ತುಮಕೂರು: ಪಿಎಸ್ಐ ಪರೀಕ್ಷೆ ಅಕ್ರಮ ಮಾಸುವ ಮುನ್ನವೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಜವಾಹರ್ ಲಾಲ್ ನೆಹರು ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಆರೋಪ ಕೇಳಿ ಬಂದಿದೆ. ಏಪ್ರಿಲ್ 30ರಂದು ಪ್ರವೇಶ ಪರೀಕ್ಷೆ ನಡೆದಿತ್ತು. ಈ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿದ್ದು 6ನೇ ತರಗತಿ ವಿದ್ಯಾರ್ಥಿಗಳು ಹಾಗೂ ಪೋಷಕರು ಮರು ಪರೀಕ್ಷೆ ಮಾಡುವಂತೆ ಒತ್ತಾಯಿಸಿದ್ದಾರೆ.
ಪಿಎಸ್ಐ ಪರೀಕ್ಷೆ ಅಕ್ರಮ ಮಾಸುವ ಮುನ್ನವೇ ನವೋದಯ ಪರೀಕ್ಷೆಯಲ್ಲಿ ಗೋಲ್ ಮಾಲ್ ನಡೆದಿರುವ ಆರೋಪ ಕೇಳಿ ಬಂದಿದೆ.ತುಮಕೂರಿನ ನವೋದಯ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂದು ಸುಮಾರು 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ ಪೋಷಕರು ಆರೋಪಿಸಿದ್ದಾರೆ. ಜಿಲ್ಲಾದ್ಯಂತ ನಡೆದ ನವೋದಯ ಪರೀಕ್ಷೆಯಲ್ಲಿ ಕೊಠಡಿಗಳ ಮೇಲ್ವಿಚಾರಕರು ವಿದ್ಯಾರ್ಥಿಗಳ ಬಳಿ ಉತ್ತರವನ್ನು ನೋಡಿಕೊಂಡು ಇತರ ವಿದ್ಯಾರ್ಥಿಗಳಿಗೆ ಬರೆದುಕೊಟ್ಟಿದ್ದಾರೆಂದು ತುಮಕೂರು ಡಿಸಿ ವೈಎಸ್ ಪಾಟೀಲ್ ಗೆ ದೂರು ನೀಡಿದ್ದಾರೆ. ಜವಾಹರಲಾಲ್ ನೆಹರು ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಆರೋಪ ಕೇಳಿಬಂದಿದೆ.
ಕಳೆದ ಏಪ್ರಿಲ್ 30 ರಂದು ನಡೆದ ಪರೀಕ್ಷೆಯಲ್ಲಿ ಕೊಠಡಿಗಳ ಮೇಲ್ವಿಚಾರಕರು ತಮ್ಮ ಕೈಯಲ್ಲಿ ಉತ್ತರ ಬರೆದುಕೊಂಡು ಬಂದು ಆಯ್ದ ವಿದ್ಯಾರ್ಥಿಗಳಿಗೆ ಹೇಳಿಕೊಟ್ಟಿರುವ ಆರೋಪ ಕೇಳಿಬಂದಿದೆ. ಅಲ್ಲದೇ ಪರಿಕ್ಷಾ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಸರಿಯಾಗಿ ಪಾಲನೆ ಮಾಡಿಲ್ಲ ಎನ್ನಲಾಗಿದೆ. ವಿದ್ಯಾರ್ಥಿಗಳ ಹೆಸರು, ಸಹಿ, ರೂಲ್ ನಂ ಹಾಗೂ ಇತರೆ ವಿವರಗಳನ್ನು ಬರೆಯದಂತೆ ಒತ್ತಡ ಹಾಕಿದ್ದಾರೆ ಎನ್ನಲಾಗಿದೆ. ಇನ್ನೂ ಓಎಮ್ಆರ್ ಶೀಟ್ ನ್ನ ಸಂಪೂರ್ಣವಾಗಿ ಕೊಠಡಿ ಮೇಲ್ವಿಚಾರಕರು ತುಂಬಿರುವುದಾಗಿ ವಿದ್ಯಾರ್ಥಿಗಳು ಹಾಗೂ ಪೋಷಕರು ಗಂಭೀರ ಆರೋಪ ಮಾಡಿದ್ದಾರೆ.ಇನ್ನೂ ಮರು ಪರೀಕ್ಷೆ ನಡೆಸಬೇಕೆಂದು ಡಿಸಿಗೆ ಮನವಿ ಮಾಡಿದ್ದಾರೆ. ಓದಿರುವ ವಿದ್ಯಾರ್ಥಿಗಳಿಗೂ ಹಾಗೂ ಓದದೆ ಇರುವ ವಿದ್ಯಾರ್ಥಿಗಳಿಗೂ ವ್ಯತ್ಯಾಸ ಇರಲ್ಲ ಹೀಗಾಗಿ ಮರು ಪರೀಕ್ಷೆ ನಡೆಸುವಂತೆ ಒತ್ತಾಯಿಸಿದ್ದಾರೆ.
Published On - 9:05 am, Fri, 6 May 22