AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರಿನಲ್ಲಿ ಹೆಚ್ಚಾಯ್ತು ಹಕ್ಕಿ ಜ್ವರದ ಭೀತಿ: 50ಕ್ಕೂ ಹೆಚ್ಚು ನವಿಲುಗಳ ಸಾವು!

ತುಮಕೂರಿನಲ್ಲಿ ನವಿಲುಗಳ ಸಾವು 54ಕ್ಕೆ ಏರಿಕೆಯಾಗಿದ್ದು, ಹಕ್ಕಿ ಜ್ವರದ ಭೀತಿ ಹೆಚ್ಚಾಗಿದೆ. ಜಿಲ್ಲೆಯಲ್ಲಿ ಹಿಂದೆ ಕೋಳಿಗಳು ಮತ್ತು ನವಿಲುಗಳ ಸರಣಿ ಸಾವು ಸಂಭವಿಸಿತ್ತು. ನವಿಲುಗಳ ಸಾವಿಗೆ ಹಕ್ಕಿ ಜ್ವರವೇ ಕಾರಣವೆಂಬುದು ದೃಢಪಟ್ಟಿತ್ತು. ಆದರೆ ಬೊಮ್ಮನಹಳ್ಳಿಯ ಕೋಳಿಗಳ ವೈದ್ಯಕೀಯ ವರದಿ ನೆಗೆಟಿವ್ ಬಂದಿರುವುದು ಸಮಾಧಾನದ ಸಂಗತಿಯಾಗಿದ್ದರೂ, ಕುಣಿಗಲ್​ನಲ್ಲಿ ಮತ್ತೊಮ್ಮೆ ನವಿಲಿನ ಕಳೆಬರ ಪತ್ತೆಯಾದ ಕಾರಣ ಅಧಿಕಾರಿಗಳು ಹೈ ಅಲರ್ಟ್ ಘೋಷಿಸಿದ್ದಾರೆ.

ತುಮಕೂರಿನಲ್ಲಿ ಹೆಚ್ಚಾಯ್ತು ಹಕ್ಕಿ ಜ್ವರದ ಭೀತಿ: 50ಕ್ಕೂ ಹೆಚ್ಚು ನವಿಲುಗಳ ಸಾವು!
50ಕ್ಕೂ ಹೆಚ್ಚು ನವಿಲುಗಳ ಸಾವು!
ಜಗದೀಶ ಬಿ.
| Edited By: |

Updated on:May 08, 2026 | 12:12 PM

Share

ತುಮಕೂರು, ಮೇ 08: ಜಿಲ್ಲೆಯಲ್ಲಿ ಹಕ್ಕಿ ಜ್ವರದ (Bird Flu) ಭೀತಿ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಕೆಲ ದಿನಗಳ ಹಿಂದೆಯಷ್ಟೇ 44 ನವಿಲುಗಳು ಮತ್ತು 30 ಕೋಳಿಗಳು ಸಾವನ್ನಪ್ಪಿದ್ದವು. ನವಿಲುಗಳ ಸಾವಿಗೆ ಹಕ್ಕಿ ಜ್ವರವೇ ಕಾರಣವೆಂದು ಲ್ಯಾಬ್ ವರದಿಯಲ್ಲಿ ದೃಢಪಟ್ಟಿತ್ತು. ಕೋಳಿಗಳ ಸಾವಿಗೆ ಸಂಬಂಧಿಸಿದಂತೆ ಸ್ಯಾಂಪಲ್​ಗಳನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಇದರ ಬೆನ್ನಲ್ಲೇ ಈಗ ಮತ್ತಷ್ಟು ನವಿಲುಗಳು ಸಾವನ್ನಪ್ಪಿದ್ದು, ಸಾರ್ವಜನಿಕರಲ್ಲಿ ಭಾರೀ ಆತಂಕ ಮೂಡಿಸಿದೆ.

