ಬೈಕ್ಗೆ ಅಪರಿಚಿತ ವಾಹನ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು
ಬೈಕ್ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ತುಮಕೂರು ನಗರದ ಶ್ರೀರಾಜ್ ಟಾಕೀಸ್ ರಾಷ್ಟ್ರೀಯ ಹೆದ್ದಾರಿ 48 ಬಳಿ ನಡೆದಿದೆ. ವಿಜಯಕುಮಾರ್ 22 ಮೃತ ದುರ್ದೈವಿ.
ತುಮಕೂರು: ಬೈಕ್ಗೆ ಅಪರಿಚಿತ ವಾಹನ ಡಿಕ್ಕಿಯಾಗಿ (accident) ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ತುಮಕೂರು ನಗರದ ಶ್ರೀರಾಜ್ ಟಾಕೀಸ್ ರಾಷ್ಟ್ರೀಯ ಹೆದ್ದಾರಿ 48 ಬಳಿ ನಡೆದಿದೆ. ವಿಜಯಕುಮಾರ್ 22 ಮೃತ ದುರ್ದೈವಿ. ತುಮಕೂರಿನಿಂದ ಬೆಂಗಳೂರು ಕಡೆಗೆ ಬೈಕ್ನಲ್ಲಿ ತೆರಳುತ್ತಿದ್ದಾಗ ಅಪರಿಚಿತ ವಾಹನ ಬೈಕ್ಗೆ ಡಿಕ್ಕಿಯಾಗಿ ಘಟನೆ ಸಂಭವಿಸಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಸ್ಥಳಕ್ಕೆ ತುಮಕೂರು ನಗರ ಸಂಚಾರಿ ಪೊಲೀಸರು ಭೇಟಿ, ಪರಿಶೀಲನೆ ಮಾಡಿದ್ದು, ನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಮತ್ತೊಂದು ಪ್ರಕರಣದಲ್ಲಿ ಅನುಮಾನಸ್ಪದವಾಗಿ ಮಹಿಳೆಯ ಶವ ಪತ್ತೆಯಾಗಿರುವಂತಹ ಘಟನೆ ಜಿಲ್ಲೆಯ ಮಧುಗಿರಿ ತಾಲೂಕಿನ ಸಿದ್ದಾಪುರದಲ್ಲಿ ನಡೆದಿದೆ. ಬೇರೆ ಕಡೆ ಕೊಲೆ ಮಾಡಿ ಚೀಲದಲ್ಲಿ ಕಟ್ಟಿ ಕೆರೆಗೆ ಬಿಸಾಡಿರುವ ಶಂಕೆ ವ್ಯಕ್ತವಾಗಿದ್ದು, ಮೃತಳ ಗುರುತು ಪತ್ತೆಯಾಗಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲನೆ ಮಾಡಿದ್ದು, ಮಧುಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.
ನೇಣು ಬಿಗಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ
ಯಾದಗಿರಿ: ನೇಣು ಬಿಗಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಜಿಲ್ಲೆಯ ಸುರಪುರ ನಗರದ ಸರ್ಕಾರಿ ವಸತಿ ನಿಲಯದ ಬಳಿ ನಡೆದಿದೆ. ಶಹಾಪುರ ತಾಲೂಕಿನ ಶೆಟ್ಟಿಗೇರ ಗ್ರಾಮದ ನಿವಾಸಿ ಭೀಮಾಶಂಕರ (20) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಸುರಪುರದ ಸರ್ಕಾರಿ ಡಿಗ್ರಿ ಕಾಲೇಜಿನಲ್ಲಿ ವಿದ್ಯಾರ್ಥಿ ಬಿಎ ಓದುತ್ತಿದ್ದು, ಸರ್ಕಾರಿ ಮೆಟ್ರಿಕ್ ನಂತರದ SC,ST ಹಾಸ್ಟೆಲ್ನಲ್ಲಿ ವಾಸವಿದ್ದ. ಸದ್ಯ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಸುರಪುರ ಠಾಣೆಯ ಪೊಲೀಸರು ಭೇಟಿ ನೀಡಿ, ಕೇಸ್ ದಾಖಲು ಮಾಡಿದ್ದಾರೆ.
ಆಸ್ತಿ ವಿಚಾರವಾಗಿ ಸೊಸೆಯಿಂದ ಅತ್ತೆಯ ಕೊಲೆ
ಬೆಂಗಳೂರು: ಆಸ್ತಿ ವಿಚಾರವಾಗಿ ಸೊಸೆಯಿಂದ ಅತ್ತೆಯ ಕೊಲೆ ಮಾಡಿರುವಂತಹ ಘಟನೆ ಇದೇ ತಿಂಗಳ 12 ರ ರಾತ್ರಿ ಶ್ರೀರಾಂಪು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ರಾಣಿ (76) ಕೊಲೆಯಾದ ದುರ್ದೈವಿ ಅತ್ತೆ. ಸುಗುಣ ಅತ್ತೆಯನ್ನು ಕೊಲೆಗೈದ ಸೊಸೆ. ಆರೋಪಿ ಸುಗುಣಳನ್ನು ಶ್ರೀರಾಂಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಇರುವ ಆಸ್ತಿ ಎಲ್ಲವನ್ನು ಮೂವರು ಗಂಡು ಮಕ್ಕಳಿಗೆ ಅತ್ತೆ ರಾಣಿ ಹಂಚಿದ್ದಾಳೆ. ಒಂದು ಮನೆಯಲ್ಲಿ ತಾನೊಬ್ಬಳೆ ಇದ್ದಳು. ಆ ಮನೆಯನ್ನು ಕೊಡುವಂತೆ ಸುಗುಣ ಪೀಡಿಸಿದ್ದಾಳೆ. ಕೊಡಲು ನಿರಾಕರಿಸಿದಾಗ ಹಲ್ಲೆಗೆ ಮುಂದಾಗಿದ್ದಾಳೆ. ಮೊನ್ನೆ ಹಲ್ಲೆ ನಡೆಸುವಾಗ ಕತ್ತು ಮುರಿದು ಸಾವನ್ನಪ್ಪಿದ್ದಾಳೆ. ಘಟನೆ ಸಂಬಂಧ ಶ್ರೀರಾಂಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 5:04 pm, Fri, 14 October 22