ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ಆತ್ಮಹತ್ಯೆಗೆ ಶರಣು, ಕಾರಣ..?

| Updated By: ರಮೇಶ್ ಬಿ. ಜವಳಗೇರಾ

Updated on: Jan 10, 2025 | 5:29 PM

ಸದಾ ಒಂದಲ್ಲ ಒಂದು ವಿವಾದಲ್ಲಿ ಸಿಲುಕಿಕೊಂಡು ಸುದ್ದಿಯಾಗುವ ತುಮಕೂರು ಜಿಲ್ಲೆಯ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ಆತ್ಮಹತ್ಯೆಗೆ ಶರಣಾಗಿದ್ದಾನೆ. ಇನ್ನು ಈಗ 7ನೇ ತರಗತಿ ವಿದ್ಯಾರ್ಥಿ ತ್ರಿಶಾಲ್ ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಇನ್ನು ಸಾಯುವ ಮುನ್ನ ಡೆತ್​ನೋಟ್ ಬರೆದಿಟ್ಟಿದ್ದು, ಸಾವಿಗೆ ಸ್ಫೋಟಕ ಕಾರಣ ಉಲ್ಲೇಖಿಸಿದ್ದಾನೆ. ಹಾಗಾದ್ರೆ, ಡೆತ್​ನೋಟ್​ನಲ್ಲೇನಿದೆ ಎನ್ನುವುದನ್ನು ನೋಡಿ.

ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ಆತ್ಮಹತ್ಯೆಗೆ ಶರಣು, ಕಾರಣ..?
Shankutala Nataraj Son
Follow us on

ತುಮಕೂರು, (ಜನವರಿ 10): 7ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ (Suicide) ಮಾಡಿಕೊಂಡಿರುವ ಧಾರುಣ ಘಟನೆಯೊಂದು ತುಮಕೂರು (Tumkuru) ನಗರದ ವಿಜಯನಗರ 2ನೇ ಮುಖ್ಯ ರಸ್ತೆಯಲ್ಲಿ ನಡೆದಿದೆ. ತ್ರಿಶಾಲ್ (13) (Trishal) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಏಳನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ತ್ರಿಶಾಲ್ ಇಂದು (ಜನವರಿ 10) ಮನೆಯಲ್ಲಿ ಶಾಲಾ ಸಮವಸ್ತ್ರದಲ್ಲೇ ನೇಣುಬಿಗಿದುಕೊಂಡು ಮಾಡಿಕೊಂಡಿದ್ದಾನೆ. ಇನ್ನು ಮೃತ ತ್ರಿಶಾಲ್, ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರನಾಗಿದ್ದು, ಆತ್ಮಹತ್ಯೆಗೂ ಮುನ್ನವೇ ಡೆತ್​ನೋಟ್​ ಬರೆದಿಟ್ಟಿದ್ದಾನೆ.

ಮೃತ ತ್ರಿಶಾಲ್ ಆತ್ಮಹತ್ಯೆಗೆ ಮುನ್ನ ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾಗಿದ್ದಾನೆ. ಪಾರಿವಾಳದ ಬೆಟ್ಟಿಂಗ್ ವಿಚಾರಕ್ಕೆ ಸ್ನೇಹಿತರ ನಡುವೆ ಗಲಾಟೆಯಾಗಿದೆ. ಅದೇ ವಿಚಾರಕ್ಕೆ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಜಯನಗರ ಪೊಲೀಸರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಮೃತದೇಹ ತುಮಕೂರು ಜಿಲ್ಲಾಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಘಟನೆ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಿದ್ದಾರೆ.

ಇದನ್ನೂ ಓದಿ: ಬಿಜೆಪಿ ಶಾಸಕ ನಿವಾಸದಲ್ಲೇ ಕಾರು ಚಾಲಕ ನಿಗೂಢ ಸಾವು..!

ಬಿಜೆಪಿ ಕಾರ್ಯಕರ್ತೆಯಾಗಿರುವ ಶಕುಂತಲಾ ನಟರಾಜ್ ಅವರು ಕಾಂಗ್ರೆಸ್ ಹಾಗೂ ಎಡಪಂಥಿಯ ನಿಲುವುಗಳನ್ನು ವಿರೋಧಿಯಾಗಿದ್ದಾರೆ. ಸದಾ ಸಾಮಾಜಿಕ ಜಾಲತಾಣಗಳಲ್ಲಿ ಆ್ಯಕ್ಟಿವ್ ಆಗಿರುವ ಇವರು ಕಾಂಗ್ರೆಸ್ ನಿಲುವುಗಳನ್ನು ಖಂಡಿಸುತ್ತಲೇ ಇರುತ್ತಾರೆ. ಇತ್ತೀಚೆಗೆ ಸಿಎಂ ಸಿದ್ದರಾಮಯ್ಯನವರ ಕುಟುಂಬದ ಬಗ್ಗೆ ಟೀಕಿಸಿ ಬಂಧನಕ್ಕೊಳಗಾಗಿದ್ದರು. ಹಾಗೇ ಇವರ ವಿರುದ್ಧ ವಿವಿಧ ಠಾಣೆಗಳಲ್ಲಿ ಹಲವು ಪ್ರಕಟಣಗಳು ದಾಖಲಾಗಿದ್ದನ್ನು ಇಲ್ಲಿ ಸ್ಮರಿಸಬಹುದು. ವಿವಾದಗಳಿಂದಲೇ ಶಕುಂತಲಾ ನಟರಾಜ್ ಅವರು ಚಿರಪರಿಚಿತ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:19 pm, Fri, 10 January 25