Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂವಿಧಾನ ವಿರೋಧಿ ಹೇಳಿಕೆಯಿಂದ ಹೆಗಡೆಗೆ ಟಿಕೆಟ್ ಕೈತಪ್ಪಿದೆ: ವಿ ಸೋಮಣ್ಣ

ಹಾಲಿ ಸಂಸದ ಅನಂತಕುಮಾರ್ ಹೆಗಡೆ ಅವರಿಗೆ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೈತಪ್ಪಿದೆ. ಕ್ಷೇತ್ರದಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಮಣೆ ಹಾಕಲಾಗಿದೆ. ಹೆಗಡೆ ಅವರಿಗೆ ಟಿಕೆಟ್ ತಪ್ಪಲು ಸಂವಿಧಾನ ತಿದ್ದುಪಡಿ ಕುರಿತು ನೀಡಿದ ಹೇಳಿಕೆಯೇ ಕಾರಣ ಎನ್ನುವ ಮಾತುಗಳು ಕೇಳಿಬರುತ್ತಿವೆ. ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ ಅವರು ಕೂಡ ಇದೇ ಕಾರಣವನ್ನು ನೀಡಿದ್ದಾರೆ.

ಸಂವಿಧಾನ ವಿರೋಧಿ ಹೇಳಿಕೆಯಿಂದ ಹೆಗಡೆಗೆ ಟಿಕೆಟ್ ಕೈತಪ್ಪಿದೆ: ವಿ ಸೋಮಣ್ಣ
ಸಂವಿಧಾನ ವಿರೋಧಿ ಹೇಳಿಕೆಯಿಂದ ಅನಂತಕುಮಾರ್ ಹೆಗಡೆಗೆ ಟಿಕೆಟ್ ಕೈತಪ್ಪಿದೆ ಎಂದ ವಿ ಸೋಮಣ್ಣ
Follow us
ಮಹೇಶ್ ಇ, ಭೂಮನಹಳ್ಳಿ
| Updated By: Rakesh Nayak Manchi

Updated on: Mar 25, 2024 | 2:42 PM

ತುಮಕೂರು, ಮಾ.25: ಹಾಲಿ ಸಂಸದ ಅನಂತಕುಮಾರ್ ಹೆಗಡೆ (Anantkumar Hegde) ಅವರಿಗೆ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೈತಪ್ಪಿದೆ. ಕ್ಷೇತ್ರದಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಮಣೆ ಹಾಕಲಾಗಿದೆ. ಹೆಗಡೆ ಅವರಿಗೆ ಟಿಕೆಟ್ ತಪ್ಪಲು ಸಂವಿಧಾನ ತಿದ್ದುಪಡಿ ಕುರಿತು ನೀಡಿದ ಹೇಳಿಕೆಯೇ ಕಾರಣ ಎನ್ನುವ ಮಾತುಗಳು ಕೇಳಿಬರುತ್ತಿವೆ. ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ (V Somanna) ಅವರು ಕೂಡ ಇದೇ ಕಾರಣವನ್ನು ನೀಡಿದ್ದಾರೆ.

ತುಮಕೂರಿನಲ್ಲಿ ಮಾತನಾಡಿದ ವಿ ಸೋಮಣ್ಣ, ಸಂವಿಧಾನ ವಿರೋಧಿ ಹೇಳಿಕೆಯಿಂದ ಅನಂತಕುಮಾರ್ ಹೆಗಡೆ ಅವರಿಗೆ ಟಿಕೆಟ್ ಕೈತಪ್ಪಿದೆ. ಸಂವಿಧಾನವನ್ನು ಅಪಮಾನಿಸಿದರೆ ಅದಕ್ಕಿಂತ ಬೇರೆ ಪಾಪವಿಲ್ಲ. ಆದರೆ, ಕಾಂಗ್ರೆಸ್​ನವರು ಕೆಲವ ವಿಚಾರ ತಿರುಚುತ್ತಾರೆ. ಹೆಗಡೆ ಅವರು ಸಂವಿಧಾನ ಬದಲಾವಣೆ ಮಾಡುತ್ತೇನೆ ಎಂದು ಹೇಳಿಲ್ಲ. ಅವರು ಯಾವ ಅರ್ಥದಲ್ಲಿ ಹೇಳಿದ್ದಾರೆ ಎಂಬುದು ಗೊತ್ತಿಲ್ಲ ಎಂದರು.

ಅಂಥಹ ಪುಣ್ಯಾತ್ಮ ಅಂಬೇಡ್ಕರ್ ಅವರ ಸಂಸ್ಕಾರಕ್ಕೇ ಕಾಂಗ್ರೆಸ್​ನವರು ಜಾಗ ಕೊಟ್ಟಿಲ್ಲ. ಕಾಂಗ್ರೆಸ್​ನವರಿಗೆ ಸಂವಿಧಾನ ಮತ್ತು ಅಂಬೇಡ್ಕರ್ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ಸಂವಿಧಾನ ಬದಲಾವಣೆ ಮಾಡುತ್ತೇನೆ ಅಂತಾ ಯಾರೂ ಹೇಳಿಲ್ಲ. ಹೆಗಡೆ ಅವರು ತಮ್ಮ ಸ್ವಂತ ಅಭಿಪ್ರಾಯ ಎಂದಿದ್ದಾರೆ. ಅದಕ್ಕೆ ಅವರಿಗೆ ಶಿಕ್ಷೆ ಕೂಡ ಆಗಿದೆ ಎಂದರು.

ಇದನ್ನೂ ಓದಿ: ಸಂಸದ ಅನಂತಕುಮಾರ ಹೆಗಡೆಗೆ ಟಿಕೆಟ್ ಮಿಸ್ ಆಗಲು ಒಂದಲ್ಲ, ಎರಡಲ್ಲ ಹಲವು ಕಾರಣ!

2019 ಲೋಕಸಭೆ ಚುನಾವಣೆಯಲ್ಲಿ ಹೆಗಡೆ ಗೆದ್ದ ನಂತರ ಜನಸಂಪರ್ಕಕ್ಕೆ ಬಂದಿರಲಿಲ್ಲ. ಕಾರ್ಯಕರ್ತರ ಕೈಗೂ ಸಿಗುತ್ತಿರಲಿಲ್ಲ. ನಾಲ್ಕೂವರೆ ವರ್ಷಗಳ ನಂತರ ಅಂದರೆ, 2024ರ ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ವಿವಾದಾತ್ಮಕ ಹೇಳಿಕೆಗಳಿಂದ ಸುದ್ದಿಯಾಗಲು ಆರಂಭಿಸಿದ್ದರು. ಮತ್ತೊಮ್ಮೆ ಮೋದಿ ಎನ್ನುವ ಕಾರ್ಯಕ್ರಮದಡಿ ಕಾರ್ಯಕರ್ತರ ಸಭೆಗಳನ್ನು ನಡೆಸುತ್ತಾ ಪ್ರಚಾರ ನಡೆಸುತ್ತಿದ್ದರು.

ಬಿಜೆಪಿ ಎರಡನೇ ಪಟ್ಟಿಯಲ್ಲಿ ತನ್ನ ಹೆಸರು ಇಲ್ಲದಿರುವುದನ್ನು ನೋಡಿ ಈ ಬಾರಿ ತನಗೆ ಟಿಕೆಟ್ ಸಿಗಲ್ಲ ಎಂಬುದು ಖಾತ್ರಿಯಾಗುತ್ತಿದ್ದಂತೆ ಹೆಗಡೆ ಅವರು ಮತ್ತೆ ಮನೆ ಸೇರಿದ್ದರು. ಯಾರ ಸಂಪರ್ಕಕ್ಕೂ ಸಿಕ್ಕಿರಲಿಲ್ಲ. ನಿನ್ನೆಯಷ್ಟೇ ಬಿಜೆಪಿ ಐದನೇ ಪಟ್ಟಿ ಬಿಡುಗಡೆಯಾಗಿದ್ದು, ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಟಿಕೆಟ್ ವಿಧಾನಸಭೆ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ನೀಡಲಾಗಿದೆ.

ಇದರ ಬೆನ್ನಲ್ಲೇ ಕ್ಷೇತ್ರದ ಜನರಿಗೆ ಅನಂತಕುಮಾರ್ ಹೆಗಡೆ ಅವರು ಭಾವನಾತ್ಮಕ ಪತ್ರ ಬರೆದಿದ್ದರು. ಅಲ್ಲದೆ, ಹಿಂದೂ ಫೈರ್​ ಬ್ರ್ಯಾಂಡ್​ ಎಂದೆ ಹೆಸರುವಾಸಿಯಾಗಿರುವ ಅನಂತಕುಮಾರ್ ಹೆಗಡೆ ಅವರಿಗೆ ಟಿಕೆಟ್ ತಪ್ಪಲು ಕಾರಣವೇನು ಎಂಬುದರ ಬಗ್ಗೆ ಚರ್ಚೆಗಳು ಆರಂಭವಾಗಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜೈಸ್ವಾಲ್ ಸಿಡಿಲಬ್ಬರದ ಬ್ಯಾಟಿಂಗ್​ಗೆ ಪಂಜಾಬ್ ಬೌಲರ್ಸ್​ ಸುಸ್ತು
ಜೈಸ್ವಾಲ್ ಸಿಡಿಲಬ್ಬರದ ಬ್ಯಾಟಿಂಗ್​ಗೆ ಪಂಜಾಬ್ ಬೌಲರ್ಸ್​ ಸುಸ್ತು
ಒಂದೇ ಊರಿನವರಾದರೂ ನಾನು ವಿನಯ್​ರನ್ನು ನೋಡಿರಲಿಲ್ಲ: ಶಾಸಕ
ಒಂದೇ ಊರಿನವರಾದರೂ ನಾನು ವಿನಯ್​ರನ್ನು ನೋಡಿರಲಿಲ್ಲ: ಶಾಸಕ
ಶ್ರೀಲಂಕಾದಲ್ಲಿರುವ ತಮಿಳು ಮೀನುಗಾರರ ಬಿಡುಗಡೆಗೆ ಪ್ರಧಾನಿ ಮೋದಿ ಒತ್ತಾಯ
ಶ್ರೀಲಂಕಾದಲ್ಲಿರುವ ತಮಿಳು ಮೀನುಗಾರರ ಬಿಡುಗಡೆಗೆ ಪ್ರಧಾನಿ ಮೋದಿ ಒತ್ತಾಯ
ಯತ್ನಾಳ್ ಆದಷ್ಟು ಬೇಗ ಪಕ್ಷಕ್ಕೆ ವಾಪಸ್ಸಾಗುವ ನಿರೀಕ್ಷೆ ಇದೆ: ಸುಧಾಕರ್
ಯತ್ನಾಳ್ ಆದಷ್ಟು ಬೇಗ ಪಕ್ಷಕ್ಕೆ ವಾಪಸ್ಸಾಗುವ ನಿರೀಕ್ಷೆ ಇದೆ: ಸುಧಾಕರ್
ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್
ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್
ಛತ್ತೀಸ್‌ಗಢದ ದಾಂತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಮಿತ್ ಶಾ
ಛತ್ತೀಸ್‌ಗಢದ ದಾಂತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಮಿತ್ ಶಾ
ಹಾಲ್​ ಟಿಕೆಟ್​​ನೊಂದಿಗೆ ಮಾದರಿ ಒಎಂಆರ್ ಶೀಟ್ ಕೂಡ ಡೌನ್ಲೋಡ್: ಪ್ರಸನ್ನ
ಹಾಲ್​ ಟಿಕೆಟ್​​ನೊಂದಿಗೆ ಮಾದರಿ ಒಎಂಆರ್ ಶೀಟ್ ಕೂಡ ಡೌನ್ಲೋಡ್: ಪ್ರಸನ್ನ
ಪುಟ್ಟ ಬಾಲಕನ ದೈವ ನರ್ತನ: ಮೈ ಜುಮ್ಮೆನಿಸುವ ವಿಡಿಯೋ ನೋಡಿ
ಪುಟ್ಟ ಬಾಲಕನ ದೈವ ನರ್ತನ: ಮೈ ಜುಮ್ಮೆನಿಸುವ ವಿಡಿಯೋ ನೋಡಿ
CET ಪರೀಕ್ಷೆ ಬಗ್ಗೆ ಭಯ ಬೇಡ; ತಜ್ಞರು ನೀಡಿರುವ ಟಿಪ್ಸ್​​ ಇಲ್ಲಿದೆ
CET ಪರೀಕ್ಷೆ ಬಗ್ಗೆ ಭಯ ಬೇಡ; ತಜ್ಞರು ನೀಡಿರುವ ಟಿಪ್ಸ್​​ ಇಲ್ಲಿದೆ
ಒಂದು ಕಾಲದ ಜೋಡೆತ್ತುಗಳು, ಈಗ ಬದ್ಧ ವೈರಿಗಳು!
ಒಂದು ಕಾಲದ ಜೋಡೆತ್ತುಗಳು, ಈಗ ಬದ್ಧ ವೈರಿಗಳು!