ಮುಖ್ಯಾಂಶಗಳು

  • ತುಮಕೂರು ಜಿಲ್ಲೆಯಲ್ಲಿ ಕಳೆದ 30 ದಿನಗಳಲ್ಲಿ 54ಕ್ಕೂ ಅಧಿಕ ನವಿಲುಗಳ ಸಾವು
  • ಹಕ್ಕಿ ಜ್ವರದ ಭೀತಿಯಿಂದ ಪಶುಸಂಗೋಪನಾ ಇಲಾಖೆ ಹೈ ಅಲರ್ಟ್
  • ಬೊಮ್ಮನಹಳ್ಳಿ ಕೋಳಿ ಫಾರಂನಲ್ಲಿ ಮೃತಪಟ್ಟಿದ್ದ ಕೋಳಿಗಳ ವರದಿ ನೆಗೆಟಿವ್

ತುಮಕೂರು ತಾಲೂಕಿನಾದ್ಯಂತ ಕಳೆದ ಒಂದು ತಿಂಗಳಿನಿಂದ ನವಿಲುಗಳು ನಿಗೂಢವಾಗಿ ಸಾವನ್ನಪ್ಪುತ್ತಿವೆ. ಕಳೆದ 30 ದಿನಗಳಲ್ಲಿ ಸಾವನ್ನಪ್ಪಿದ ನವಿಲುಗಳ ಸಂಖ್ಯೆ ಈಗ 54ರ ಗಡಿ ದಾಟಿದೆ. ಈ ಹಿಂದೆ 44 ನವಿಲುಗಳು ಸಾವನ್ನಪ್ಪಿದ್ದ ವರದಿಯಾಗಿತ್ತು, ಇದೀಗ ಆ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ತುಮಕೂರು ತಾಲೂಕು ಮಾತ್ರವಲ್ಲದೆ, ಇದೀಗ ಕುಣಿಗಲ್‌ನಲ್ಲಿಯೂ ನವಿಲಿನ ಕಳೆಬರ ಪತ್ತೆಯಾಗಿದ್ದು, ಹಕ್ಕಿ ಜ್ವರ ಜಿಲ್ಲೆಯ ಇತರೆ ಭಾಗಗಳಿಗೂ ವ್ಯಾಪಿಸುತ್ತಿರುವ ಮುನ್ಸೂಚನೆ ನೀಡಿದೆ. ಕುಣಿಗಲ್‌ನಲ್ಲಿ ಮತ್ತೆ ನವಿಲುಗಳು ಸಾವನ್ನಪ್ಪಿದರೆ ಕೂಡಲೇ ಸ್ಯಾಂಪಲ್‌ಗಳನ್ನು ವರದಿಗೆ ರವಾನಿಸಲು ಅಧಿಕಾರಿಗಳು ನಿರ್ಧರಿಸಿದ್ದಾರೆ.

ಪಶುಸಂಗೋಪನಾ ಇಲಾಖೆ ಮುನ್ನೆಚ್ಚರಿಕೆ

ನವಿಲುಗಳ ನಿರಂತರ ಸಾವಿನ ಬೆನ್ನಲ್ಲೇ ಪಶುಸಂಗೋಪನಾ ಇಲಾಖೆ ಅಲರ್ಟ್ ಘೋಷಿಸಿದೆ. ಜಿಲ್ಲೆಯಾದ್ಯಂತ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಮತ್ತು ಹಕ್ಕಿಗಳ ಚಲನವಲನದ ಮೇಲೆ ನಿಗಾ ಇಡುವಂತೆ ಸೂಚನೆ ನೀಡಲಾಗಿದೆ. ಕಾಡುಪ್ರಾಣಿಗಳು ಹಾಗೂ ಹಕ್ಕಿಗಳ ಸಾವಿನ ಬಗ್ಗೆ ಮಾಹಿತಿ ಸಿಕ್ಕ ತಕ್ಷಣ ವರದಿ ಮಾಡಲು ತಿಳಿಸಲಾಗಿದೆ.

ಇದನ್ನೂ ಓದಿ ತುಮಕೂರಿನಲ್ಲಿ ಹಕ್ಕಿ ಜ್ವರದ ಆತಂಕ: ನವಿಲುಗಳ ಸಾವಿಗೆ ‘H5N1’ ಸೋಂಕು ಕಾರಣ!

ಕೋಳಿಗಳ ಸಾವಿಗೆ ಹಕ್ಕಿ ಜ್ವರ ಕಾರಣವಲ್ಲ

ಇನ್ನೊಂದೆಡೆ, ತುಮಕೂರು ತಾಲೂಕಿನ ಬೊಮ್ಮನಹಳ್ಳಿಯ ಕೋಳಿ ಫಾರಂನಲ್ಲಿ ಏಕಕಾಲಕ್ಕೆ ಸುಮಾರು 30ಕ್ಕೂ ಹೆಚ್ಚು ಕೋಳಿಗಳು ಸಾವನ್ನಪ್ಪಿದ್ದವು. ಹಕ್ಕಿ ಜ್ವರದ ಭೀತಿಯ ನಡುವೆ ಈ ಘಟನೆ ಗ್ರಾಮಸ್ಥರನ್ನು ಕಂಗಾಲಾಗಿಸಿತ್ತು. ತಕ್ಷಣವೇ ಮೃತ ಕೋಳಿಗಳ ಸ್ಯಾಂಪಲ್‌ಗಳನ್ನು ವೈದ್ಯಕೀಯ ಪರೀಕ್ಷೆಗೆ ರವಾನಿಸಲಾಗಿತ್ತು. ಇದೀಗ ವರದಿ ಬಂದಿದ್ದು, ಕೋಳಿಗಳಲ್ಲಿ ಹಕ್ಕಿ ಜ್ವರ ಪತ್ತೆಯಾಗಿಲ್ಲ (Negative) ಎಂದು ದೃಢಪಟ್ಟಿದೆ. ಇದರಿಂದ ಕೋಳಿ ಫಾರಂ ಮಾಲೀಕರು ಹಾಗೂ ಸ್ಥಳೀಯರು ಕೊಂಚ ನಿಟ್ಟುಸಿರು ಬಿಟ್ಟಿದ್ದಾರಾದರೂ, ನವಿಲುಗಳ ಸಾವು ಇನ್ನೂ ನಿಗೂಢವಾಗಿಯೇ ಇರುವುದು ಚಿಂತೆಯನ್ನು ಹೆಚ್ಚಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:00 am, Fri, 8 May 26

Follow Us
ಜಗದೀಶ ಬಿ.
ಜಗದೀಶ ಬಿ.

ಜಗದೀಶ್​ ಬಸವರಾಜು ಟಿವಿ9 ಕನ್ನಡದ ಜಿಲ್ಲಾ ವರದಿಗಾರರಾಗಿದ್ದಾರೆ. ಪ್ರಸ್ತುತ ಅವರು ತುಮಕುರು ಜಿಲ್ಲಾ ಸುದ್ದಿಗಳ ವರದಿ ಮಾಡುತ್ತಿದ್ದಾರೆ. ಹುಟ್ಟಿದ್ದು, ಬೆಳೆದಿದ್ದು ಬೆಂಗಳೂರಿನಲ್ಲಿ. ಪತ್ರಿಕೋದ್ಯಮ ಓದಿದ್ದು, ವೃತ್ತಿ ಬದುಕು ಆರಂಭಿಸಿದ್ದು ಕೂಡಾ ಬೆಂಗಳೂರಿನಲ್ಲಿ. ಟಿವಿ9ನಲ್ಲಿ ಎಂಟು ವರ್ಷ ಸಹಿತ ಹತ್ತು ವರ್ಷದ ಕ್ರೈಂ ವರದಿಗಾರಿಕೆಯ ಅನುಭವದ ಜೊತೆ ಸದ್ಯ ೨೦೨೫ರಿಂದ ತುಮಕೂರು ಜಿಲ್ಲಾವರದಿಗಾರನಾಗಿ ಮಾದ್ಯಮದ ವೃತ್ತಿ ಬದುಕು ಮುಂದುವರೆದಿದೆ.

