ಬಿಡದಿ ಮತ್ತು ತುಮಕೂರು ಎರಡು ಕಡೆನೂ ಮೆಟ್ರೋ ಆಗಬೇಕು: ಜಿ.ಪರಮೇಶ್ವರ, ಗೃಹ ಸಚಿವ

ಬೆಂಗಳೂರಿನ ನಮ್ಮ ಮೆಟ್ರೋವನ್ನು ತನ್ನ ತವರು ಜಿಲ್ಲೆಯ ಬಿಡದಿವರೆಗೂ ವಿಸ್ತರಿಸುವ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಗೃಹಸಚಿವ ಡಾ.ಜಿ.ಪರಮೇಶ್ವರ ಅವರು ತನ್ನ ತವರು ಜಿಲ್ಲೆ ತಮಕೂರಿಗೂ ಮೆಟ್ರೋ ವಿಸ್ತರಣೆ ಆಗಬೇಕು ಎನ್ನುವ ಹೇಳಿಕೆ ನೀಡಿದ್ದಾರೆ.

ಬಿಡದಿ ಮತ್ತು ತುಮಕೂರು ಎರಡು ಕಡೆನೂ ಮೆಟ್ರೋ ಆಗಬೇಕು: ಜಿ.ಪರಮೇಶ್ವರ, ಗೃಹ ಸಚಿವ
ಗೃಹ ಸಚಿವ ಡಾ.ಜಿ.ಪರಮೇಶ್ವರ
Follow us
| Updated By: Rakesh Nayak Manchi

Updated on:Nov 11, 2023 | 6:05 PM

ತುಮಕೂರು, ನ.11: ಬಿಡದಿ ಹಾಗೂ ತುಮಕೂರು ಎರಡು ಕಡೆಯೂ ಮೆಟ್ರೋ (Metro) ಆಗಬೇಕು ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ (Dr.G.Parameshwara) ಹೇಳಿದ್ದಾರೆ. ಬೆಂಗಳೂರಿನ ನಮ್ಮ ಮೆಟ್ರೋವನ್ನು ತನ್ನ ತವರು ಜಿಲ್ಲೆಯ ಬಿಡದಿವರೆಗೂ ವಿಸ್ತರಿಸುವ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಗೃಹಸಚಿವ ಡಾ.ಜಿ.ಪರಮೇಶ್ವರ ಅವರು ತನ್ನ ತವರು ಜಿಲ್ಲೆ ತಮಕೂರಿಗೂ ಮೆಟ್ರೋ ವಿಸ್ತರಣೆ ಆಗಬೇಕು ಎನ್ನುವ ಹೇಳಿಕೆ ನೀಡಿದ್ದಾರೆ.

ತುಮಕೂರಿನಲ್ಲಿ ಮಾತನಾಡಿದ ಅವರು, ಈ ವಿಚಾರದಲ್ಲಿ ಚಟಾಪಟಿ ಇಲ್ಲ. ಫಸ್ಟ್​, ಸೆಕೆಂಡ್ ಪ್ರಶ್ನೆ ಇಲ್ಲ. ಬಿಡದಿವರೆಗೂ ಮೆಟ್ರೋ ವಿಸ್ತರಣೆ ಮಾಡಿದರೆ ಬೆಂಗಳೂರು ಬೆಳೆಯುತ್ತದೆ. ಅದೇ ರೀತಿ ತುಮಕೂರು ಬೆಳೆದರೂ ಒಳ್ಳೆಯದು. ಲಂಡನ್​ನಲ್ಲಿ ನೂರಾರು ಕಿಲೋಮೀಟರ್ ವರೆಗೆ ಮೆಟ್ರೋ ಬೆಳೆದಿದೆ. ಅದೇನು ದೊಡ್ಡ ವಿಚಾರ ಅಲ್ಲ. ಮೆಟ್ರೋ ಬೆಳೆದರೆ ಸಾರಿಗೆ ಸಂಪರ್ಕಕ್ಕೆ ಒಳ್ಳೆಯದು ಎಂದರು.

ಇದನ್ನೂ ಓದಿ: ಪಿಎಸ್​​ಐ ಮರು ಪರೀಕ್ಷೆ ನಡೆಸುವಂತೆ ಹೈಕೋರ್ಟ್​ ತೀರ್ಪು: ಆದೇಶ ಪ್ರತಿ ಕೈ ಸೇರಿದ ಬಳಿಕ ಮುಂದಿನ ಹೆಜ್ಜೆ: ಜಿ ಪರಮೇಶ್ವರ್​

ಇತ್ತೀಚೆಗೆ ಮಾತನಾಡಿದ್ದ ಡಿಕೆ ಶಿವಕುಮಾರ್ ಅವರು, ರಾಮನಗರವನ್ನು ಬೆಂಗಳೂರಿನೊಂದಿಗೆ ಸೇರಿಸಲಾಗುವುದು ಎಂದಿದ್ದರು. ಇದರ ಬೆನ್ನಲ್ಲೇ, ಶುಕ್ರವಾರ ಬಿಡದಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದ ಅವರು, ಬಿಡದಿಗೆ ಬೆಂಗಳೂರು ಮೆಟ್ರೋ ವಿಸ್ತರಿಸುವ ಬಗ್ಗೆ ಘೋಷಣೆ ಮಾಡಿದ್ದರು.

ಮಚ್ಚು ಹಿಡ್ಕೊಂಡು ಓಡಾಡಿದರೆ ಪೊಲೀಸರು ಸುಮ್ಮನೆ ಬಿಡಲ್ಲ

ಗೃಹಸಚಿವರ ತವರು ಜಿಲ್ಲೆ ತುಮಕೂರಿನಲ್ಲೇ ಪುಂಡರಿಂದ ಪುಂಡಾಟ ನಡೆಯುತ್ತಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಗೃಹಸಚಿವರು, ಕಾನೂನಿಗೆ ಯಾರು ದೊಡ್ಡವರಲ್ಲ. ಯಾರೋ ಮಚ್ಚು ಹಿಡ್ಕೊಂಡು ಓಡಾಡಿದರೆ ಪೊಲೀಸರು ಸುಮ್ಮನೆ ಬಿಡಲ್ಲ. ಅವರನ್ನ ಹಿಡಿದು ಒಳಗೆ ಹಾಕುತ್ತೇವೆ. ಅಂತವರು ಏನಾದರು ಸ್ವಲ್ಪದ್ದರಲ್ಲಿ ತಪ್ಪಿಸಿಕೊಂಡಿದ್ದರೆ, ಅವರ ವಿರುದ್ಧ ಕ್ರಮ ಕೈಗೊಳ್ಳಲು ಸೂಚನೆ ನೀಡುತ್ತೇನೆ. ಬೆಂಗಳೂರಿನಲ್ಲಿ ಪೊಲೀಸ್ ಆಯುಕ್ತರು ಎಲ್ಲಾ ರೌಡಿಗಳನ್ನು ಮಾನಿಟರ್ ಮಾಡುತ್ತಿದ್ದಾರೆ. ಅದೇ ರೀತಿ ತುಮಕೂರಿನಲ್ಲೂ ಮಾಡುತ್ತೇವೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:00 pm, Sat, 11 November 23

ತಾಜಾ ಸುದ್ದಿ
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು