವಿದ್ಯಾರ್ಥಿಗಳಿಗೆ ಹೇಳಿಕೊಟ್ಟಿರುವ ಆರೋಪ ಕೇಳಿಬಂದಿದೆ. ಅಲ್ಲದೇ ಪರಿಕ್ಷಾ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಸರಿಯಾಗಿ ಪಾಲನೆ ಮಾಡಿಲ್ಲ ಎನ್ನಲಾಗಿದೆ. ವಿದ್ಯಾರ್ಥಿಗಳ ಹೆಸರು, ಸಹಿ, ರೂಲ್ ನಂ ಹಾಗೂ ಇತರೆ ವಿವರಗಳನ್ನು ಬರೆಯದಂತೆ ಒತ್ತಡ ಹಾಕಿದ್ದಾರೆ ಎನ್ನಲಾಗಿದೆ. ಇನ್ನೂ ಓಎಮ್​ಆರ್ ಶೀಟ್ ನ್ನ ಸಂಪೂರ್ಣವಾಗಿ ಕೊಠಡಿ ಮೇಲ್ವಿಚಾರಕರು ತುಂಬಿರುವುದಾಗಿ ವಿದ್ಯಾರ್ಥಿಗಳು ಹಾಗೂ ಪೋಷಕರು ಗಂಭೀರ ಆರೋಪ ಮಾಡಿದ್ದಾರೆ.ಇನ್ನೂ ಮರು ಪರೀಕ್ಷೆ ನಡೆಸಬೇಕೆಂದು ಡಿಸಿಗೆ ಮನವಿ ಮಾಡಿದ್ದಾರೆ. ಓದಿರುವ ವಿದ್ಯಾರ್ಥಿಗಳಿಗೂ ಹಾಗೂ ಓದದೆ ಇರುವ ವಿದ್ಯಾರ್ಥಿಗಳಿಗೂ ವ್ಯತ್ಯಾಸ ಇರಲ್ಲ ಹೀಗಾಗಿ ಮರು ಪರೀಕ್ಷೆ ನಡೆಸುವಂತೆ ಒತ್ತಾಯಿಸಿದ್ದಾರೆ.

ತುಮಕೂರಿನ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:05 am, Fri, 6 May 22

ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?