Read More
‘ಅಸಹ್ಯವಾಗಿ ಮಾತಾಡ್ತಾರೆ’: ಬಿಗ್ ಬಾಸ್ ಸ್ಪರ್ಧಿಗಳ ಮೇಲೆ ಅವಿನಾಶ್ ಗರಂ
‘ಅಸಹ್ಯವಾಗಿ ಮಾತಾಡ್ತಾರೆ’: ಬಿಗ್ ಬಾಸ್ ಸ್ಪರ್ಧಿಗಳ ಮೇಲೆ ಅವಿನಾಶ್ ಗರಂ
ಬಿ.ಸಿ. ರೋಡ್‌ನಲ್ಲಿ ಹಿಂದೂ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ
ಬಿ.ಸಿ. ರೋಡ್‌ನಲ್ಲಿ ಹಿಂದೂ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ
ಅಂಗನವಾಡಿಯಲ್ಲಿ‌ ಸೊಳ್ಳೆ ಪರದೆ ಹಾಕಿಕೊಂಡು ಮಲಗಿದ ಮಕ್ಕಳು: ಸಚಿವ ಆಶ್ಚರ್ಯ
ಅಂಗನವಾಡಿಯಲ್ಲಿ‌ ಸೊಳ್ಳೆ ಪರದೆ ಹಾಕಿಕೊಂಡು ಮಲಗಿದ ಮಕ್ಕಳು: ಸಚಿವ ಆಶ್ಚರ್ಯ
ಎಇಇ 16 ದಿನದಿಂದ ನಾಪತ್ತೆ: ಮಗನನ್ನು ನೆನೆದು ಬಿಕ್ಕಿ ಬಿಕ್ಕಿ ಅತ್ತ ತಂದೆ
ಎಇಇ 16 ದಿನದಿಂದ ನಾಪತ್ತೆ: ಮಗನನ್ನು ನೆನೆದು ಬಿಕ್ಕಿ ಬಿಕ್ಕಿ ಅತ್ತ ತಂದೆ
ರಾಜ್ಯಕ್ಕೆ ಕೇಂದ್ರ ಬರ ಅಧ್ಯಯನ ತಂಡ ಭೇಟಿ
ರಾಜ್ಯಕ್ಕೆ ಕೇಂದ್ರ ಬರ ಅಧ್ಯಯನ ತಂಡ ಭೇಟಿ
ರೈತ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್​​​ಗೆ​​ 14 ದಿನ ನ್ಯಾಯಾಂಗ ಬಂಧನ
ರೈತ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್​​​ಗೆ​​ 14 ದಿನ ನ್ಯಾಯಾಂಗ ಬಂಧನ
ಸರ್ಕಾರಿ ಆಸ್ಪತ್ರೆಗಳಲ್ಲಿ ಹುಟ್ಟಿದ ಕಂದಮ್ಮಗಳಿಗೆ ಈ ವಿಶೇಷ ವಸ್ತು ಗಿಫ್ಟ್​
ಸರ್ಕಾರಿ ಆಸ್ಪತ್ರೆಗಳಲ್ಲಿ ಹುಟ್ಟಿದ ಕಂದಮ್ಮಗಳಿಗೆ ಈ ವಿಶೇಷ ವಸ್ತು ಗಿಫ್ಟ್​
ಧಾರವಾಡ ಕೃಷಿ ಮೇಳದಲ್ಲಿ ಎಲ್ಲರ ಗಮನ ಸೆಳೆದ ವಿವಿಧ ತಳಿಯ ಜಾನುವಾರು!
ಧಾರವಾಡ ಕೃಷಿ ಮೇಳದಲ್ಲಿ ಎಲ್ಲರ ಗಮನ ಸೆಳೆದ ವಿವಿಧ ತಳಿಯ ಜಾನುವಾರು!
ಬೆಂಗಳೂರು ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಸ್ಥಳೀಯರಿಂದಲೇ ಚಾಲನೆ!
ಬೆಂಗಳೂರು ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಸ್ಥಳೀಯರಿಂದಲೇ ಚಾಲನೆ!
ಚುನಾವಣಾ ಆಯೋಗದ ವಿರುದ್ಧ 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಾದಯಾತ್ರೆ
ಚುನಾವಣಾ ಆಯೋಗದ ವಿರುದ್ಧ 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಾದಯಾತ್ರೆ