ತುಮಕೂರು: ವಾಹನ ತಪಾಸಣೆಯ ವೇಳೆ ಎಎಸ್ಐಗೆ ಬೈಕ್ ಡಿಕ್ಕಿ ಆದ ಘಟನೆ ತುಮಕೂರು ತಾಲೂಕಿನ ಚನ್ನೇನಹಳ್ಳಿ ಗೇಟ್ ಬಳಿ ಸಂಭವಿಸಿದೆ. ಬೆಳ್ಳಾವಿ ಠಾಣೆ ಎಎಸ್‌ಐ ನಂಜೇಗೌಡಗೆ ಗಂಭೀರ ಗಾಯವಾಗಿದೆ. ವೇಗವಾಗಿ ಬರುತ್ತಿದ್ದಾಗ ಪೊಲೀಸರು ವಾಹನ ತಡೆದ ಹಿನ್ನೆಲೆ ಗಾಬರಿಗೊಂಡು ಬೈಕ್ ನಿಯಂತ್ರಿಸಲಾಗದೆ ASIಗೆ ಬೈಕ್ ಡಿಕ್ಕಿ ಆಗಿದೆ ಎಂದು ಮಾಹಿತಿ ಲಭಿಸಿದೆ. ಬೈಕ್ ಸವಾರ ಹಾಗೂ ಎಎಸ್‌ಐ ನಂಜೇಗೌಡಗೆ ಗಾಯ ಆಗಿದೆ. ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಬೆಳ್ಳಾವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಬೆಂಗಳೂರು: ಇಲ್ಲಿನ ಮಾದನಾಯಕನಹಳ್ಳಿ ಬಳಿ ಜೀಪ್, ಬೈಕ್, ಕಾರು ನಡುವೆ ಸರಣಿ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ವೃದ್ಧೆಗೆ ಸಣ್ಣಪುಟ್ಟ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮದ್ಯದ ನಶೆಯಲ್ಲಿ ಜೀಪ್ ಚಾಲನೆ ಮಾಡಿದ ಆರೋಪ ಕೇಳಿಬಂದಿದೆ. ಅಪಘಾತದ ಬಳಿಕ ಸ್ಥಳದಲ್ಲೇ ಜೀಪ್ ಬಿಟ್ಟು ಚಾಲಕ ಪರಾರಿ ಆಗಿದ್ದಾನೆ.
ವಿಜಯನಗರ: ಇಲ್ಲಿನ ಹೂವಿನಹಡಗಲಿ ತಾಲೂಕಿನ ನವಲಿ ಗ್ರಾಮದಲ್ಲಿ ಮಕ್ಕಳ ಮೇಲೆ ಮಂಗಗಳ ದಾಳಿ ನಡೆದ ಘಟನೆ ನಡೆದಿದೆ. 6 ತಿಂಗಳ ಮಗು ಹಾಗೂ ಒಂದು ವರ್ಷದ ಮಗುವಿನ ಮೇಲೆ ದಾಳಿ ಮಾಡಲಾಗಿದೆ. ಮಂಗಗಳನ್ನು ಸ್ಥಳಾಂತರ ಮಾಡುವಂತೆ ಗ್ರಾಮಸ್ಥರಿಂದ ಒತ್ತಾಯ ಕೇಳಿಬಂದಿದೆ.
ರಾಯಚೂರು: ದೇವದುರ್ಗ ತಾಲೂಕಿನ ಚಿಂಚೋಡಿ ಕ್ರಾಸ್ ಬಳಿ 2 ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಆಗಿದೆ. ಘಟನೆಯಲ್ಲಿ ಮೂವರಿಗೆ ಗಂಭೀರ ಗಾಯವಾಗಿದೆ. ರಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ತುಮಕೂರು: ಇತ್ತ ಜಿಲ್ಲೆಯ ಪಳವಳ್ಳಿ ಬಳಿ ಬಸ್ ದುರಂತ ಪ್ರಕರಣಕ್ಕೆ ಸಂಬಂಧಿಸಿ ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಡಾ.ಕೆ. ಸುಧಾಕರ್ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ. ಆರೋಗ್ಯ ವಿಚಾರಣೆ ಬಳಿಕ ಸಚಿವ ಸುಧಾಕರ್ ಪ್ರತಿಕ್ರಿಯೆ ನೀಡಿದ್ದಾರೆ. ಮೂವರು ಗಾಯಾಳುಗಳಿಗೆ ವಿಕ್ಟೋರಿಯಾದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಒಬ್ಬರನ್ನು ನಿಮ್ಹಾನ್ಸ್‌ಗೆ ದಾಖಲಿಸಲಾಗಿತ್ತು. ಇದೀಗ ಅವರನ್ನು ತುಮಕೂರು ಜಿಲ್ಲಾಸ್ಪತ್ರೆಗೆ ಸೇರಿದ್ದೇವೆ. ಇನ್ನಿಬ್ಬರಿಗೆ ಸಂಜಯ್ ಗಾಂಧಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಒಬ್ಬರಿಗೆ ಸ್ಪೈನಲ್ ಕಾರ್ಡ್ ತೊಂದರೆಯಾಗಿದೆ ಎಂದು ಹೇಳಿದ್ದಾರೆ.
