ತುಮಕೂರು: ಮಾರಕಾಸ್ತ್ರಗಳಿಂದ ಕೊಚ್ಚಿ ಬಿಜೆಪಿ ಕಾರ್ಯಕರ್ತನ ಕೊಲೆ
Crime News: ಪಾವಗಡ ತಾಲೂಕಿನ ಬಿ.ಕೆ.ಹಳ್ಳಿ ಕ್ರಾಸ್ನಲ್ಲಿ ನಡೆದಿದೆ. ಇಲ್ಲಿ ಬಿಜೆಪಿ ಕಾರ್ಯಕರ್ತ, ಅಪ್ಪಾಜಿಹಳ್ಳಿ ನಿವಾಸಿ ಪ್ರಸನ್ನ ಕುಮಾರ್ (46) ಎಂಬವರ ಬರ್ಬರ ಹತ್ಯೆ ಮಾಡಲಾಗಿದೆ.
ತುಮಕೂರು: ಮಾರಕಾಸ್ತ್ರಗಳಿಂದ ಕೊಚ್ಚಿ ಬಿಜೆಪಿ ಕಾರ್ಯಕರ್ತನ ಕೊಲೆ ಮಾಡಿರುವ ದುರ್ಘಟನೆ ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ಬಿ.ಕೆ.ಹಳ್ಳಿ ಕ್ರಾಸ್ನಲ್ಲಿ ನಡೆದಿದೆ. ಇಲ್ಲಿ ಬಿಜೆಪಿ ಕಾರ್ಯಕರ್ತ, ಅಪ್ಪಾಜಿಹಳ್ಳಿ ನಿವಾಸಿ ಪ್ರಸನ್ನ ಕುಮಾರ್ (46) ಎಂಬವರ ಬರ್ಬರ ಹತ್ಯೆ ಮಾಡಲಾಗಿದೆ. ಪ್ರಸನ್ನ, ತಾಲೂಕು ರೈತ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಕೂಡ ಆಗಿದ್ದಾರೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಎಸ್ಪಿ ರಾಹುಲ್ ಕುಮಾರ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದಿಲ್ಲ. ಪಾವಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಚಿಕ್ಕಬಳ್ಳಾಪುರ: ಎರಡು ಗುಂಪುಗಳ ನಡುವೆ ಪರಸ್ಪರ ಮಾರಾಮಾರಿ ಬಿಜೆಪಿ ಮುಖಂಡ ಅಭಿಷೇಕ್ ಶಾಮಿಯಾನ ಶಾಪ್ ಬಳಿ ಗಲಾಟೆ ಆದ ಘಟನೆ ನಡೆದಿದೆ. ಚಿಕ್ಕಬಳ್ಳಾಪುರ ನಗರದ ಮಹಾಕಾಳಿ ರಸ್ತೆಯಲ್ಲಿ ಗಲಾಟೆ ನಡೆದಿದೆ. ಗ್ರಾಮ ಪಂಚಾಯತಿ ಸದಸ್ಯ ಶ್ರೀನಿವಾಸ್ ಜೊತೆಗೆ ವಾಗ್ವಾದ ಉಂಟಾಗಿದೆ. ಸಾವಿರ ರೂಪಾಯಿ ಸಾಲದ ವಿಚಾರದಲ್ಲಿ ಪರಸ್ಪರ ವಾಗ್ವಾದ ಉಂಟಾಗಿದೆ ಎಂದು ಹೇಳಲಾಗಿದೆ. ವಾಗ್ವಾದ ನಂತರ ಏಕಾಏಕಿ ಎರಡು ಕಡೆಯವರಿಂದ ಪರಸ್ಪರ ಹಲ್ಲೆಗೆ ಯತ್ನ ಮಾಡಲಾಗಿದೆ. ಗುಂಪು ಘರ್ಷಣೆ ಬಿಡಿಸಲು ಪೊಲೀಸರು ಹೈರಾಣಾಗಿದ್ದಾರೆ ಎಂದು ತಿಳಿದುಬಂದಿದೆ. ಚಿಕ್ಕಬಳ್ಳಾಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇತರೆ ಅಪಘಾತ, ಅಪರಾಧ ಸುದ್ದಿಗಳು ಟವೇರಾ ಕಾರು ಡಿಕ್ಕಿಯಾಗಿ 26 ವರ್ಷದ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ತುಮಕೂರು ಹೊರವಲಯದ ಮರಳೂರು ಕೆರೆ ಏರಿ ಮೇಲೆ ನಡೆದಿದೆ. ತುಮಕೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ರಾಷ್ಟ್ರೀಯ ಹೆದ್ದಾರಿ ಬಳಿ ಕಾಡಲ್ಲಿ ಕಡವೆ ಶವ ಪತ್ತೆ ಆಗಿದೆ. ಕೊಳೆತ ಸ್ಥಿತಿಯಲ್ಲಿ ಗಂಡು ಕಡವೆ ಶವ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಬೈಂದೂರು ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಡಾಬಾದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಹಲಗೂರು ಗ್ರಾಮದಲ್ಲಿ ಘಟನೆ ನಡೆದಿದೆ. ಹನುಮಂತು (40) ಎಂಬವರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಹಲಗೂರಿನ ಡಾಬವೊಂದರಲ್ಲಿ ಅಡುಗೆ ಭಟ್ಟನಾಗಿ ಕೆಲಸ ನಿರ್ವಹಿಸುತ್ತಿದ್ದ ಹನುಮಂತು, ಕನಕಪುರ ತಾಲೂಕಿನ ತೆಂಗನಾಯಕನ ಹಳ್ಳಿ ಗ್ರಾಮದ ನಿವಾಸಿ ಎಂದು ತಿಳಿದುಬಂದಿದೆ. ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಇದನ್ನೂ ಓದಿ: Crime News: ಸಂಚಾರಿ ಪೊಲೀಸ್ ಆಯುಕ್ತರ ಮನೆಯಲ್ಲೇ ಕಳ್ಳತನ; ಕೆಲಸದಾಕೆ ಕೃತ್ಯ ಎಸಗಿರುವ ಶಂಕೆ
ಇದನ್ನೂ ಓದಿ: Murder: ಕುಡಿದ ಮತ್ತಿನಲ್ಲಿ ಬೈಕ್ ಓಡಿಸುವ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
Published On - 11:25 pm, Tue, 7 December 21