ತುಮಕೂರು ಜಿಲ್ಲಾ ಕಾರಾಗೃಹದಲ್ಲಿ ಲಂಚಾವತಾರ: ಖೈದಿಗಳನ್ನು ನೋಡಲು ಬಂದವರಿಂದ ಹಣ ಪಡೆದ ಸಿಬ್ಬಂದಿ; ಅಸಮರ್ಪಕ ಊಟ ವಿತರಣೆ

ತುಮಕೂರು ಜಿಲ್ಲಾ ಕಾರಾಗೃಹಕ್ಕೆ ಖೈದಿಗಳನ್ನು ನೋಡಲು ಬಂದವರಿಂದ, ಜೈಲಿನ ಸಿಬ್ಬಂದಿ ಹಣ ಪಡೆಯುತ್ತಿರುವ ಆರೋಪ ಕೇಳಿಬಂದಿದೆ.

ತುಮಕೂರು ಜಿಲ್ಲಾ ಕಾರಾಗೃಹದಲ್ಲಿ ಲಂಚಾವತಾರ: ಖೈದಿಗಳನ್ನು ನೋಡಲು ಬಂದವರಿಂದ ಹಣ ಪಡೆದ ಸಿಬ್ಬಂದಿ; ಅಸಮರ್ಪಕ ಊಟ ವಿತರಣೆ
ತುಮಕೂರು ಜಿಲ್ಲಾ ಕಾರಾಗೃಹದಲ್ಲಿ ಲಂಚಾವತಾರ
Edited By:

Updated on: Jan 18, 2023 | 10:29 AM

ತುಮಕೂರು: ತುಮಕೂರು ಜಿಲ್ಲಾ ಕಾರಾಗೃಹಕ್ಕೆ (Tumkur Central jail) ಖೈದಿಗಳನ್ನು (Prisoner) ನೋಡಲು ಬಂದವರಿಂದ, ಜೈಲಿನ ಸಿಬ್ಬಂದಿ ಹಣ ಪಡೆಯುತ್ತಿರುವ ಆರೋಪ ಕೇಳಿಬಂದಿದೆ. ಇಲ್ಲಿನ ಅವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿಗಳಿಗೂ ಸೇರಿದಂತೆ ಹಲವರಿಗೆ ಬಂಧಿಖಾನೆ ನಿವಾಸಿಗಳು ಪ್ರತದ ಮೂಲಕ ದೂರು ನೀಡಿದ್ದಾರೆ. ಸುಮಾರು 40 ಕ್ಕೂ ಹೆಚ್ಚು ಬಂಧಿಖಾನೆ ನಿವಾಸಿಗಳು ಜಿಲ್ಲಾಧಿಕಾರಿ, ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಎ.ಡಿ.ಜಿ.ಪಿ, ಲೋಕಾಯುಕ್ತ, ಮಾನವಹಕ್ಕುಗಳ ಆಯೋಗ ಹಾಗೂ ಗೃಹಸಚಿವರಿಗೆ 4 ರಿಂದ 5 ಪುಟಗಳಲ್ಲಿ ದೂರು ನೀಡಿದ್ದಾರೆ.

ಸಂಬಂಧಿಕರ ಬಳಿ ಹಣ ಪೀಕುವ ಜೈಲಿನ ಸಿಬ್ಬಂದಿ ವಿರುದ್ಧ ವಿಚಾರಣಾಧೀನ ಖೈದಿಗಳ ಸಂಬಂಧಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತುಮಕೂರು ಜಿಲ್ಲಾ ಕಾರಾಗೃಹದಲ್ಲಿ ಸಮರ್ಪಕವಾಗಿ ಊಟ ನೀಡುತ್ತಿಲ್ಲವೆಂದು ಕಳೆದ ವಾರ ಜೈಲಿನಲ್ಲಿ ವಿಚಾರಣಾಧಿನ ಖೈದಿಗಳು ಪ್ರತಿಭಟನೆ ನಡೆಸಿದ್ದರು. ಹಿರಿಯ ಅಧಿಕಾರಿಗಳು ಪರಿಶೀಲನೆಗೆ ಬಂದ ವೇಳೆ ದೂರು ನೀಡದಂತೆ ಖೈದಿಗಳಿಗೆ ಜಿಲ್ಲಾ ಕಾರಾಗೃಹದ ಅಧೀಕ್ಷಕಿ ಶಾಂತಶ್ರೀ ತಾಕೀತು ಮಾಡಿದ್ದರಂತೆ. ಇದರಿಂದ ಅಸಮಾಧಾನಗೊಂಡ ಬಂಧಿಖಾನೆ ನಿವಾಸಿಗಳು ಅಧೀಕ್ಷಕಿ ವಿರುದ್ಧ ಅಸಮಾಧಾನ ಹೊರಹಾಕಿ ಕಾನೂನು ಸೇವಾ ಪ್ರಾಧಿಕಾರಕ್ಕೆ ದೂರು ನೀಡಿದ್ದಾರೆ.

ಇದನ್ನೂ ಓದಿ: ಎಲೆಕ್ಟ್ರಾನಿಕ್ ಸಿಟಿ ಆರ್​ಟಿಓ ಕಚೇರಿಯಲ್ಲಿ ಅಕ್ರಮ: 3 ದಿನಗಳಲ್ಲಿ ಬರೋಬ್ಬರಿ 2504 ಡಿಎಲ್​ ಮಾರಾಟ

ಪ್ರತಿಭಟನೆ ಕಾವು ಹೆಚ್ಚಾದ ಹಿನ್ನೆಲೆ ಸ್ಥಳಕ್ಕೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ  ಕಾರ್ಯದರ್ಶಿ ನೂರುನ್ನಿಸಾ ಭೇಟಿ ನೀಡಿ ಪರಿಶೀಲಿಸಿದರು. ಈ ವೇಳೆ ಕಾರಾಗೃಹದಲ್ಲಿ ಇಷ್ಟೆಲ್ಲ ಅಕ್ರಮ ನಡೆಯುತ್ತಿದ್ದರು ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆಯಾ ಎಂಬ ಪ್ರಶ್ನೆ ಮಾಡಿದ್ದಾರೆ. ಸರ್ಕಾರದ ಮಟ್ಟದಲ್ಲಿ ಪ್ರಾಮಾಣಿಕ ತನಿಖೆ ನಡೆಸಿ ಕಾನೂನು ಕ್ರಮ ಜರುಗಿಸುವಂತೆ ಖೈದಿಗಳು ಒತ್ತಾಯಿಸಿದ್ದಾರೆ. ಅಲ್ಲದೇ ಈ ಬಗ್ಗೆ ಗೃಹ ಸಚಿವರು ಎಚ್ಚತ್ತು ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಖೈದಿಗಳು ಒತ್ತಾಯಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