ಅವರಿಗೆ ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ಮುಂದುವರಿಯುತ್ತಿದೆ. ಅವರಿಗೆ ಹೆಚ್ಚಿನ ಚಿಕಿತ್ಸೆ ನೀಡಲು ಕ್ರಮ ವಹಿಸಲಾಗಿದೆ. ತುಮಕೂರು ಜಿಲ್ಲಾಸ್ಪತ್ರೆಯಲ್ಲಿ 18 ಜನರಿಗೆ ಚಿಕಿತ್ಸೆ ಕೊಡಲಾಗುತ್ತಿದೆ. ಬಸ್‌ನಲ್ಲಿ 100ಕ್ಕೂ ಹೆಚ್ಚು ಜನ ಪ್ರಯಾಣಿಸ್ತಿದ್ದ ಮಾಹಿತಿ ಇದೆ. ಸಾರಿಗೆ ಇಲಾಖೆ, ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ತುಮಕೂರಿನಲ್ಲಿ ಆರೋಗ್ಯ ಸಚಿವ ಕೆ. ಸುಧಾಕರ್ ಹೇಳಿದ್ದಾರೆ.
ಹಾಸನ: ಕಾಡಾನೆ ದಾಳಿಯಿಂದ ರೈತ ಕೂದಲೆಳೆ ಅಂತರದಲ್ಲಿ ಪಾರಾದ ಘಟನೆ ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ಬ್ಯಾದನೆ ಗ್ರಾಮದಲ್ಲಿ ನಡೆದಿದೆ. ಕಾಫಿ ತೋಟದಲ್ಲಿ ಕೆಲಸ ಮಾಡುವಾಗ ರೈತ ಕೃಷ್ಣೇಗೌಡ ಎಂಬವರನ್ನು ಕಾಡಾನೆಯೊಂದು ಅಟ್ಟಾಡಿಸಿದೆ. ಸ್ಥಳದಿಂದ ಓಡಿ ರೈತ ಪ್ರಾಣ ಉಳಿಸಿಕೊಂಡಿದ್ದಾರೆ. ವಾರದ ಹಿಂದೆ ಈ ಭಾಗದಲ್ಲಿ ಕಾಡಾನೆ ದಾಳಿಗೆ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದರು. ನಿನ್ನೆ ಕೂಡ ಕಾಫಿತೋಟದಲ್ಲಿ ಒಂಟಿ ಸಲಗದ ಸಂಚಾರ ಇತ್ತು. ಒಟ್ಟಾರೆ ರಐತರು ಜೀವ ಭಯದಲ್ಲಿ ದಿನ ಕಳೆಯುವಂತಾಗಿದೆ. ಕಾಡಾನೆ ದಾಳಿಯಿಂದ ಅಪಾರ ಪ್ರಮಾಣದ ಬೆಳೆ, ಕೃಷಿ ಪರಿಕರ ಹಾನಿ ಆಗಿದೆ. ಸೂಕ್ತ ಪರಿಹಾರದ ಜೊತೆಗೆ ಕಾಡಾನೆಗಳ ಸ್ಥಳಾಂತರಕ್ಕೆ ರೈತರ ಆಗ್ರಹ ಕೇಳಿಬಂದಿದೆ.
ಇದನ್ನೂ ಓದಿ: Bus Accident: ಪಾವಗಡದ ಭೀಕರ ಬಸ್ ಅಪಘಾತಕ್ಕೆ ನಾಲ್ಕು ಮುಖ್ಯ ಕಾರಣಗಳು; ಏನದು?
ಇದನ್ನೂ ಓದಿ: Pavagada Bus Accident: ಟಾಪ್ನಲ್ಲಿ ಜನರನ್ನು ಕೂರಿಸಿಕೊಂಡು ಬಂದ ಬಸ್; ಅಪಘಾತಕ್ಕೂ ಮೊದಲ ವಿಡಿಯೋ ಇಲ್ಲಿದೆ
Published On - 8:39 am, Mon, 21 March 22