Tumkur News: ಮಕ್ಕಳಲ್ಲಿ ಕಾಣಿಸಿಕೊಂಡ ವಿಚಿತ್ರ ಕಾಯಿಲೆ, ಪಾದಗಳಲ್ಲಿನ ಕಪ್ಪು ಚುಕ್ಕೆಗೆ ಪೋಷಕರಲ್ಲಿ ಆತಂಕ

ಕೊರಟಗೆರೆ ತಾಲೂಕಿನ ಯಲಚೇನಹಳ್ಳಿ ಹಾಗೂ ತುರುವೇಕೆರೆ ತಾಲೂಕಿನ ಕುಣಿಕೇನಹಳ್ಳಿಯ ಮಕ್ಕಳಲ್ಲಿ ಚರ್ಮದ ಫಂಗಸ್ ಕಂಡು ಬಂದಿದ್ದು ಪಾದಗಳಲ್ಲಿ ಕಪ್ಪು ಚುಕ್ಕೆಗಳಾಗಿವೆ.

Tumkur News: ಮಕ್ಕಳಲ್ಲಿ ಕಾಣಿಸಿಕೊಂಡ ವಿಚಿತ್ರ ಕಾಯಿಲೆ, ಪಾದಗಳಲ್ಲಿನ ಕಪ್ಪು ಚುಕ್ಕೆಗೆ ಪೋಷಕರಲ್ಲಿ ಆತಂಕ
ಮಕ್ಕಳಲ್ಲಿ ಕಾಣಿಸಿಕೊಳ್ಳುತ್ತಿರುವ ಕಪ್ಪು ಚುಕ್ಕೆ ರೋಗ
Follow us
ಆಯೇಷಾ ಬಾನು
|

Updated on:Jun 26, 2023 | 3:07 PM

ತುಮಕೂರು: ಜಿಲ್ಲೆಯ ತುರುವೇಕೆರೆ ಹಾಗೂ ಕೊರಟಗೆರೆಯಲ್ಲಿ ಗ್ರಾಮದಲ್ಲಿ ವಿಚಿತ್ರ ಕಾಯಿಲೆಯೊಂದು ಕಾಣಿಸಿಕೊಂಡಿದೆ(Fungal Skin Infections). ಶಾಲಾ ಮಕ್ಕಳ ಕಾಲಲ್ಲಿ ದಿಢೀರನೆ ಕಪ್ಪು ಚುಕ್ಕೆಗಳು(Black Spots) ಕಾಣಿಸಿಕೊಂಡಿದ್ದು ಪೋಷಕರಲ್ಲಿ ಆತಂಕ ಉಂಟಾಗಿದೆ. ಕೊರಟಗೆರೆ ತಾಲೂಕಿನ ಯಲಚೇನಹಳ್ಳಿ ಹಾಗೂ ತುರುವೇಕೆರೆ ತಾಲೂಕಿನ ಕುಣಿಕೇನಹಳ್ಳಿಯ ಮಕ್ಕಳಲ್ಲಿ ಚರ್ಮದ ಫಂಗಸ್ ಕಂಡು ಬಂದಿದ್ದು ಪಾದಗಳಲ್ಲಿ ಕಪ್ಪು ಚುಕ್ಕೆಗಳಾಗಿವೆ. ಆಗಾಗ ತುರಿಕೆ ಕೂಡ ಆಗುತ್ತಿದ್ದು ಸದ್ಯ ಮಕ್ಕಳಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಕುಣಿಕೇನಹಳ್ಳಿಯ ಗ್ರಾಮದ 21 ಮಕ್ಕಳು ಹಾಗೂ ಯಲಚೇನಹಳ್ಳಿ ಗ್ರಾಮದ 5 ಮಕ್ಕಳ ಅಂಗಾಲು-ಅಂಗೈಲ್ಲಿ ಡಾಟ್ ಇಟ್ಟಂತಹ ಕಪ್ಪು ಮಚ್ಚೆಗಳು ಕಾಣಿಸಿಕೊಂಡಿವೆ. ಕಳೆದ ಶನಿವಾರ ಶಾಲೆಯಿಂದ ಮನೆಗೆ ಮಕ್ಕಳು ವಾಪಾಸ್ ಬಂದ ಬಳಿಕ ಮಚ್ಚೆಗಳು ಕಾಣಿಸಿಕೊಂಡಿವೆ ಎಂದು ಪೋಷಕರು ಟಿವಿ9 ಬಳಿ ಆತಂಕ ವ್ಯಕ್ತಪಡಿಸಿದ್ದಾರೆ. ಜೊತೆಗೆ ಶಾಲೆಯ ಶಿಕ್ಷಕನಿಗೂ ಮಚ್ಚೆಗಳು ಕಾಣಿಸಿಕೊಂಡಿವೆ. ಸದ್ಯ ತುರುವೇಕೆರೆ ಶಾಸಕ ಎಂ.ಟಿ ಕೃಷ್ಣಪ್ಪ ಹಾಗೂ ವೈದ್ಯರ ತಂಡ ಶಾಲೆಗೆ ಭೇಟಿ ಕೊಟ್ಟಿದ್ದು ಮಕ್ಕಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ:  ಒಂದು ವರ್ಷದ ಕಂದಮ್ಮನನ್ನು ಒಂಟಿಯಾಗಿ ಮನೆಯಲ್ಲಿ ಬಿಟ್ಟು 10 ದಿನಗಳ ಕಾಲ ಟ್ರಿಪ್​ಗೆ ಹೋದ ತಾಯಿ, ಹಸಿವಿನಿಂದ ಅತ್ತೂ ಅತ್ತೂ ಮಗು ಸಾವು

ಆಟೋ ಪಲ್ಟಿಯಾಗಿ 10ಕ್ಕೂ ಹೆಚ್ಚು ಮಕ್ಕಳಿಗೆ ಗಂಭೀರ ಗಾಯ

ಮೈಸೂರು ಜಿಲ್ಲೆ ಟಿ.ನರಸೀಪುರ ತಾಲೂಕಿನ ಆಲಗೂಡು ಗ್ರಾಮದ ಬಳಿ SSLC ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಆಪೇ ಆಟೋ ಪಲ್ಟಿಯಾಗಿ 10ಕ್ಕೂ ಹೆಚ್ಚು ಮಕ್ಕಳಿಗೆ ಗಂಭೀರ ಗಾಯಗಳಾಗಿವೆ. ಗಾಯಾಳು ವಿದ್ಯಾರ್ಥಿಗಳಿಗೆ ಟಿ.ನರಸೀಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದ್ದು ಮೂವರು ವಿದ್ಯಾರ್ಥಿಗಳನ್ನು ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿದೆ. ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತುಮಕೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 2:33 pm, Mon, 26 June 23

ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