ಬುರ್ಕಾ ನಿಷೇಧಿಸಬೇಕು ಎಂದ ಮಾಜಿ ಸಚಿವ ಸೊಗಡು ಶಿವಣ್ಣ ವಿರುದ್ಧ ದೂರು ದಾಖಲು
ಧಾರ್ಮಿಕ ಭಾವನೆ ಹಾನಿ ಮಾಡುವ ಉದ್ದೇಶದಿಂದ ಮಾಜಿ ಸಚಿವ ಸೊಗಡು ಶಿವಣ್ಣ ಬುರ್ಕಾ ನಿಷೇಧದ ಹೇಳಿಕೆ ನೀಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ತುಮಕೂರು: ದೇಶದಲ್ಲಿ ಬುರ್ಕಾ ಧಾರಣೆಯನ್ನು ನಿಷೇಧಿಸಬೇಕು ಎಂಬ ಹೇಳಿಕೆಗೆ ಸಂಬಂಧಿಸಿದಂತೆ ಮಾಜಿ ಸಚಿವ ಸೊಗಡು ಶಿವಣ್ಣ ವಿರುದ್ಧ ಪ್ರಕರಣ ದಾಖಲಾಗಿದೆ. ಕಾಂಗ್ರೆಸ್ ಮುಖಂಡ ಬುರ್ಹಾನ್ ಎಂಬುವವರು ದೂರು ನೀಡಿದ್ದು, ಧಾರ್ಮಿಕ ಭಾವನೆ ಹಾನಿ ಮಾಡುವ ಉದ್ದೇಶದಿಂದ ಮಾಜಿ ಸಚಿವ ಸೊಗಡು ಶಿವಣ್ಣ ಬುರ್ಕಾ ನಿಷೇಧದ ಹೇಳಿಕೆ ನೀಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಹೇಳಿಕೆಗೆ ಸಂಬಂಧಿಸಿದಂತೆ ಮಾಜಿ ಸಚಿವ ಸೊಗಡು ಶಿವಣ್ಣ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ತುಮಕೂರು ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಳೆದ ಕೆಲ ದಿನಗಳ ಹಿಂದೆ ಸುದ್ದಿಗೋಷ್ಠಿಯೊಂದರಲ್ಲಿ ಮಾತನಾಡುತ್ತ, ಪಾಕಿಸ್ತಾನದಲ್ಲಿ ಇರುವವರೆಲ್ಲರೂ ತಾಲಿಬಾನಿಗಳು. ನಮ್ಮಲ್ಲೂ ತಾಲಿಬಾನಿಗಳಿದ್ದಾರೆ. ಬುರ್ಕಾ ಸಂಸ್ಕೃತಿಯನ್ನು ಬೆಂಬಲಿಸುವವರು ತಾಲಿಬಾನಿಗಳು ಎಂದು ಅವರು ಹೇಳಿಕೆ ನೀಡಿದ್ದರು. ಅಲ್ಲದೇ ಅಂತವರ ಜತೆಗೆ ಸಂಬಂಧ ಹೊಂದಿದ್ದರೆ ಆ ಸಂಬಂಧವನ್ನು ಕಡಿದುಕೊಳ್ಳಬೇಕು ಎಂದು ಅವರು ಹೇಳಿದ್ದರು.
ಅಲ್ಲದೇ, ಚಾಮರಾಜಪೇಟೆ ಶಾಸಕ ಜಮೀರ್ ಅಜ್ಮದ್ ಖಾನ್ ಅವರನ್ನು ತಾಲಿಬಾನಿಗಳಿಗೆ ಹೋಲಿಸಿದ್ದ ಮಾಜಿ ಸಚಿವ, ಡಿಜೆ ಹಳ್ಳಿ, ಕೆಜೆ ಹಳ್ಳಿ ಘಟನೆಯಲ್ಲಿ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಶಾಸಕ ಜಮೀರ್ ಅಹ್ಮದ್ ಖಾನ್ ಹೆಸರೂ ಇದೆ. ಅವರೂ ಒಂದು ರೀತಿಯಲ್ಲಿ ತಾಲಿಬಾನಿ ಎಂದು ಹೇಳಿದ್ದರು. ಇದು ವಿವಾದದ ಸ್ವರೂಪ ಪಡೆದುಕೊಂಡಿತ್ತು.
ಇದನ್ನೂ ಓದಿ:
Taliban: ಅಫ್ಘಾನಿಸ್ತಾನದಲ್ಲಿ ಬುರ್ಕಾ ಬೆಲೆ ಏರಿಕೆ; 500 ರಿಂದ 2,500 ಅಫ್ಘನೀಸ್ಗೆ ಹೆಚ್ಚಳ
ಮಹಿಳಾ ಹಕ್ಕುಗಳನ್ನು ಗೌರವಿಸುತ್ತೇವೆ ಎಂದು ಹೇಳುತ್ತಲೇ, ಬುರ್ಕಾ ಧರಿಸದ ಮಹಿಳೆಯ ಹತ್ಯೆ ಮಾಡಿದ ತಾಲಿಬಾನಿಗಳು
(Ban Burqa in India said by Former Minister Sogadu Shivanna case registered in Tumkur)