ಶಾರ್ಟ್​ ಸರ್ಕ್ಯೂಟ್​ನಿಂದ ಹೊತ್ತಿಉರಿದ ಬಾಲಕರ ವಿದ್ಯಾರ್ಥಿ ನಿಲಯ; ಕಿಟಕಿ, ಬಾಗಿಲು, 30ಕ್ಕೂ ಹೆಚ್ಚು ಬೆಡ್​ಗಳು ಸುಟ್ಟು ಭಸ್ಮ

ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ‌ ವೈ.ಎನ್.ಹೊಸಕೋಟೆಯಲ್ಲಿ ಶಾರ್ಟ್​ ಸರ್ಕ್ಯೂಟ್​ನಿಂದ ಬಾಲಕರ ವಿದ್ಯಾರ್ಥಿ ನಿಲಯ ಹೊತ್ತಿಉರಿದ ಘಟನೆ ನಡೆದಿದೆ. ಅದೃಷ್ಟವಶಾತ್ 15 ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಶಾರ್ಟ್​ ಸರ್ಕ್ಯೂಟ್​ನಿಂದ (Short Circuit) ಬಾಲಕರ ವಿದ್ಯಾರ್ಥಿ ನಿಲಯ ಹೊತ್ತಿಉರಿದ

ಶಾರ್ಟ್​ ಸರ್ಕ್ಯೂಟ್​ನಿಂದ ಹೊತ್ತಿಉರಿದ ಬಾಲಕರ ವಿದ್ಯಾರ್ಥಿ ನಿಲಯ; ಕಿಟಕಿ, ಬಾಗಿಲು, 30ಕ್ಕೂ ಹೆಚ್ಚು ಬೆಡ್​ಗಳು ಸುಟ್ಟು ಭಸ್ಮ
ಶಾರ್ಟ್​ ಸರ್ಕ್ಯೂಟ್​ನಿಂದ ಹೊತ್ತಿಉರಿದ ಬಾಲಕರ ವಿದ್ಯಾರ್ಥಿ ನಿಲಯ
Follow us
ಮಹೇಶ್ ಇ, ಭೂಮನಹಳ್ಳಿ
| Updated By: ಆಯೇಷಾ ಬಾನು

Updated on: Mar 23, 2024 | 1:14 PM

ತುಮಕೂರು, ಮಾರ್ಚ್.23: ಶಾರ್ಟ್​ ಸರ್ಕ್ಯೂಟ್​ನಿಂದ (Short Circuit) ಬಾಲಕರ ವಿದ್ಯಾರ್ಥಿ ನಿಲಯ ಹೊತ್ತಿಉರಿದ ಘಟನೆ ತುಮಕೂರು (Tumkur) ಜಿಲ್ಲೆಯ ಪಾವಗಡ ತಾಲೂಕಿನ‌ ವೈ.ಎನ್.ಹೊಸಕೋಟೆಯಲ್ಲಿ (Y.N.Hoskote) ನಡೆದಿದೆ. ಅದೃಷ್ಟವಶಾತ್ 15 ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಶಾರ್ಟ್​ ಸರ್ಕ್ಯೂಟ್​ನಿಂದ ಕಾಣಿಸಿಕೊಂಡ ಬೆಂಕಿಗೆ ವಸತಿ ನಿಲಯದ ಫ್ಯಾನ್​ಗಳು ಹಾಗೂ ಬೆಡ್​ಗಳು ಸುಟ್ಟು ಕರಕಲಾಗಿವೆ. ವಸತಿ ನಿಲಯದ ಕಿಟಕಿ ಬಾಗಿಲು ಸೇರಿದಂತೆ 30ಕ್ಕೂ ಹೆಚ್ಚು ಬೆಡ್​ಗಳು ಸುಟ್ಟು ಭಸ್ಮವಾಗಿವೆ.

ಮಧ್ಯರಾತ್ರಿ ಸುಮಾರು 1 ಗಂಟೆಗೆ ಬಾಲಕರ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ವಿದ್ಯಾರ್ಥಿಗಳು ಕೋಣೆಯಿಂದ ಹೊರಗಡೆ ಓಡಿ ಬಂದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕದಳ ಸಿಬ್ಬಂದಿ ಭೇಟಿ ನೀಡಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಸ್ಥಳಕ್ಕೆ ವೈ.ಎನ್. ಹೊಸಕೋಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವೈ.ಎನ್. ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ತುಮಕೂರು: ಕಾರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಶವಗಳ ಪತ್ತೆ ಪ್ರಕರಣ; ಮೂವರ ಗುರುತು ಪತ್ತೆ

ಕೇಬಲ್ ವೈರ್​ಗೆ ಸಿಲುಕಿ ನರ್ಸ್ ಬಲಿ

ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಇಪ್ಪಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ನರ್ಸ್ ಕೇಬಲ್ ವೈರ್​ಗೆ ಬಲಿಯಾಗಿದ್ದಾರೆ. ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಚಿಂಚಲಕಟ್ಟೆ ನಿವಾಸಿ ಲಕ್ಷ್ಮೀ ಬಾಯಿ ಜಾಧವ್‌ ಮೃತಪಟ್ಟಿದ್ದಾರೆ. ಕೆಲಸ ಮುಗಿಸಿ ಬೈಕ್‌ನಲ್ಲಿ ಮನೆಗೆ ಹೋಗುತ್ತಿದ್ದ ವೇಳೆ ದುರ್ಘಟನೆ ನಡೆದಿದೆ. ದಾರಿಯಲ್ಲಿ ಹಾದುಹೋಗಿದ್ದ ಕೇಬಲ್ ವೈರ್‌ಗೆ ವಿದ್ಯುತ್ ತಂತಿ ಸ್ಪರ್ಶದಿಂದ ಲಕ್ಷ್ಮೀ ಮೇಲೆ ಬಿದ್ದಿದೆ. ಬೈಕ್ ಸವಾರ ಲಕ್ಷ್ಮಣ್‌ ಗಂಭೀರವಾಗಿ ಗಾಯಗೊಂಡಿದ್ದಾರೆ.

ದೇವಸ್ಥಾನದಲ್ಲಿ ಹುಂಡಿ ಕಳ್ಳತನ

ತುಮಕೂರು ಗ್ರಾಮಾಂತರದ ಹೆಬ್ಬೂರಿನ ಪನ್ನಸಂದ್ರ ಗ್ರಾಮದ ಇತಿಹಾಸ ಪ್ರಸಿದ್ಧ ಶ್ರೀ ಲಕ್ಷ್ಮಿನರಸಿಂಹಸ್ವಾಮಿ ದೇವಸ್ಥಾನದಲ್ಲಿ ಹುಂಡಿಯಲ್ಲಿನ ಹಣ ಕಳ್ಳತನವಾಗಿದೆ. ಸುಮಾರು 2 ಲಕ್ಷ ಹುಂಡಿಯಲ್ಲಿದ್ದ ಹಣ ಹಾಗೂ 250 ಗ್ರಾಂ ಚಿನ್ನದ ಸರ ಕಳವಾಗಿದೆ. ಘಟನೆಯಿಂದ ಗ್ರಾಮಸ್ಥರಲ್ಲಿ ಆತಂಕ, ತೋಟದ ಮನೆಗಳ ಮಂದಿಗೆ ಭಯದ ವಾತಾವರಣ ನಿರ್ಮಾಣವಾಗಿದೆ. ಹೆಬ್ಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಬ್ಬೂರು ಪೊಲೀಸ್ ಠಾಣೆಯ ಕಿಶೋರ್, ಹೇಮಂತ್ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