AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರಿಗೆ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಭಾಗ್ಯ ಇಲ್ವಾ?: ಸಚಿವ ಎಂ.ಬಿ. ಪಾಟೀಲ್ ಹೇಳಿದ್ದೇನು?

ರಾಜಧಾನಿ ಬೆಂಗಳೂರಿಗೆ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ತುಮಕೂರಿನಲ್ಲಿ ಸ್ಥಾಪಿಸುವ ಪ್ರಸ್ತಾವನೆ ಸದ್ಯಕ್ಕೆ ಸರ್ಕಾರದ ಮುಂದಿಲ್ಲ ಎಂದು ಸಚಿವ ಎಂ.ಬಿ. ಪಾಟೀಲ್ ಶಾಸನಸಭೆಯಲ್ಲಿ ಸ್ಪಷ್ಟಪಡಿಸಿದ್ದಾರೆ. ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣ ನೀತಿಯ ಪ್ರಕಾರ 150 ಕಿ.ಮೀ ವಾಯು ದೂರಿನ ನಿಯಮವು ಇದಕ್ಕೆ ಅಡ್ಡಿಯಾಗಲಿದೆ. ಪ್ರಸ್ತುತ ಯಾವುದೇ ಅನುದಾನ ಹಂಚಿಕೆಯ ಯೋಜನೆ ಇಲ್ಲ ಎಂದು ಸಚಿವರು ತಿಳಿಸಿದ್ದಾರೆ.

ತುಮಕೂರಿಗೆ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಭಾಗ್ಯ ಇಲ್ವಾ?: ಸಚಿವ ಎಂ.ಬಿ. ಪಾಟೀಲ್ ಹೇಳಿದ್ದೇನು?
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Aug 20, 2026 | 8:34 AM

Share

ಬೆಂಗಳೂರು, ಆ.20: ರಾಜಧಾನಿ ಬೆಂಗಳೂರಿಗೆ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಅಥವಾ ಪ್ರತ್ಯೇಕ ವಿಮಾನ ನಿಲ್ದಾಣವನ್ನು ತುಮಕೂರು ಜಿಲ್ಲೆಯಲ್ಲಿ ಸ್ಥಾಪಿಸುವ ಯಾವುದೇ ಪ್ರಸ್ತಾವನೆ ಸದ್ಯಕ್ಕೆ ಸರ್ಕಾರದ ಮುಂದಿಲ್ಲ ಎಂದು ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ್ ಶಾಸನಸಭೆಯಲ್ಲಿ ಸ್ಪಷ್ಟಪಡಿಸಿದ್ದಾರೆ. ವಿಧಾನಸಭೆಯಲ್ಲಿ ತುಮಕೂರು ನಗರ ಶಾಸಕ ಜಿ.ಬಿ. ಜ್ಯೋತಿ ಗಣೇಶ್ ಕೇಳಿದ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಸಚಿವರು ಉತ್ತರ ನೀಡಿದ್ದಾರೆ.

ಕೇಂದ್ರ ಸರ್ಕಾರದ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣ ನೀತಿಯ ಪ್ರಕಾರ, ಹಾಲಿ ಇರುವ ಸಿವಿಲ್ ವಿಮಾನ ನಿಲ್ದಾಣದಿಂದ 150 ಕಿ.ಮೀ ವಾಯು ದೂರಿನಲ್ಲಿ (Aerial Distance) ಇನ್ನೊಂದು ಹೊಸ ವಿಮಾನ ನಿಲ್ದಾಣಕ್ಕೆ ಸಾಮಾನ್ಯವಾಗಿ ಅನುಮತಿ ನೀಡಲಾಗುವುದಿಲ್ಲ.

ಒಂದು ವೇಳೆ ಈ ವ್ಯಾಪ್ತಿಯಲ್ಲಿ ವಿಮಾನ ನಿಲ್ದಾಣ ನಿರ್ಮಿಸಬೇಕಾದರೆ, ಹಾಲಿ ಇರುವ ವಿಮಾನ ನಿಲ್ದಾಣದ ಮೇಲಾಗುವ ಪ್ರಭಾವವನ್ನು ಆಧರಿಸಿ ಪ್ರತ್ಯೇಕವಾಗಿ ಪರಿಶೀಲಿಸಿ ಕೇಂದ್ರ ಸರ್ಕಾರ ಅಂತಿಮ ನಿರ್ಧಾರ ಕೈಗೊಳ್ಳಬೇಕಾಗುತ್ತದೆ. ಮುಂಬರುವ ಬಜೆಟ್‌ನಲ್ಲಿ ತುಮಕೂರು ವಿಮಾನ ನಿಲ್ದಾಣಕ್ಕೆ ಹಣ ಕಾಯ್ದಿರಿಸಲಾಗುತ್ತದೆಯೇ ಎಂಬ ಪ್ರಶ್ನೆಗೆ, ಅಂತಹ ಯಾವುದೇ ಯೋಜನೆ ಸರ್ಕಾರದ ಪರಿಶೀಲನೆಯಲ್ಲಿ ಇಲ್ಲದಿರುವುದರಿಂದ ಅನುದಾನ ಹಂಚಿಕೆಯ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಸಚಿವರು ತಿಳಿಸಿದ್ದಾರೆ.

ಇದನ್ನೂ ಓದಿ: ಶಕ್ತಿ ಯೋಜನೆ ಟಿಕೆಟ್ ಕಳ್ಳಾಟಕ್ಕೆ ಬೀಳಲಿದೆ ಬ್ರೇಕ್: ಪದೇಪದೇ ಫ್ರೀ ಟಿಕೆಟ್ ದುರ್ಬಳಕೆ ಮಾಡಿದ್ರೆ ಸಸ್ಪೆಂಡ್, ಡಿಸ್ಮಿಸ್ ಗ್ಯಾರಂಟಿ

ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ಕೇಂದ್ರ ಸಚಿವ ವಿ. ಸೋಮಣ್ಣ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ ಹಲವು ನಾಯಕರು ತುಮಕೂರಿನಲ್ಲೇ ಬೆಂಗಳೂರಿನ 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಬೇಕು ಎಂದು ಬಹಿರಂಗವಾಗಿ ಆಗ್ರಹಿಸಿದ್ದರು. ಆದರೆ ಸರ್ಕಾರ ಸದ್ಯಕ್ಕೆ ಅಂತಹ ಯಾವುದೇ ಯೋಜನೆ ಹೊಂದಿಲ್ಲ ಎಂದು ಸ್ಪಷ್ಟಪಡಿಸಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು