AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರಿನಲ್ಲಿ ಹಕ್ಕಿ ಜ್ವರದ ಭೀತಿ: ನವಿಲುಗಳ ಸಾವಿನ ಬೆನ್ನಲ್ಲೇ ಈಗ 30 ಕೋಳಿಗಳ ಸಾವು! ಜಿಲ್ಲೆಯಲ್ಲಿ ಹೈ ಅಲರ್ಟ್​

ತುಮಕೂರು ಜಿಲ್ಲೆಯಲ್ಲಿ ಹಕ್ಕಿಜ್ವರದ ಭೀತಿ ಹೆಚ್ಚಾಗಿದ್ದು, 44 ನವಿಲುಗಳ ಬೆನ್ನಲ್ಲೇ ಈಗ 30 ಕೋಳಿಗಳ ಸರಣಿ ಸಾವು ವರದಿಯಾಗಿದೆ. ಮೃತ ಕೋಳಿಗಳ ಸ್ಯಾಂಪಲ್​ ಅನ್ನು ಪರೀಕ್ಷೆಗಾಗಿ ಕಳುಹಿಸಲಾಗಿದೆ. ಜಿಲ್ಲಾಧಿಕಾರಿಗಳು ಕಲ್ಲಳ್ಳಿ ಸೇರಿದಂತೆ 5 ಗ್ರಾಮಗಳನ್ನು ಕಂಟೋನ್ಮೆಂಟ್ ಜೋನ್ ಎಂದು ಘೋಷಿಸಿ, ಚಿಕನ್ ಅಂಗಡಿಗಳನ್ನು ಮುಚ್ಚಲು ಆದೇಶಿಸಿದ್ದಾರೆ. ಸಾರ್ವಜನಿಕರು ಜಾಗೃತರಾಗಿರಲು ಸೂಚಿಸಲಾಗಿದೆ.

ತುಮಕೂರಿನಲ್ಲಿ ಹಕ್ಕಿ ಜ್ವರದ ಭೀತಿ: ನವಿಲುಗಳ ಸಾವಿನ ಬೆನ್ನಲ್ಲೇ ಈಗ 30 ಕೋಳಿಗಳ ಸಾವು! ಜಿಲ್ಲೆಯಲ್ಲಿ ಹೈ ಅಲರ್ಟ್​
30 ಕೋಳಿಗಳ ಸಾವು
ಜಗದೀಶ ಬಿ.
| Edited By: |

Updated on: May 02, 2026 | 8:30 AM

Share

ತುಮಕೂರು, ಮೇ 02: ತುಮಕೂರು ಜಿಲ್ಲೆಯಲ್ಲಿ ಹಕ್ಕಿಜ್ವರದ (H5N1) ಭೀತಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕಳೆದ ಕೆಲವು ದಿನಗಳಿಂದ ನವಿಲುಗಳ ಸರಣಿ ಸಾವುಗಳು ವರದಿಯಾಗಿದ್ದವು. ಇದೀಗ ಅದೇ ವ್ಯಾಪ್ತಿಯಲ್ಲಿ ಕೋಳಿಗಳ ಸಾವೂ ಸಂಭವಿಸಿರುವುದು ಆತಂಕಕ್ಕೆ ಕಾರಣವಾಗಿದೆ. ಸಾವನ್ನಪ್ಪಿದ ಕೋಳಿಗಳ ಮಾದರಿಗಳನ್ನು ಪರೀಕ್ಷೆಗಾಗಿ ಎಫ್‌ಎಸ್‌ಎಲ್‌ಗೆ ಕಳುಹಿಸಲಾಗಿದ್ದು, ಸಾವಿನ ನಿಖರ ಕಾರಣವನ್ನು ಪತ್ತೆಹಚ್ಚಲು ಪರಿಶೀಲನೆ ನಡೆಯುತ್ತಿದೆ. ಹಕ್ಕಿ ಜ್ವರವೇ 44 ನವಿಲುಗಳ ಸಾವಿಗೆ ಕಾರಣ ಎಂದು ಈಗಾಗಲೇ ದೃಢಪಟ್ಟಿದ್ದು, ಈಗ ಕೋಳಿಗಳ ಸಾವಿಗೂ ಅದೇ ಕಾರಣವಿರಬಹುದೆಂಬ ಶಂಕೆ ವ್ಯಕ್ತವಾಗಿದೆ.

ಹಕ್ಕಿ ಜ್ವರವೇ ಇರಬಹುದಾ ಎಂಬ ಶಂಕೆ

ಕಳೆದ ಏಪ್ರಿಲ್ 16ರಿಂದ ತುಮಕೂರು ತಾಲೂಕಿನಾದ್ಯಂತ ನವಿಲುಗಳ ಸರಣಿ ಸಾವು ಆರಂಭವಾಗಿತ್ತು. ಕೇವಲ 11 ದಿನಗಳಲ್ಲಿ ಬರೋಬ್ಬರಿ 44 ನವಿಲುಗಳು ಮೃತಪಟ್ಟಿದ್ದವು. ಆರಂಭದಲ್ಲಿ ಜಿಲ್ಲೆಯಲ್ಲಿ ತಾಪಮಾನ ಏರುತ್ತಿದ್ದ ಕಾರಣ, ಅತಿಯಾದ ಶಾಖ ಮತ್ತು ನಿರ್ಜಲೀಕರಣದಿಂದ ಈ ಸಾವುಗಳು ಸಂಭವಿಸಿರಬಹುದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಶಂಕಿಸಿದ್ದರು. ಆದರೆ ನಂತರ ಬಂದ FSL ವರದಿಯಲ್ಲಿ ಹಕ್ಕಿ ಜ್ವರದ ಸೋಂಕಿನಿಂದಲೇ ನವಿಲುಗಳು ಸಾವನ್ನಪ್ಪಿವೆ ಎಂದು ದೃಢಪಟ್ಟಿದೆ. ಇದೀಗ ಜಿಲ್ಲೆಯ ಬೊಮ್ಮನಹಳ್ಳಿ ಗ್ರಾಮದ ಕೋಳಿ ಫಾರಂನಲ್ಲಿ ಏಕಾಕಾಲದಲ್ಲಿ ಸುಮಾರು 30 ಕೋಳಿಗಳು ಸಾವನ್ನಪ್ಪಿದ್ದು, ಈ ಘಟನೆ ಹಕ್ಕಿಜ್ವರದ ಅನುಮಾನಕ್ಕೆ ಕಾರಣವಾಗಿದೆ. ಪಶು ಸಂಗೋಪನಾ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ಹೈ ಅಲರ್ಟ್‌ ಘೋಷಿಸಿದ್ದಾರೆ.

ಕಂಟೋನ್ಮೆಂಟ್ ಜೋನ್ ಘೋಷಣೆ

ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದು, ಕಲ್ಲಳ್ಳಿ, ಕೋಡಿಹಳ್ಳಿ, ಹುಣ್ಣೆನಹಳ್ಳಿ, ಬೊಮ್ಮನಹಳ್ಳಿ ಮತ್ತು ಬೈರಸಂದ್ರ ಪ್ರದೇಶದ ಜನರು ಹೆಚ್ಚು ಜಾಗ್ರತೆ ವಹಿಸುವಂತೆ ಸೂಚಿಸಿದ್ದಾರೆ. ಯಾವುದೇ ಕೋಳಿಯ ಸಾವು ಕಂಡುಬಂದಲ್ಲಿ ತಕ್ಷಣ ಅಧಿಕಾರಿಗಳಿಗೆ ಮಾಹಿತಿ ನೀಡುವಂತೆ ತಿಳಿಸಿದ್ದಾರೆ. ಜನರು ಅನಗತ್ಯ ಆತಂಕಪಡಬೇಕಾಗಿಲ್ಲ, ಆದರೆ ಮುಂಜಾಗ್ರತಾ ಕ್ರಮಗಳನ್ನು ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಹಕ್ಕಿಜ್ವರ ಸಂಬಂಧಿತ ಮಾಹಿತಿ ನೀಡಲು ಸಹಾಯವಾಣಿ ಕೂಡ ತೆರೆಯಲಾಗಿದೆ.

ಇದನ್ನೂ ಓದಿ ತುಮಕೂರಿನಲ್ಲಿ ಹಕ್ಕಿ ಜ್ವರದ ಆತಂಕ: ನವಿಲುಗಳ ಸಾವಿಗೆ ‘H5N1’ ಸೋಂಕು ಕಾರಣ!

ಇನ್ನೊಂದೆಡೆ, ರಾಜ್ಯದ ತಜ್ಞರ ತಂಡ ಜಿಲ್ಲೆಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದೆ. ತುಮಕೂರು ಡಿಸಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಹಲವು ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಚರ್ಚೆ ನಡೆದಿದೆ. ಆ ಕ್ರಮಗಳ ಭಾಗವಾಗಿ ಕಲ್ಲಳ್ಳಿ ಸೇರಿ ಆ 5 ಗ್ರಾಮಗಳನ್ನು ಕಂಟೋನ್ಮೆಂಟ್ ಜೋನ್ ಆಗಿ ಘೋಷಿಸಲಾಗಿದೆ. ಈ ಪ್ರದೇಶಗಳಲ್ಲಿ ಚಿಕನ್ ಅಂಗಡಿಗಳನ್ನು ತಾತ್ಕಾಲಿಕವಾಗಿ ಮುಚ್ಚುವಂತೆ ಸೂಚನೆ ನೀಡಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಜಗದೀಶ ಬಿ.
ಜಗದೀಶ ಬಿ.

ಜಗದೀಶ್​ ಬಸವರಾಜು ಟಿವಿ9 ಕನ್ನಡದ ಜಿಲ್ಲಾ ವರದಿಗಾರರಾಗಿದ್ದಾರೆ. ಪ್ರಸ್ತುತ ಅವರು ತುಮಕುರು ಜಿಲ್ಲಾ ಸುದ್ದಿಗಳ ವರದಿ ಮಾಡುತ್ತಿದ್ದಾರೆ. ಹುಟ್ಟಿದ್ದು, ಬೆಳೆದಿದ್ದು ಬೆಂಗಳೂರಿನಲ್ಲಿ. ಪತ್ರಿಕೋದ್ಯಮ ಓದಿದ್ದು, ವೃತ್ತಿ ಬದುಕು ಆರಂಭಿಸಿದ್ದು ಕೂಡಾ ಬೆಂಗಳೂರಿನಲ್ಲಿ. ಟಿವಿ9ನಲ್ಲಿ ಎಂಟು ವರ್ಷ ಸಹಿತ ಹತ್ತು ವರ್ಷದ ಕ್ರೈಂ ವರದಿಗಾರಿಕೆಯ ಅನುಭವದ ಜೊತೆ ಸದ್ಯ ೨೦೨೫ರಿಂದ ತುಮಕೂರು ಜಿಲ್ಲಾವರದಿಗಾರನಾಗಿ ಮಾದ್ಯಮದ ವೃತ್ತಿ ಬದುಕು ಮುಂದುವರೆದಿದೆ.

Read More
ಪತ್ನಿ ಉಷಾ, ಕುಟುಂಬಸ್ಥರ ಜೊತೆಗೆ ಆಯುಧ ಪೂಜೆ ಮಾಡಿದ ಸಿಎಂ ಡಿಕೆ ಶಿವಕುಮಾರ್
ಪತ್ನಿ ಉಷಾ, ಕುಟುಂಬಸ್ಥರ ಜೊತೆಗೆ ಆಯುಧ ಪೂಜೆ ಮಾಡಿದ ಸಿಎಂ ಡಿಕೆ ಶಿವಕುಮಾರ್
ಮೈಸೂರು ದಸರಾ: ಪೂಜೆ ನಡುವೆ ಮೊಮ್ಮಗನ ಜೊತೆ ಆಟವಾಡಿದ ರಾಜಮಾತೆ ಪ್ರಮೋದಾ ದೇವಿ
ಮೈಸೂರು ದಸರಾ: ಪೂಜೆ ನಡುವೆ ಮೊಮ್ಮಗನ ಜೊತೆ ಆಟವಾಡಿದ ರಾಜಮಾತೆ ಪ್ರಮೋದಾ ದೇವಿ
‘ನಂಬಿ ಕೆಟ್ಟವರು’: ಗಾನವಿಯ ನಂಬಿ ಕುರಿಯಾದ ಆಸಿಯಾ
‘ನಂಬಿ ಕೆಟ್ಟವರು’: ಗಾನವಿಯ ನಂಬಿ ಕುರಿಯಾದ ಆಸಿಯಾ
ತುಮಕೂರು ದಸರಾ: ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಡಿಸಿಎಂ ಪರಮೇಶ್ವರ್
ತುಮಕೂರು ದಸರಾ: ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಡಿಸಿಎಂ ಪರಮೇಶ್ವರ್
ದಸರಾ ಆನೆಗಳ ಗುಣ, ಸ್ವಭಾವದ ಬಗ್ಗೆ ಸಿಬ್ಬಂದಿ ಹೇಳಿದ ಮಾತುಗಳನ್ನು ಕೇಳಿ!
ದಸರಾ ಆನೆಗಳ ಗುಣ, ಸ್ವಭಾವದ ಬಗ್ಗೆ ಸಿಬ್ಬಂದಿ ಹೇಳಿದ ಮಾತುಗಳನ್ನು ಕೇಳಿ!
ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಲ್ಲಿ ಕರಾವಳಿ ಉದ್ಯಮಿಗಳಿಗೆ ಬೆದರಿಕೆ ಕರೆ!
ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಲ್ಲಿ ಕರಾವಳಿ ಉದ್ಯಮಿಗಳಿಗೆ ಬೆದರಿಕೆ ಕರೆ!
ಮೈಸೂರು ದಸರಾ: ಅರಮನೆಯಲ್ಲಿ ಯದುವೀರ್ ನೇತೃತ್ವದಲ್ಲಿ ಅದ್ದೂರಿ ಆಯುಧ ಪೂಜೆ
ಮೈಸೂರು ದಸರಾ: ಅರಮನೆಯಲ್ಲಿ ಯದುವೀರ್ ನೇತೃತ್ವದಲ್ಲಿ ಅದ್ದೂರಿ ಆಯುಧ ಪೂಜೆ
ರಾಜ್ಯ ಬಿಜೆಪಿ ಕಚೇರಿಯಲ್ಲಿ ಆಯುಧ ಪೂಜೆ ಸಂಭ್ರಮದ ಆಚರಣೆ
ರಾಜ್ಯ ಬಿಜೆಪಿ ಕಚೇರಿಯಲ್ಲಿ ಆಯುಧ ಪೂಜೆ ಸಂಭ್ರಮದ ಆಚರಣೆ
ಆಯುಧ ಪೂಜೆ ಸಂಭ್ರಮ:ದೊಡ್ಡ ಗಣಪತಿ ಮತ್ತು ಸರ್ಕಲ್ ಮಾರಮ್ಮ ದೇಗುಲಗಳಲ್ಲಿ ಪೂಜೆ
ಆಯುಧ ಪೂಜೆ ಸಂಭ್ರಮ:ದೊಡ್ಡ ಗಣಪತಿ ಮತ್ತು ಸರ್ಕಲ್ ಮಾರಮ್ಮ ದೇಗುಲಗಳಲ್ಲಿ ಪೂಜೆ
ಆರ್‌ಎಸ್‌ಎಸ್ ವಿಜಯದಶಮಿ ಉತ್ಸವದಲ್ಲಿ ಮೋಹನ್ ಭಾಗವತ್ ಮಾತು
ಆರ್‌ಎಸ್‌ಎಸ್ ವಿಜಯದಶಮಿ ಉತ್ಸವದಲ್ಲಿ ಮೋಹನ್ ಭಾಗವತ್ ಮಾತು